Breaking: BBMP ಆಯುಕ್ತ ತುಷಾರ್ ಗಿರಿನಾಥ್ ಆರೋಗ್ಯದಲ್ಲಿ ಏರುಪೇರು
ಬೆಂಗಳೂರು, ಡಿ. 01: ರಾಜ್ಯದಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿರುವ ಮತದಾರರ ಮಾಹಿತಿ ಕಳ್ಳತನ ಪ್ರಕರಣದಲ್ಲಿ ಹೆಸರು ಕೇಳಿಬಂದ ಬೆನ್ನಲ್ಲೆ, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದೆ.
ಶನಿವಾರದಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಜ್ವರ ಜಾಸ್ತಿಯಾದ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Voter Data Theft: ಬಿಬಿಎಂಪಿ ಮುಖ್ಯ ಆಯುಕ್ತರನ್ನು ವರ್ಗಾಯಿಸಿದರೆ ಉಗ್ರ ಪ್ರತಿಭಟನೆ: ಸರ್ಕಾರಕ್ಕೆ ಎಚ್ಚರಿಕೆ
ಅವರನ್ನು ನಗರದ ಕನ್ನಿಂಗ್ಹಾಮ್ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು, ಚಿಲುಮೆ ಸಂಸ್ಥೆಯಿಂದ ನಡೆದ ಮತದಾರರ ದತ್ತಾಂಶ ಕಳ್ಳತನ ಪ್ರಕರಣದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ಮೇಲೂ ಗಂಭಿರ ಆರೋಪಗಳು ಕೇಳಿ ಬಂದಿವೆ. ಈ ಹಿನ್ನೆಲೆ ಅವರನ್ನು ವರ್ಗಾವಣೆ ಮಾಡಲಾಗುವುದು ಎಂಬ ವದಂತಿ ಹಬ್ಬಿದೆ.
ವದಂತಿ ಬೆನ್ನಲ್ಲೆ ತುಷಾರ್ ಗಿರಿನಾಥ್ ಅವರನ್ನು ವರ್ಗಾವಣೆ ಮಾಡಿದರೆ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ಎಚ್ಚರಿಕೆ ನೀಡಿದೆ. ಈ ಕುರಿತು ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದೆ.
ಈಗಾಗಲೇ ಪ್ರಕರಣ ಸಂಬಂಧಿಸಿದಂತೆ ಕೇಂದ್ರ ಚುನಾವಣೆ ಆಯೋಗ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶಿಸಿದೆ. ಹೀಗಾಗಿ ತುಷಾರ್ ಗಿರಿನಾಥ್ ಅವರನ್ನು ವರ್ಗಾವಣೆ ಮಾಡಬಾರದು, ಮತ್ತು ವರ್ಗವಣೆ ಮಾಡಿರುವ ಇಬ್ಬರ ಅಧಿಕಾರಿಗಳ ಆದೇಶವನ್ನು ರದ್ದುಗೊಳಿಸಬೇಕು ಎಂದು ಸಂಘ ಆಗ್ರಹಿಸಿದೆ.
ಜೊತೆಗೆ ಪ್ರಕರಣ ಸಂಬಂಧ ಬಿಬಿಎಂಪಿಯ ನಾಲ್ವರು ಅಧಿಕಾರಿಗಳ ಅಮಾನತು ಮತ್ತು ಬಂಧನ ಕಾನೂನು ಬಾಹಿರವಾಗಿದೆ ಎಂದು ಆರೋಪಿಸಿದೆ.
ಇತ್ತ, ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರ ಅಮಾನತಿಗೆ ಕಾಂಗ್ರೆಸ್ ಆಗ್ರಹಿಸಿದೆ. ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.