ಉಪಮೇಯರ್ ರಮೀಳಾ ವಿಧಿವಶ: ಗಣ್ಯರು ಏನಂದರು?
Recommended Video

ಬೆಂಗಳೂರು, ಅಕ್ಟೋಬರ್ 05: ಹೃದಯಾಘಾತದಿಂದ ಕೊನೆಯುಸಿರೆಳೆದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಉಪಮೇಯರ್ ರಮೀಳಾ ಉಮಾಂಕರ್ ಅವರ ನಿಧನಕ್ಕೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್ ನವರೇ ಆಗಿದ್ದ ರಮೀಳಾ ಕಾವೇರಿಪುರ ವಾರ್ಡ್ ನಿಂದ 2015 ರಲ್ಲಿ ಗೆದ್ದು, ಕಾರ್ಪೋರೇಟರ್ ಆಗಿದ್ದರು.

ಕಂಬನಿ ಮಿಡಿದ ದೇವೇಗೌಡರು
ಉಪ ಮಹಾಪೌರರಾದ ಶ್ರೀಮತಿ ರಮೀಳಾ ಉಮಾಶಂಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಬಹಳ ನೋವುಂಟಾಗಿದೆ. ಅತೀ ಚಿಕ್ಕ ವಯಸ್ಸಿನಲ್ಲೇ ಸಮಾಜದ ಬಗ್ಗೆ ಉತ್ತಮ ಕಾಳಜಿ ಹೊಂದಿದ್ದ ಕ್ರಿಯಾಶೀಲ ಮಹಿಳೆ ಅವರು. ಭಗವಂತ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ತುಂಬಲಿ, ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಟ್ವೀಟ್ ಮಾಡಿ ಕಂಬನಿ ಮೀಡಿದಿದ್ದಾರೆ.
| Array |
ಪಿಸಿ ಮೋಹನ್ ಸಂತಾಪ
ಉಪಮೇಯರ್ ರಮೀಳಾ ಉಮಾಶಂಕರ್ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ನಿನ್ನೆಯಷ್ಟೆ ಮೆಟ್ರೊ ಕಾರ್ಯಕ್ರಮದಲ್ಲಿ ಅವರೊಂದಿಗೆ ನಾನು ಕೂಡ ಭಾಗವಹಿಸಿದ್ದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ ಅವರ ಹಠಾತ್ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬಿಜೆಪಿ ಸಂಸದ ಪಿಸಿ ಮೋಹನ್ ಟ್ವೀಟ್ ಮಾಡಿದ್ದಾರೆ.

ಯಡಿಯೂರಪ್ಪ ಅವರಿಂದ ನುಡಿ ನಮನ
ಬಿಬಿಎಂಪಿಯ ಉಪಮೇಯರ್ ಶ್ರೀಮತಿ ರಮೀಳಾ ಉಮಾಶಂಕರ್ ರವರ ಅಕಾಲಿಕ ನಿಧನವು ಅತೀವ ನೋವು ತಂದಿದೆ. ಸಕ್ರಿಯ ಜನಪ್ರತಿನಿಧಿಯಾಗಿದ್ದ ಅವರನ್ನು ದೇವರು ಇಷ್ಟು ಬೇಗ ಕರೆಸಿಕೊಳ್ಳಬಾರದಿತ್ತು. ಭಗವಂತನು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ ಹಾಗೂ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ನುಡಿನಮನ ಸಲ್ಲಿಸಿದ್ದಾರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ.

ಸಂತಾಪ ಸೂಚಿಸಿದ ಉಪಮುಖ್ಯಮಂತ್ರಿ
ಇತ್ತೀಚೆಗಷ್ಟೇ ಉಪಮೇಯರ್ ಆಗಿ ಆಯ್ಕೆಯಾಗಿದ್ದ ರಮೀಳಾ ಉಮಾಶಂಕರ್ ಅವರು ನಮ್ಮನ್ನಗಲಿದ್ದಾರೆ ಎಂದು ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ. ಈ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ಅವರ ಆತ್ಮಕ್ಕೆ ಶಾಂತಿ ಹಾಗೂ ಅವರ ಕುಟುಂಬಕ್ಕೆ ಇದನ್ನು ಭರಿಸುವ ಶಕ್ತಿ ದೊರಕಲಿ ಎಂದು ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಟ್ವೀಟ್ ಮಾಡಿದ್ದಾರೆ.












Click it and Unblock the Notifications