E Khata Award: ಬಿಬಿಎಂಪಿ ಇ-ಖಾತಾ ಯೋಜನೆಗೆ "ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ 2025'
ಬೆಂಗಳೂರು, ಸೆಪ್ಟಂಬರ್ 23: ರಾಜಧಾನಿ ಬೆಂಗಳೂರಲ್ಲಿ ನಂತರ ರಾಜ್ಯದಲ್ಲಿ ವಿಸ್ತರಣೆ ಆದ್ದ "ಇ-ಖಾತಾ' ಯೋಜನೆಯಡಿ ಸಾಕಷ್ಟು ಬದಲಾಯವಣೆ ತಂದಿತು. ಆಸ್ತಿ, ದಾಖಲೆ ಪತ್ರಗಳನ್ನು ಮಾಲೀಕರಿ ಡಿಜಿಟಲ್ ರೂಪದಲ್ಲಿ, ಆನ್‌ಲೈನ್‌ನಲ್ಲಿ, ಮನೆಯಲ್ಲೇ ಕೂತು ಇ-ಖಾತಾ ಪಡೆಯುವಂತಾಯಿತು. ಜನಸ್ನೇಹಿತ ಬಿಬಿಎಂಪಿ ಇ-ಖಾತಾ ಯೋಜನೆಗೆ ರಾಷ್ಟ್ರೀಯ ಪ್ರಶಸ್ತಿ ದೊರೆತಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ತಿಳಿಸಿದೆ.
ಹೌದು, ಸೆಪ್ಟಂಬರ್ 2ರ ಮೊದಲಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿದ್ದ ಆಸ್ತಿ ಮಾಲೀಕರಿಗಾಗಿ ಇ-ಖಾತಾ ಯೋಜನೆ ಜಾರಿ ತರಲಾಗಿತ್ತು. ಈ ಯೋಜನೆಗೆ ಸೋಮವಾರ (22 ಸೆಪ್ಟೆಂಬರ್ 2025) ವಿಶಾಖಪಟ್ಟಣಂದಲ್ಲಿ ನಡೆದ ಭಾರತ ಸರ್ಕಾರವು 28ನೇ ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ ಸಮಾರಂಭದಲ್ಲಿ "ಬಿಬಿಎಂಪಿಯ ಇ-ಖಾತಾ ಯೋಜನೆಗೆ "ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ 2025" ನೀಡಿ ಗೌರವಿಸಲಾಯಿತು.

ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ರವರ ಮಹತ್ವಾಕಾಂಕ್ಷಿ ಯೋಜನೆಯಾದ ಇ-ಖಾತಾ ಯೋಜನೆಯು ಆಸ್ತಿಯ ದಾಖಲೆಗಳನ್ನು ಡಿಜಿಟಲೀಕರಿಸುವುದು, ಪಾರದರ್ಶಕತೆಯನ್ನು ಖಾತ್ರಿ ಪಡಿಸುವುದು ಹಾಗೂ ನಾಗರಿಕ ಸೇವಾ ವಿತರಣೆಯನ್ನು ಬಲಪಡಿಸುವಲ್ಲಿ ಮುಂಚೂಣಿಯ ಪಾತ್ರ ವಹಿಸಿದಕ್ಕಾಗಿ ಪ್ರಶಂಸಿಸಲ್ಪಟ್ಟಿದೆ.
ಈ ಪ್ರಶಸ್ತಿಯನ್ನು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿ ನಾಥ್, ಕಂದಾಯ ವಿಭಾಗದ ವಿಶೇಷ ಆಯುಕ್ತರು ಮುನೀಶ್ ಮೌದ್ಗಿಲ್, ಜಂಟಿ ಆಯುಕ್ತರಾದ ಲಕ್ಷ್ಮೀದೇವಿ, ಎನ್.ಐ.ಸಿಯ ಹಿರಿಯ ತಾಂತ್ರಿಕ ನಿರ್ದೇಶಕರಾದ ಸುರೇಶ್ ಬಾಬು ಹಾಗೂ ಇ-ಖಾತಾ ತಂಡವು ಪ್ರಶಸ್ತಿಯನ್ನು ಸ್ವೀಕರಿಸಿದರು.
ಈ ಪ್ರಶಸ್ತಿಯನ್ನು ಸಚಿವರು, ಪ್ರಧಾನ ಮಂತ್ರಿ ಕಾರ್ಯಾಲಯದ ರಾಜ್ಯ ಸಚಿವರಾದ ಜಿತೇಂದ್ರ ಸಿಂಗ್ ಅವರಿಂದ ಪ್ರದಾನ ಮಾಡಲಾಯಿತು. ಇದೇ ವೇಳೆ ಇ-ಆಡಳಿತ ಪ್ರಶಸ್ತಿ ಜೊತೆಗೆ 10 ಲಕ್ಷ ರೂ. ನಗದು ಬಹುಮಾನ ಸಹ ನೀಡಿ ಗೌರವಿಸಲಾಯಿತು ಎಂದು ಜಿಬಿಎ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು ವ್ಯಾಪ್ತಿಯಲ್ಲಿ ಲಕ್ಷಾಂತರ ಆಸ್ತಿಗಳ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. 25 ಲಕ್ಷದಷ್ಟು ಕರಡು ಅಂತಿಮ ಇ ಖಾತಾಗಳು ಲಭ್ಯವಿವೆ. ಅವುಗಳ ವಿತರಣೆಗೆ ಸರ್ಕಾರ ಅನೇಕ ಅಭಿಯಾನ ಆರಂಭಿಸಿದೆ. ಜಾಗೃತಿ ಸಹ ಮೂಡಿಸಿದೆ. ಈವರೆಗೆ ಸುಮಾರು ಐದರಿಂದ ಏಳು ಲಕ್ಷ ಇ-ಖಾತೆಗಳು ವಿತರಣೆ ಆಗಿವೆ ಎನ್ನಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಿತರಣೆ ಮಾಡಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications