ಹೃದಯಾಘಾತದಿಂದ ಬಿಬಿಎಂಪಿ ಉಪಮೇಯರ್ ರಮೀಳಾ ಉಮಾಶಂಕರ್ ನಿಧನ
Recommended Video

ಬೆಂಗಳೂರು, ಅಕ್ಟೋಬರ್ 05: ಬಿಬಿಎಂಪಿಯ ಉಪಮೇಯರ್ ಆಗಿ ಇತ್ತೀಚೆಗಷ್ಟೇ ಆಯ್ಕೆಯಾಗಿದ್ದ ರಮೀಳಾ ಉಮಾಶಂಕರ್(44) ಅವರು ತೀವ್ರ ಹೃದಯಾಘಾತದಿಂದ ಗುರುವಾರ ತಡರಾತ್ರಿ ನಿಧನಹೊಂದಿದ್ದಾರೆ.
ಗುರುವಾರ ರಾತ್ರಿ 12.50ರಲ್ಲಿ ರಮೀಳಾ ಅವರಿಗೆ ತೀವ್ರ ಎದೆನೋವು ಕಾಣಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಪಶ್ಚಿಮ ಕಾರ್ಡ್ ರಸ್ತೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದಿದ್ದಾರೆ.
ರಮೀಳಾ ಅವರಿಗೆ ಕೇವಲ 44 ವರ್ಷ ವಯಸ್ಸಾಗಿತ್ತು. ಅವರು ಪತಿ ಡಿ.ಉಮಾಶಂಕರ್ ಮತ್ತು ಓರ್ವ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

ಅ.04 ರಂದು ಮುಖ್ಯಮುಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಜೊತೆ ಹಲವು ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಂಡಿದ್ದರು. 2015 ರಲ್ಲಿ ಕಾವೇರಿಪುರ ವಾರ್ಡ್ ನಿಂದ ಕಾರ್ಪೋರೇಟರ್ ಆಗಿ ಆಯ್ಕೆಯಾಗಿದ್ದ ಅವರು, ಸೆ.28 ರಂದು ಉಪಮೇಯರ್ ಆಗಿ ಆಯ್ಕೆಯಾಗಿದ್ದರು. ನಂತರ ಸೆ.3 ರಂದಷ್ಟೇ ಕಚೇರಿಯಲ್ಲ ಪೂಜೆ ಸಲ್ಲಿಸಿ ಅಧಿಕಾರ ವಹಿಸಿಕೊಂಡಿದ್ದರು. ಅಧಿಕಾರ ವಹಿಸಿಕೊಂಡ ಒಂದೇ ದಿನದಲ್ಲಿ ರಮೀಳಾ ವಿಧಿವಶರಾಗಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರವಿದ್ದು ಕಾಂಗ್ರೆಸ್ ಮೇಯರ್ ಪಟ್ಟ, ಜೆಡಿಎಸ್ ಉಪ ಮೇಯರ್ ಪಟ್ಟ ಹಂಚಿಕೊಂಡಿವೆ. ಜಯನಗರ ವಾರ್ಡ್ ನ ಗಂಗಾಬಿಕೆ ಮಲ್ಲಿಕಾರ್ಜುನ್ ಮೇಯರ್ ಆಗಿ, ರಮಿಳಾ ಅವರು ಉಪ ಮೇಯರ್ ಆಗಿ ಆಯ್ಕೆಯಾಗಿದ್ದರು.
{document1}












Click it and Unblock the Notifications