ಬಿಬಿಎಂಪಿ ಆಯುಕ್ತರಾಗಿ ಮಂಜುನಾಥ್ ಪ್ರಸಾದ್ ಮರು ನೇಮಕ
ಬೆಂಗಳೂರು, ಜೂನ್ 29 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಎಂ.ಮಹೇಶ್ವರ ರಾವ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಂಜುನಾಥ ಪ್ರಸಾದ್ ಅವರನ್ನು ಆಯುಕ್ತರನ್ನಾಗಿ ಮರು ನೇಮಕ ಮಾಡಲಾಗಿದೆ.
ಬಿಬಿಎಂಪಿ ಆಯುಕ್ತರಾಗಿದ್ದ ಎಂ.ಮಹೇಶ್ವರ ರಾವ್ ಅವರನ್ನು ಕೃಷಿ ಹಾಗೂ ರೇಷ್ಮೆ ಇಲಾಖೆ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಕರ್ನಾಟಕ ವಿಧಾನಸಭೆ ಚುನಾವಣೆ 2018ರ ಸಮಯದಲ್ಲಿ ಮಹೇಶ್ವರ ರಾವ್ ಅವರನ್ನು ಬಿಬಿಎಂಪಿ ಆಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು.
ಕರ್ನಾಟಕ ವಿಧಾನಸಭೆ ಚುನಾವಣೆಗೆ 8 ದಿನ ಬಾಕಿ ಇರುವಾಗ ಬಿಬಿಎಂಪಿ ಆಯುಕ್ತರನ್ನು ವರ್ಗಾವಣೆ ಮಾಡಲಾಗಿತ್ತು. ಚುನಾವಣಾ ಆಯೋಗದ ಆದೇಶದಂತೆ ಮಂಜುನಾಥ ಪ್ರಸಾದ್ ಅವರನ್ನು ವರ್ಗಾವಣೆ ಮಾಡಿ, ಮಹೇಶ್ವರ ರಾವ್ ಅವರನ್ನು ಆಯುಕ್ತರನ್ನಾಗಿ ನೇಮಿಸಲಾಗಿತ್ತು.

ಕರ್ನಾಟಕ ಸರ್ಕಾರ ಜೂನ್ 28ರಂದು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮಂಜುನಾಥ್ ಪ್ರಸಾದ್ ಅವರನ್ನು ಬಿಬಿಎಂಪಿ ಆಯುಕ್ತರನ್ನಾಗಿ ಮರು ನೇಮಕ ಮಾಡಲಾಗಿದೆ.
2016ರ ಏಪ್ರಿಲ್ 22ರಂದು ಮಂಜುನಾಥ ಪ್ರಸಾದ್ ಅವರನ್ನು ಬಿಬಿಎಂಪಿ ಆಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು. ಮೇ 30ರಂದು ಅವರನ್ನು ವರ್ಗಾವಣೆ ಮಾಡಲಾಗಿತ್ತು. ಈಗ ಪುನಃ ಅವರನ್ನು ಆಯುಕ್ತರನ್ನಾಗಿ ಮರು ನೇಮಕ ಮಾಡಲಾಗಿದೆ.












Click it and Unblock the Notifications