ಬೆಂಗಳೂರು; ಕೊರೊನಾ ಸೋಂಕಿತರಿಗಾಗಿಯೇ 50 ಅಂಬ್ಯುಲೆನ್ಸ್ ಮೀಸಲು

ಬೆಂಗಳೂರು, ಜೂನ್ 24 : ಕೊರೊನಾ ಸೋಂಕಿತರಿಗೆ ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಸಿಗುತ್ತಿಲ್ಲ ಎಂಬ ದೂರುಗಳು ಬೆಂಗಳೂರು ನಗರದಲ್ಲಿ ಕೇಳಿ ಬರುತ್ತಿವೆ. ಈ ಸಮಸ್ಯೆ ನಿವಾರಣೆಗೆ ಬಿಬಿಎಂಪಿ ಮುಂದಾಗಿದೆ.

Recommended Video

      World No.1 Tennis player Novak DJokovic Tests Positive for Coronavirus | Oneindia Kannada

      ಕೊರೊನಾ ಸೋಂಕಿತರು ಮತ್ತು ಸೋಂಕಿತರ ಜೊತೆ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕದಲ್ಲಿರುವವರನ್ನು ಕರೆದುಕೊಂಡು ಹೋಗಲು 50 ಅಂಬ್ಯುಲೆನ್ಸ್‌ಗಳನ್ನು ಮೀಸಲಾಗಿ ಇಡಲಾಗುತ್ತದೆ.

      ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಬಿಬಿಎಂಪಿಯ ವಿಶೇಷ ಆಯುಕ್ತ ಡಿ. ರಣದೀಪ್ ನೇತೃತ್ವದಲ್ಲಿ ಸಭೆ ನಡೆಯಿತು.

      BBMP Deploy 50 Ambulances For Coronavirus Patients

      ಬೆಂಗಳೂರು ನಗರ ಜಿಲ್ಲೆಗೆ 6, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 4 ಅಂಬ್ಯುಲೆನ್ಸ್ ನಿಗದಿ ಮಾಡಲಾಗಿದೆ. ಬಿಬಿಎಂಪಿಯ 8 ವಲಯಗಳಿಗೆ 38 ಅಂಬ್ಯುಲೆನ್ಸ್ ಮೀಸಲಾಗಿಡಲಾಗಿದೆ. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ 2 ಹೆಚ್ಚುವರಿ ಅಂಬ್ಯುಲೆನ್ಸ್ ನಿಂತಿರಲಿದೆ.

      ಅಂಬ್ಯುಲೆನ್ಸ್‌ಗಳನ್ನು ಅಗತ್ಯವಿರುವ ಸ್ಥಳಕ್ಕೆ ಕಳಿಸಲು ಕಂಟ್ರೋಲ್ ರೂಂ ನಿರ್ಮಾಣ ಮಾಡಲಾಗುತ್ತಿದೆ. ಸೋಂಕಿತರ ಜೊತೆ ಸಂಪರ್ಕದಲ್ಲಿರುವವರನ್ನು ಪರೀಕ್ಷೆಗೆ ಕರೆದುಕೊಂಡು ಹೋಗಲು ಅಂಬ್ಯುಲೆನ್ಸ್ ಕಳಿಸಲಾಗುತ್ತದೆ.

      ಬಿಬಿಎಂಪಿ ಕೋವಿಡ್ - 19 ಸೋಂಕಿನಿಂದ ಮೃತಪಟ್ಟ ರೋಗಿಗಳ ಶವಗಳನ್ನು ಸಾಗಣೆ ಮಾಡಲು 8 ಅಂಬ್ಯುಲೆನ್ಸ್‌ಗಳನ್ನು ಮೀಸಲಾಗಿಡಲಿದೆ. ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಅಂಬ್ಯುಲೆನ್ಸ್‌ಗಳಿಗೆ ಬೇಡಿಕೆ ಹೆಚ್ಚುತ್ತಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+