ಬೆಂಗಳೂರು: ಅತೀವೃಷ್ಠಿ ತಡೆಗೆ ಜಲಾವೃತ ಪ್ರದೇಶ ಗುರುತಿಸಿ ಕ್ರಮ ಕೈಗೊಳ್ಳಿ: ಬಿಬಿಎಂಪಿ
ಬೆಂಗಳೂರು, ಏಪ್ರಿಲ್ 05: ಬೆಂಗಳೂರಿನಲ್ಲಿ ಮಳೆಗಾಲದ ವೇಳೆ ಎಲ್ಲೆಂದರದಲ್ಲಿ ನೀರು ತುಂಬಿಕೊಂಡು ಸಂಚಾರಕ್ಕೆ, ಸಾರ್ವಜನಿಕರ ವಸತಿಗೆ ತೊಂದರೆ ಆಗುತ್ತದೆ. ಎರಡು ದಿನದಿಂದ ಸುರಿದ ಮಳೆಗೆ ವೈಟ್‌ಫಿಲ್ಡ್ ಮೆಟ್ರೋ ನಿಲ್ದಾಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಅವಾಂತರ ಸೃಷ್ಟಿಯಾಗಿದ್ದವು. ಈ ಸಂಬಂಧ ಎಚ್ಚೆತ್ತುಕೊಂಡ ಬಿಬಿಎಂಪಿ ಬುಧವಾರ ಮಹತ್ವ ಸಭೆ ನಡೆಸಿದೆ.
ಸದ್ಯ ಪೂರ್ವ ಮುಂಗಾರು ಮಳೆ ಆರಂಭಿಕ ಹಂತದಲ್ಲಿದೆ. ಮುಂದಿನ ಮಳೆಗಾಲದಲ್ಲಿ ಸಮರ್ಪಕವಾಗಿ ಅತೀವೃಷ್ಠಿ ಪರಿಸ್ಥಿತಿ ಎದುರಿಸುವ ಸಂಬಂಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನೇತೃತ್ವದಲ್ಲಿ ಪೂರ್ವ ಸಿದ್ಧತಾ ಸಭೆ ಜರುಗಿತು. ಈ ವೇಳೆ ಆಯುಕ್ತರು ನೀಡಿದ ಮಹತ್ವದ ಸೂಚನೆಗಳು ಏನು ತಿಳಿಯಿರಿ.

ಸಭೆಯಲ್ಲಿ ಮಾತನಾಡಿದ ಮುಖ್ಯ ಆಯುಕ್ತರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಜಲಾವೃತವಾಗುವ ಸೂಕ್ಷ್ಮ ಪ್ರದೇಶಗಳಲ್ಲಿ ಕೂಡಲೆ ಅಗತ್ಯ ಕ್ರಮಗಳನ್ನು ಕೈಗೊಂಡು ಎಲ್ಲಿಯೂ ನೀರು ನಿಲ್ಲದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಒಟ್ಟು 94 ಪ್ಯಾಕೇಜ್ ಗಳಲ್ಲಿ 512 ಕಡೆ ರಾಜಕಾಲುವೆ ನಿರ್ಮಾಣದ ಕಾಮಗಾರಿಗಳು ಪ್ರಗತಿಯಲ್ಲಿದೆ. ಆದಷ್ಟು ತ್ವರಿತಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು.
ಅನ್‌ಲೈನ್ಡ್ ಏರಿಯಾ (ಕಚ್ಚಾ ಡ್ರೈನ್) ಗಳಲ್ಲಿ ಆದ್ಯತೆಯ ಮೇರೆಗೆ ಹೂಳನ್ನು ತೆಗೆಯಬೇಕು. ಪ್ರಾಥಮಿಕ ರಾಜಕಾಲುವೆ, ದ್ವಿತೀಯ ರಾಜಕಾಲುವೆ, ರಸ್ತೆ ಬದಿಯ ಶೋಲ್ಡರ್ ಡ್ರೈನ್ ಗಳಲ್ಲಿ ವಾರ್ಷಿಕ ನಿರ್ವಹಣೆಯ ಗುತ್ತಿಗೆದಾರರ ಮೂಲಕ ಹೂಳನ್ನು ತೆರವುಗೊಳಿಸಬೇಕು ಎಂದು ಅವರು ಸೂಚನೆ ನೀಡಿದರು.
ನಗರದ ಪ್ರಮುಖ ರಸ್ತೆಗಳಲ್ಲಿ ನೀರು ನಿಲ್ಲುತ್ತಿದ್ದ, ಅಂತವುಗಳನ್ನು ಗುರುತಿಸಿ ನೀರು ನಿಲ್ಲದಂತೆ ಕ್ರಮವಹಿಸಿ. ಅದಕ್ಕಾಗಿ ರಸ್ತೆ ಬದಿಯ ಶೋಲ್ಡರ್ ಡ್ರೈನ್ ಗಳನ್ನು ಸರಿಯಾಗಿ ನಿರ್ವಹಣೆ ಮಾಡಬೇಕು. ರಸ್ತೆ ಮೇಲೆ ಬಿದ್ದಂತಹ ನೀರು ಸರಾಗವಾಗಿ ಕಾಲುವೆಗಳಿಗೆ ಹರಿದು ಹೋಗುವಂತೆ ಮಾಡಬೇಕೆಂದರು.

24ಗಂಟೆಯು ನಿಯಂತ್ರಣಾ ಕೊಠಡಿ ಕಾರ್ಯ
ಮುಂಬರುವ ಮಳೆಗಾಲಕ್ಕೆ ಸಂಬಂಧಿಸಿದಂತೆ ಆಯಾ ವಲಯ ವ್ಯಾಪ್ತಿಯಲ್ಲಿ ನಿಯಂತ್ರಣ ಕೊಠಡಿಗಳಿದ್ದು, ಎಲ್ಲಾ ನಿಯಂತ್ರಣ ಕೊಠಡಿಗಳಲ್ಲಿ ದಿನದ 24 ಗಂಟೆಯೂ ಇಂಜಿಯರ್ ಗಳು ಕಾರ್ಯನಿರ್ವಹಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಮಳೆಗಾಲದ ವೇಳೆ ಅಗತ್ಯವಿರುವ ಗ್ಯಾಂಗ್ಸ್ ಗಳನ್ನು ಸಿದ್ದವಾಗಿಟ್ಟುಕೊಳ್ಳಬೇಕು. ಜೊತೆಗೆ ಪಾಲಿಕೆ, ಜಲಮಂಡಳಿ ಹಾಗೂ ಬೆಸ್ಕಾಂ ಅಧಿಕಾರಿಗಳನ್ನು ಕೂಡಾ ನಿಯೋಜಿಸಿ ಎಂದು ಹೇಳಿದರು.
ಸೂಕ್ಷ್ಮ ಪ್ರದೇಶಗಳ ಮೇಲೆ ನಿಗಾ ಇಡಲು ಸೂಚನೆ
ಬೆಂಗಳೂರಿನಲ್ಲಿ ಮಳೆಗಾಲದಲ್ಲಿ ಭಾರಿ ಪ್ರಮಾಣದಲ್ಲಿ ಜಲಾವೃತವಾಗುವ ಸೂಕ್ಷ್ಮ ಪ್ರದೇಶಗಳ ಮೇಲೆ ಹೆಚ್ಚು ಗಮನ ಇಡಬೇಕು. ಈ ಸಂಬಂಧ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಜೊತೆಗೆ ಸೂಕ್ಷ್ಮ ಪ್ರದೇಶಗಳ ಮೇಲೆ ಗಮನಹರಿಸುವ ವಿಚಾರವಾಗಿ ಒಡಂಬಡಿಕೆ ಮಾಡಿಕೊಳ್ಳಲಾಗುತ್ತಿದೆ.
ನಗರದಲ್ಲಿ 200 ಸೂಕ್ಷ್ಮ ಪ್ರದೇಶಗಳ ಪಟ್ಟಿಯನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರಕ್ಕೆ ನೀಡಿದ್ದು, ಆ 200 ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಎಷ್ಟಿದೆ ಎಂಬುದರ ಮಾಹಿತಿ ಮುಂಚಿತವಾಗಿಯೇ ಲಭ್ಯವಾಗಲಿದೆ. ಈ ಪೈಕಿ ಸೂಕ್ಷ್ಮ ಪ್ರದೇಶಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಪರಿಶೀಲನಾ ಸಭೆ ನಡೆಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.

ಶಿಲ್ಟ್ ಅಂಡ್ ಟ್ರ್ಯಾಕ್ಟರ್ ಬದಲು ಶಿಲ್ಟ್ ಅಂಡ್ ಟ್ರಕ್ ನಿಯೋಜನೆ
ಬಿಬಿಎಂಪಿ ವ್ಯಾಪ್ತಿಯ ರಸ್ತೆ ಬದಿ, ಪಾದಚಾರಿ ಮಾರ್ಗಗಳಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಆಯಾ ವಾರ್ಡ್ ಗಳಿಗೆ ಶಿಲ್ಟ್ ಅಂಡ್ ಟ್ರ್ಯಾಕ್ಟರ್ ಗಳನ್ನು ನಿಯೋಜನೆ ಮಾಡಲಾಗಿತ್ತು. ಇದೀಗ ಟ್ರ್ಯಾಕ್ಟರ್ ಬದಲು ಟ್ರಕ್ ಗಳನ್ನು ಬಳಸಿಕೊಳ್ಳಲು ಕ್ರಮ ವಹಿಸಲಾಗುತ್ತಿದೆ. ಈ ಸಂಬಂಧ ವಿಧಾನಸಭೆ ಚುನಾವಾಣೆಯ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ನೀತಿ ಸಂಹಿತೆ ಪೂರ್ಣಗೊಂಡ ಬಳಿಕ ಹೊಸ ಟೆಂಡರ್ ಕರೆದು ಎಲ್ಲಾ ವಾರ್ಡ್ ಗಳಿಗೂ ಶಿಲ್ಟ್ ಅಂಡ್ ಟ್ರಕ್ ಗಳ ನಿಯೋಜನೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ವಲಯವಾರು ಮಳೆ ಮಾಹಿತಿ ಇಲ್ಲಿ ಲಭ್ಯ
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವೆಬ್ ಸೈಟ್ www.varunamitra.karnataka.gov.in ಲಿಂಕ್ ಗೆ ಭೇಟಿ ನೀಡುವ ಮೂಲಕ ನಗರದಲ್ಲಿ ಬಿದ್ದ ಮಳೆ ಬಗ್ಗೆ ಪೂರ್ಣ ಮಾಹಿತಿ ಪಡೆಯಬಹುದು. ಇಲ್ಲಿನ ಹವಾಮಾನ ಡ್ಯಾಶ್ ಬೋರ್ಡ್ ನಲ್ಲಿ ನಿನ್ನೆಯ ಹವಾಮಾನ, ಇಂದಿನ ಹವಾಮಾನ ಹಾಗೂ ಮುಂದಿನ ಹವಾಮಾನದ ಮುನ್ಸೂಚನೆಯ ಮಾಹಿತಿ ಲಭ್ಯವಾಗಲಿದೆ. ಅಲ್ಲದೇ ವಲಯವಾರು ಹಾಗೂ ವಾರ್ಡ್ ವಾರು ಮಾಹಿತಿ ದೊರೆಯಲಿದೆ. ಇದಲ್ಲದೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಅಧಿಕೃತ ವೆಬ್ ಸೈಟ್ www.ksndmc.org/report/Reports ನಲ್ಲಿ ನಿತ್ಯದ ವರದಿ ಪಡೆಯಬಹುದು ಎಂದು ವಿವರಿಸಿದರು.
ಸಭೆಯಲ್ಲಿ ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ಕೋಶದ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಡಾ. ಮನೋಜ್ ರಾಜನ್, ಬಿಬಿಎಂಪಿ ಅಧಿಕಾರಿಗಳು ಮತ್ತಿತರರು ಪಾಲ್ಗೊಂಡಿದ್ದರು.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು








Click it and Unblock the Notifications