Garbage Tax: ಬೆಂಗಳೂರಿಗರೇ ಗಮನಿಸಿ.. ಇನ್ಮುಂದೆ ಕಸ ಹಾಕುವುದಕ್ಕೂ ನೀಡಬೇಕು ಸೇವಾ ಶುಲ್ಕ!
ಬೆಂಗಳೂರು, ಜೂನ್. 12: ನಗರದಲ್ಲಿ ಈಗಾಗಲೇ ಕಸ ತೆಗೆದುಕೊಂಡು ಹೋಗುವ ಪೌರಕಾರ್ಮಿಕರಿಗೆ ಹಲವರು ಹಣ ನೀಡುತ್ತಿರುತ್ತಾರೆ. ಕೆಲವರು ಬಾಯಿ ಬಿಟ್ಟು ಕೇಳುತ್ತಾರೆ ಮತ್ತೆ ಕೆಲವರು ಕೇಳುವುದಿಲ್ಲ. ಆದರೆ, ಇನ್ಮುಂದೆ ನೀವು ಡೈರೆಕ್ಟ್ ಆಗಿಯೇ ಸೇವಾ ಶುಲ್ಕ ಕಟ್ಟಬೇಕಾಗುತ್ತದೆ.
ಹೌದು... ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ರತಿ ಮನೆಗೆ ತಿಂಗಳಿಗೆ 100 ರೂಪಾಯಿಗಳ ಘನತ್ಯಾಜ್ಯ ಸೇವಾ ಶುಲ್ಕವನ್ನು ವಿಧಿಸಲು ಯೋಚಿಸುತ್ತಿದೆ. ಹೀಗಾಗಿ ಬೆಂಗಳೂರಿನ ನಿವಾಸಿಗಳು ಶೀಘ್ರದಲ್ಲೇ ತಮ್ಮ ಬಿಲ್‌ಗಳಲ್ಲಿ ಹೆಚ್ಚುವರಿ ಶುಲ್ಕವನ್ನು ನೀಡಬೇಕಾಗುತ್ತದೆ.

ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿ ಲಿಮಿಟೆಡ್ (BSWML) ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ ಪ್ರಸ್ತಾವನೆಯಲ್ಲಿ ನಗರದಲ್ಲಿ ಕಸ ವಿಲೇವಾರಿಯಲ್ಲಿ ಹೆಚ್ಚುತ್ತಿರುವ ಸವಾಲನ್ನು ಎದುರಿಸಲು ಈ ಸೇವಾ ಶುಲ್ಕವನ್ನು ಜಾರಿ ಮಾಡಲು ಯೋಚಿಸುತ್ತಿದೆ. ಈಗಾಗಲೇ ದೇಶದ ಹಲವು ಭಾಗಗಳಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಲಾಗಿದೆ.
ದೇಶದಾದ್ಯಂತ ಇತರ ಪ್ರಮುಖ ನಗರಗಳಲ್ಲಿ ಸೇವಾ ಶುಲ್ಕ ವ್ಯವಸ್ಥೆಯನ್ನು ಅಳವಡಿಸಲಾಗಿರುವ ಇದೇ ರೀತಿಯ ವ್ಯವಸ್ಥೆಗಳನ್ನು ಗಮನದಲ್ಲಿಟ್ಟುಕೊಂಡು ಇದನ್ನು ಜಾರಿಗೆ ತರಲಾಗುತ್ತಿದೆ. ಈ ಸೇವಾ ಶುಲ್ಕದಿಂದ ಬೆಂಗಳೂರಿನಲ್ಲಿ ತ್ಯಾಜ್ಯ ನಿರ್ವಹಣೆಯನ್ನು ಸುಗಮಗೊಳಿಸಬಹುದು ಎಂಬುದ ಬಿಬಿಎಂಪಿ ಲೆಕ್ಕಾಚಾರ.
ವಿದ್ಯುತ್ ಬಿಲ್ ಜೊತೆಗೆ ತ್ಯಾಜ್ಯಾ ಸೇವಾ ಶುಲ್ಕ!
ಆರಂಭದಲ್ಲಿ ಘನತ್ಯಾಜ್ಯ ಸೇವಾ ಶುಲ್ಕವನ್ನು ವಿದ್ಯುತ್ ಬಿಲ್‌ನಲ್ಲಿ ಸೇರಿಸುವ ಕುರಿತು ಚರ್ಚೆಗಳು ನಡೆದಿದ್ದವು. ಆದರೆ, ಇದಕ್ಕೆ ಹಲವು ಅಡೆತಡೆಗಳು ಇದ್ದವು. ಅದರಲ್ಲೂ ವಿಶೇಷವಾಗಿ ಅನೇಕ ನಿವಾಸಿಗಳು ಗೃಹ ಜ್ಯೋತಿ ಯೋಜನೆಗಳಿಂದ ಪ್ರಯೋಜನ ಪಡೆಯುತ್ತಿದ್ದಾರೆ. ಪರಿಣಾಮವಾಗಿ, ಆಸ್ತಿ ತೆರಿಗೆ ಸಂಗ್ರಹದೊಂದಿಗೆ ಸೇವಾ ಶುಲ್ಕವನ್ನು ಸೇರಿಸಲು ನಿರ್ಧರಿಸಲಾಗಿದೆ.

ಘನತ್ಯಾಜ್ಯ ನಿರ್ವಹಣಾ ನಿಯಮ 2016ರ ಪ್ರಕಾರ ವಸತಿ ಕಟ್ಟಡಗಳಿಗೆ ತಿಂಗಳಿಗೆ 200 ರೂ.ವರೆಗೆ ಸೇವಾ ಶುಲ್ಕ ವಿಧಿಸಲು ಅನುಮತಿ ನೀಡಲಾಗಿದ್ದರೂ, ತಿಂಗಳಿಗೆ 100 ರೂ.ಗೆ ನಿಗದಿಪಡಿಸಲಾಗಿದೆ. ಘನತ್ಯಾಜ್ಯ ಸೇವಾ ಶುಲ್ಕವನ್ನು ಆಸ್ತಿ ತೆರಿಗೆ ಪಾವತಿಯೊಂದಿಗೆ ಸಂಗ್ರಹಿಸಲಾಗುತ್ತದೆ. ಸಂಗ್ರಹಿಸಿದ ಹಣವನ್ನು ಸಮರ್ಥ ಕಸ ವಿಲೇವಾರಿ ಕಾರ್ಯಾಚರಣೆಗಳಿಗಾಗಿ ಬಿಬಿಎಂಪಿ ಮತ್ತು ಬಿಎಸ್‌ಡಬ್ಲ್ಯೂಎಂಎಲ್‌ಗೆ ರವಾನಿಸಲಾಗುತ್ತದೆ.
ಕಿಡಿಕಾರಿದ ಮಾಜಿ ಸಚಿವ ಸುರೇಶ್ ಕುಮಾರ್
ಬಿಬಿಎಂಪಿ ಯ ತ್ಯಾಜ್ಯಾ ಸೇವಾ ಶುಲ್ಕ ವಿಚಾರಕ್ಕೆ ಮಾಜಿ ಸಚಿವ ಎಸ್ ಸುರೇಶ್ ಕುಮಾರ್ ಕಿಡಿಕಾರಿದ್ದಾರೆ. "ಇದು ಸರಳವಾಗಿ ಮತ್ತು ನೇರವಾಗಿ ಹೇಳುವುದಾದರೆ ಕಾಂಗ್ರೆಸ್ ಸರಕಾರದ ಸೇಡಿನ ನಡೆ" ಎಂದು ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ್ದಾರೆ.
"ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಪ್ರತಿ ಮನೆಗೆ ತ್ಯಾಜ್ಯ ನಿರ್ವಹಣೆಗಾಗಿ ತಿಂಗಳಿಗೆ ₹ 100 ಸೇವಾ ಶುಲ್ಕ ವಿಧಿಸಲು ಸರ್ಕಾರ ಮುಂದಾಗಿದೆ" ಎಂಬ ಸುದ್ದಿ ಓದಿದೆ. ಇದು ಸರಳವಾಗಿ ಮತ್ತು ನೇರವಾಗಿ ಹೇಳುವುದಾದರೆ ಕಾಂಗ್ರೆಸ್ ಸರಕಾರದ ಸೇಡಿನ ನಡೆ" ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.
ಮುಂದುವರಿದು, "ಬೆಂಗಳೂರಿನ ಉತ್ತರ, ಕೇಂದ್ರ, ದಕ್ಷಿಣ, ಎರಡು ವಿಧಾನಸಭಾ ಕ್ಷೇತ್ರಗಳನ್ನು (ರಾಜರಾಜೇಶ್ವರಿನಗರ, ಬೆಂಗಳೂರು ದಕ್ಷಿಣ) ಒಳಗೊಂಡ ಬೆಂಗಳೂರು ಗ್ರಾಮಾಂತರ, ಒಂದು ವಿಧಾನಸಭಾ ಕ್ಷೇತ್ರನ್ನು (ಯಲಹಂಕ) ಒಳಗೊಂಡ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷಕ್ಕೆ ಮತದಾರರು ನೀಡಿರುವ ಭಾರಿ ವಿಜಯಕ್ಕೆ ಕಾಂಗ್ರೆಸ್ ಪಕ್ಷ ನೀಡುತ್ತಿರುವ ಸೇಡಿನ ಕೊಡುಗೆ" ಎಂದು ಕಿಡಿಕಾರಿದ್ದಾರೆ.
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications