ಬಿಬಿಎಂಪಿ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟ ಕಮಿಷನರ್, ಏನದು

ಬಿಬಿಎಂಪಿಯ (ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ) ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಇದೀಗ ಮತ್ತೊಮ್ಮೆ ಖಡಕ್ ವಾರ್ನಿಂಗ್‌ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಹಾಗೂ ಕಾರ್ಯವೈಖರಿಯನ್ನು ಸುಧಾರಿಸಿಕೊಳ್ಳುವಂತೆ ತುಷಾರ್‌ ಗಿರಿನಾಥ್‌ ವಾರ್ನ್‌ ಮಾಡಿದ್ದಾರೆ. ನಗರದಲ್ಲಿರುವ ಬಾಕಿ ರಸ್ತೆಗುಂಡಿಗಳನ್ನು ಮುಚ್ಚುವುದು ಸೇರಿದಂತೆ ವಿವಿಧ ಟಾಸ್ಕ್‌ಗಳನ್ನು ನೀಡಿದ್ದಾರೆ.

ಬೆಂಗಳೂರಿನಲ್ಲಿರುವ ಎಲ್ಲಾ ಮೇಲ್ಸೇತುವೆ ಹಾಗೂ ಅಂಡರ್‌ಪಾಸ್‌ಗಳನ್ನು ಸರಿಯಾಗಿ ನಿರ್ವಹಿಸಬೇಕು ಎಂದು ಸೂಚಿಸಿದ್ದಾರೆ.ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ವೀಡಿಯೋ ಸಂವಾದದ ಮೂಲಕ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ನಗರದಲ್ಲಿ ಪಾಲಿಕೆ ಒಡೆತನದಲ್ಲಿರುವ ಎಲ್ಲಾ ಮೇಲುಸೇತುವೆ ಹಾಗೂ ಕೆಳಸೇತುವೆಗಳನ್ನು ಪರಿಶೀಲನೆ ನಡೆಸಿ ಸರಿಯಾಗಿ ನಿರ್ವಹಣೆ ಮಾಡಬೇಕೆಂದು ಎಂದು ಹೇಳಿದರು.

BBMP commissioner gaven warning to the BBMP officials

ಸ್ಕೈವಾಕ್ ಗಳ ನಿರ್ವಹಣೆ: ಬೆಂಗಳೂರಿನಲ್ಲಿರುವ ಸ್ಕೈವಾಕ್(ಪಾದಚಾರಿ ಮೇಲುಸೇತುವೆ)ಗಳಲ್ಲಿ ಬರುವ ಲಿಫ್ಟ್‌ಗಳು ಎಲ್ಲ ಸಮಯದಲ್ಲೂ ಸಮರ್ಪಕವಾಗಿ ಕೆಲಸ ಮಾಡುತ್ತಿದೆಯೇ ಎಂದು ನೋಡಿಕೊಳ್ಳಬೇಕು. ಜೊತೆಗೆ ಎಲ್ಲಾ ಸ್ಕೈವಾಕ್‌ಗಳ ಬಳಿ ಸ್ವಚ್ಛತೆ ಕಾಪಾಡಬೇಕು. ಪಾದಚಾರಿಗಳ ಓಡಾಟಕ್ಕೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕೆಂದು ಎಂದು ಕಮಿಷನರ್‌ ಹೇಳಿದ್ದಾರೆ.

ಬಾಕಿ ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚಿ: ಪಾಲಿಕೆ ವ್ಯಾಪ್ತಿಯ ಎಲ್ಲಾ 8 ವಲಯಗಳಲ್ಲಿ ನಿರಂತರವಾಗಿ ರಸ್ತೆ ಗುಂಡಿಗಳನ್ನು ಮುಚ್ಚಲಾಗುತ್ತಿದೆ. ಆಯಾ ವಲಯಗಳಲ್ಲಿ ಎಂಜಿನಿಯರ್‌ಗಳು ರಸ್ತೆಗುಂಡಿಗಳನ್ನು ಮುಚ್ಚಲಾಗುತ್ತಿದೆ. ಆದರೆ, ಬಾಕಿ ಇರುವ ರಸ್ತೆಗುಂಡಿಗಳನ್ನು ಸಹ ಸಾಧ್ಯವಾದಷ್ಟ ಬೇಗ ಮುಚ್ಚಬೇಕು ಎಂದು ನಿರ್ದೇಶಿಸಿದ್ದಾರೆ.

ಆಸ್ತಿ ತೆರಿಗೆ ಸಂಗ್ರಹ: ಪಾಲಿಕೆ ವ್ಯಾಪ್ತಿಯಲ್ಲಿ ಹೆಚ್ಚು ಆಸ್ತಿ ಬಾಕಿ ಉಳಿಸಿಕೊಂಡಿರುವವರಿಂದ ಆಸ್ತಿ ತೆರಿಗೆ ಸಂಗ್ರಹಿಸಬೇಕು. ನವೆಂಬರ್ ತಿಂಗಳಾಂತ್ಯದವರೆಗೆ ಒಂದು ಬಾರಿ ಪರಿಹಾರ ಯೋಜನೆಯನ್ನು ವಿಸ್ತಿರಿಸಲಾಗಿದೆ. ಬಾಕಿ ಆಸ್ತಿ ತೆರಿಗೆ ಪಾವತಿಸಬೇಕಿರುವವರಿಂದ ಕೂಡಲೇ ಬಾಕಿ ಆಸ್ತಿ ತೆರಿಗೆಯನ್ನು ಪಾವಸಿಕೊಳ್ಳಲು ಕ್ರಮ ತೆಗೆದುಕೊಳ್ಳಬೇಕು ಎಂದು ಬಿಬಿಎಂಪಿಯ ವಿಶೇಷ ಆಯುಕ್ತರಿಗೆ ಹೇಳಿದರು.

ಕಸದ ಸಮಸ್ಯೆ ಬಗೆಹರಿಸಿ: ನಗರದಲ್ಲಿ ರಸ್ತೆ ಬದಿಯಲ್ಲಿ ಕಸದ ಸಮಸ್ಯೆಯ ಬಗ್ಗೆ ವರದಿಯಾಗಿದೆ. ಬೆಂಗಳೂರನ ರಸ್ತೆಬದಿ, ಪಾದಾಚರಿ ಮಾರ್ಗ, ಖಾಲಿ ಜಾಗಗಳಲ್ಲಿ ಕಸ ಸುರಿಯುವ ಸ್ಥಳ(ಬ್ಲಾಕ್ ಸ್ಪಾಟ್ಸ್)ಗಳನ್ನು ಪಟ್ಟಿ ಮಾಡಿ ಅವುಗಳನ್ನು ಸಹ ಕೂಡಲೇ ಸ್ವಚ್ಛ ಮಾಡಿ ಮತ್ತೆ ಬ್ಲಾಕ್ಸ್ ಸ್ಪಾಟ್ಸ್ ಗಳು ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕು. ಬೆಂಗಳೂರಿನ ರಸ್ತೆ ಬದಿ ಕಸ ಸುರಿಯುವುದರಿಂದ ನಗರ ಸೌಂದರ್ಯ ಹಾಳಾಗುತ್ತಿದೆ. ಈ ಬಗ್ಗೆ ಬೆಂಗಳೂರಿನ ಎಲ್ಲ ವಲಯ ವ್ಯಾಪ್ತಿಯಲ್ಲಿಯೂ ಸೂಕ್ತ ಕ್ರಮ ತಗೆದುಕೊಳ್ಳಬೇಕು. ಅಲ್ಲದೇ ಸಾರ್ವಜನಿಕರು ಸಹ ಅರಿವು ಮೂಡಿಸುವ ಕೆಲಸ ಮಾಡಬೇಕೆಂದು ಸೂಚನೆ ನೀಡಿದರು.

ಬೀದಿ ದಿಪಗಳ ನಿರ್ವಹಣೆ ಮಾಡಿ: ನಗರದಲ್ಲಿ ಬೀದಿ ದೀಪಗಳ ನಿರ್ವಹಣೆಯನ್ನು ಸರಿಯಾಗಿ ಮಾಡಬೇಕು. ನಗರ ಪ್ರಮುಖ ರಸ್ತೆ ಗಳಿ, ಮೇಲುಸೇತುವೆಗಳಲ್ಲಿ ಬೀದಿ ದೀಪಗಳ ನಿರ್ವಹಣೆಯನ್ನು ಸರಿಯಾಗಿ ಮಾಡಬೇಕೆಂದು ಸೂಚಿಸಿದರು.ವಿಡಿಯೋ ಸಂವಾದದಲ್ಲಿ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ. ಕೆ. ಹರೀಶ್ ಕುಮಾರ್, ಎಲ್ಲಾ ವಲಯ ಆಯುಕ್ತರು ಇದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+