ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ 2 ಕೊವಿಡ್ ಆರೈಕೆ ಕೇಂದ್ರಗಳನ್ನು ತೆರೆಯಲು ಬಿಬಿಎಂಪಿ ನಿರ್ಧಾರ

|
Google Oneindia Kannada News

ಬೆಂಗಳೂರು, ಆಗಸ್ಟ್ 12: ಬಿಬಿಎಂಪಿಯು ನಗರದಲ್ಲಿ ಮತ್ತೆ 2 ಕೊವಿಡ್ ಆರೈಕೆ ಕೇಂದ್ರಗಳನ್ನು ತೆರೆಯಲು ಮುಂದಾಗಿದೆ.

Recommended Video

R Ashok ರಾತ್ರಿ KG Halli , DJ Halliಗೆ ರಾತ್ರಿ ಹೋದಾಗ ಹೇಗಿತ್ತು ಗೊತ್ತಾ | Oneindia Kannada

ಬೆಂಗಳೂರಿನಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬಂದಿದೆ.ಬೆಂಗಳೂರು ವಸ್ತುಪ್ರದರ್ಶನ ಕೇಂದ್ರದಲ್ಲಿ 10 ಸಾವಿರ ಹಾಸಿಗೆಗಳ ವ್ಯವಸ್ಥೆ ಮಾಡಬಹುದಾಗಿದೆ. ಈಗ ಪ್ರಸ್ತುತ 1500 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ.

ಚಿತ್ರ: ದೇಶದಲ್ಲೇ ದೊಡ್ಡದಾದ ಬೆಂಗಳೂರಿನ ಕೋವಿಡ್ ಆರೈಕೆ ಕೇಂದ್ರಚಿತ್ರ: ದೇಶದಲ್ಲೇ ದೊಡ್ಡದಾದ ಬೆಂಗಳೂರಿನ ಕೋವಿಡ್ ಆರೈಕೆ ಕೇಂದ್ರ

ಯಾವುದೇ ಸಂದರ್ಭದಲ್ಲಾದರೂ ವಸ್ತು ಪ್ರದರ್ಶನ ಕೇಂದ್ರ ಆರಂಭವಾಗಬಹುದು ಹೀಗಾಗಿ ಅಲ್ಲಿ ಹೆಚ್ಚಿನ ಹಾಸಿಗೆಗಳ ವ್ಯವಸ್ಥೆ ಮಾಡುವ ಬದಲು ಹೊಸ ಎರಡು ಕೊವಿಡ್ ಕೇಂದ್ರಗಳನ್ನು ತೆರಯಲು ಚಿಂತಿಸಲಾಗಿದೆ ಎಂದು ಐಎಎಸ್ ಅಧಿಕಾರಿ ಕಟಾರಿಯಾ ತಿಳಿಸಿದ್ದಾರೆ.

ಜ್ಞಾನಭಾರತಿಯಲ್ಲಿ 300 ಹಾಸಿಗೆಗಳ ವ್ಯವಸ್ಥೆ

ಜ್ಞಾನಭಾರತಿಯಲ್ಲಿ 300 ಹಾಸಿಗೆಗಳ ವ್ಯವಸ್ಥೆ

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನ ಭಾರತಿ ಕ್ಯಾಂಪಸ್‌ನಲ್ಲಿ 300 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಹಾಸಿಗೆಗಳ ಅಗತ್ಯವಿದ್ದರೆ ವಿಸ್ತರಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಕೊರೊನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ಯಾವುದೇ ರೀತಿಯ ಚಟುವಟಿಕೆಗಳು ನಡೆಯುತ್ತಿಲ್ಲ.

ಗುಣಮುಖರಾಗುತ್ತಿರುವವರ ಸಂಖ್ಯೆ ಕಡಿಮೆ

ಗುಣಮುಖರಾಗುತ್ತಿರುವವರ ಸಂಖ್ಯೆ ಕಡಿಮೆ

ನಿತ್ಯ ಸುಮಾರು ಶೇ.25 ರಷ್ಟು ಮಂದಿ ಕೊವಿಡ್ ಕೇಂದ್ರಗಳಿಗೆ ದಾಖಲಾಗುತ್ತಿದ್ದಾರೆ. ಆದರೆ ಬಿಡುಗಡೆಯಾಗುತ್ತಿರುವವರ ಸಂಖ್ಯೆ ಕಡಿಮೆ ಇದೆ. ಒಂದೊಮ್ಮೆ ಸಂಖ್ಯೆ ಹೆಚ್ಚಾದಲ್ಲಿ ಬಿಐಇಸಿಯಲ್ಲಿ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತದೆ ಎಂದರು.

ಬೆಂಗಳೂರು ನಗರದ 5 ಕೋವಿಡ್ ಆರೈಕೆ ಕೇಂದ್ರಗಳಿಗೆ ಬೀಗಬೆಂಗಳೂರು ನಗರದ 5 ಕೋವಿಡ್ ಆರೈಕೆ ಕೇಂದ್ರಗಳಿಗೆ ಬೀಗ

ಬಿಐಇಸಿಯಲ್ಲಿ ಹಾಸಿಗೆಗಳು ಖಾಲಿ ಇಲ್ಲ ಹೀಗಿದ್ದಾಗ ಅಲ್ಲಿ ನೀಡಿರುವ ಸೌಲಭ್ಯವನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. 700ಕ್ಕಿಂತಲೂ ಹೆಚ್ಚು ಹಾಸಿಗೆಗಳು ಲಭ್ಯವಿದೆ. ಅಲ್ಲಿ ಯಾವುದೇ ರೋಗಿಯನ್ನು ಕರೆತರುವ ಮೊದಲು ಎಲ್ಲಾ ಸೌಲಭ್ಯವನ್ನು ಪರಿಶೀಲಿಸಲಾಗುತ್ತದೆ.ಅಲ್ಲಿ ಹೆಚ್ಚು ಹಾಸಿಗೆಗಳನ್ನು ಅಳವಡಿಸುವ ಅಗತ್ಯವಿದೆ ಎಂದು ಅಂದಾಜಿಸಲಾಗಿದೆ ಎಂದು ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್ ತಿಳಿಸಿದ್ದಾರೆ.

ಶೇ.80ರಷ್ಟು ಮಂದಿ ಲಕ್ಷಣಗಳಿಲ್ಲ

ಶೇ.80ರಷ್ಟು ಮಂದಿ ಲಕ್ಷಣಗಳಿಲ್ಲ

ಬೆಂಗಳೂರಿನಲ್ಲಿ 33,070 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ ಶೇ.80 ರಷ್ಟು ರೋಗಿಗಳಿಗೆ ಲಕ್ಷಣಗಳೇ ಇಲ್ಲದಿರುವ ಕಾರಣ ಮನೆಯಲ್ಲೇ ಬಂಧನದಲ್ಲಿರಿಸಬೇಕೋ ಅಥವಾ ಕೊವಿಡ್ ಕೇಂದ್ರಗಳಿಗೆ ಕಳುಹಿಸಬೇಕೋ ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ.

ಸರ್ಕಾರವು 4276 ಹಾಸಿಗೆಗಳನ್ನು ಕಲ್ಪಿಸಿತ್ತು ಅದರಲ್ಲಿ 3346ಹಾಸಿಗೆಗಳು ಮುಗಿದಿವೆ.

ಬೆಂಗಳೂರು ನಗರದ 5 ಕೋವಿಡ್ ಆರೈಕೆ ಕೇಂದ್ರಗಳಿಗೆ ಬೀಗ

ಬೆಂಗಳೂರು ನಗರದ 5 ಕೋವಿಡ್ ಆರೈಕೆ ಕೇಂದ್ರಗಳಿಗೆ ಬೀಗ

ಸರ್ಕಾರ ನಗರದಲ್ಲಿರುವ 5 ಕೋವಿಡ್ ಆರೈಕೆ ಕೇಂದ್ರಗಳನ್ನು ಮುಚ್ಚಲು ತೀರ್ಮಾನ ಕೈಗೊಂಡಿದೆ. ಒಂದು ವೇಳೆ ಆರೈಕೆ ಕೇಂದ್ರಗಳನ್ನು ಮುಚ್ಚಿದರೆ ನಗರದಲ್ಲಿ ಪ್ರಸ್ತುತ ಲಭ್ಯವಿರುವ 4,267 ಹಾಸಿಗೆಗಳ ಪೈಕಿ 2,614 ಹಾಸಿಗೆಗಳು ಲಭ್ಯವಾಗುವುದಿಲ್ಲ. ನಗರದಲ್ಲಿ ಸೋಮವಾರ 1,243 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 75,428. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 32,985.

English summary
The Bruhat Bengaluru Mahanagara Palike (BBMP) has decided to open up two more COVID Care Centres in light of daily increase in COVID-19 cases being recorded in the city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X