ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಗಸ್ಟ್ 25ರಂದು ಬೆಂಗಳೂರಿನ ಕುಡುಕರಿಗೆ ಉಪವಾಸ

By Mahesh
|
Google Oneindia Kannada News

ಬೆಂಗಳೂರು, ಆಗಸ್ಟ್ 23: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಎರಡು ದಿನಗಳ ಕಾಲ ಮದ್ಯಪಾನ ನಿಷೇಧದಿಂದ ಕಂಗೆಟ್ಟಿರುವ ಬೆಂಗಳೂರಿಗರು ಮಂಗಳವಾರ ಮತ್ತೊಮ್ಮೆ ಪಾನ ನಿಷೇಧ ಅನುಭವಿಸಬೇಕಿದೆ. ಬಿಬಿಎಂಪಿ ಚುನಾವಣೆ ಫಲಿತಾಂಶ ಆಗಸ್ಟ್ 25ರಂದು ಹೊರಬರಲಿದೆ.

ಬಿಬಿಎಂಪಿ ಚುನಾವಣೆಯ ಮತ ಎಣಿಕೆ ಹಿನ್ನೆಲೆಯಲ್ಲಿ ಆ.25ರಂದು ನಗರದಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಪೊಲೀಸ್ ಆಯುಕ್ತ ಎನ್.ಎಸ್. ಮೇಘರಿಕ್ ಅವರು ಭಾನುವಾರ ಆದೇಶ ಹೊರಡಿಸಿದ್ದಾರೆ.[ವಿಜಯವಾಣಿ- ಈಟಿವಿ ಸಮೀಕ್ಷೆ: ಕಾಂಗ್ರೆಸ್ ಸೆಂಚುರಿ, ಬಿಜೆಪಿಗೆ ವರಿ!]

ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳ ಬೆಂಬಲಿಗರು ವಿಜಯೋತ್ಸವ ಆಚರಿಸುವುದರಿಂದ ಆ ವೇಳೆ ಪಾನಮತ್ತರಾಗಿ ಕಿಡಿಗೇಡಿಗಳು ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವ ಸಾಧ್ಯತೆ ಇರುವುದರಿಂದ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

BBMP Election 2015 : Ban on Sale of Liquor Aug 25

ಆ.25ರ ಬೆಳಗ್ಗೆ 6 ಗಂಟೆಯಿಂದ ಆ.26ರ ಬೆಳಗ್ಗೆ 6 ಗಂಟೆವರೆಗೆ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಮಾಡುವಂತಿಲ್ಲ ಎಂದು ಚುನಾವಣಾ ಆಯುಕ್ತ ಶ್ರೀನಿವಾಸಚಾರಿ ಅವರ ಜೊತೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಹೇಳಿದರು,

ನಿಷೇಧಾಜ್ಞೆ: ಬಿಬಿಎಂಪಿ ಚುನಾವಣೆಯ ಫಲಿತಾಂಶ ಹಿನ್ನೆಲೆಯಲ್ಲಿ ಆ.25ರ ಮಧ್ಯರಾತ್ರಿಯಿಂದ ಆ.27ರ ಮಧ್ಯರಾತ್ರಿವರೆಗೆ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಗರದ 25 ಕೇಂದ್ರಗಳಲ್ಲಿ ಬಿಬಿಎಂಪಿ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗುವ ಸಂಭವ ಇರುವುದರಿಂದ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ ಎಂದು ನಗರ ಪೊಲೀಸ್ ಆಯುಕ್ತರ ಕಚೇರಿ ಪ್ರಕಟಿಸಿದೆ.

English summary
Bengaluru city police have imposed a ban on the sale of liquor in the city on August 25 in order to facilitate peaceful counting of votes BBMP polls held on August 22 said Election Commission and Bengaluru CIty Police in a joint press release today (Aug.23)
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X