ಬಿಬಿಎಂಪಿ ಚುನಾವಣೆ, ಆ.4ರಂದು ಬಿಜೆಪಿ ಮೊದಲ ಪಟ್ಟಿ

ಬೆಂಗಳೂರು, ಆಗಸ್ಟ್ 3 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಲಾಗುತ್ತದೆ, ಚುನಾವಣೆಯಲ್ಲಿ ಈ ಬಾರಿಯೂ ಗೆಲುವು ನಮ್ಮದೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಹೇಳಿದರು.

ಬಿಬಿಎಂಪಿ ಚುನಾವಣೆಯ ಹಿನ್ನೆಲೆಯಲ್ಲಿ ಭಾನುವಾರ ಪಕ್ಷದ ಪದಾಧಿಕಾರಿಗಳ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಪ್ರಹ್ಲಾದ್ ಜೋಶಿ ಅವರು, 'ಯಾರಿಗೆ ಟಿಕೆಟ್‌ ನೀಡಬೇಕು ಎಂಬುದನ್ನು ಪಕ್ಷದ ಚುನಾವಣಾ ಸಮಿತಿ ನಿರ್ಧರಿಸಲಿದೆ. ಮೊದಲ ಪಟ್ಟಿ ಆಗಸ್ಟ್ 4ರಂದು ಬಿಡುಗಡೆಯಾಗಲಿದ್ದು, ಆಗಸ್ಟ್ 5ರಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಾರೆ ಎಂದರು. [ಬಿಬಿಎಂಪಿ ಚುನಾವಣಾ ವೇಳಾಪಟ್ಟಿ]

prahlad joshi

ಬಿಜೆಪಿ ಬಿಬಿಎಂಪಿಯ 198 ವಾರ್ಡ್‌ಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಯಾವ ಪಕ್ಷದೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಜೆಡಿಎಸ್ ಜೊತೆ ಮಾಡಿಕೊಂಡ ಹೊಂದಾಣಿಕೆ ವಿಧಾನಪರಿಷತ್ತಿಗೆ ಮಾತ್ರ ಸೀಮಿತವಾದದ್ದು ಎಂದು ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದರು. [ಬಿಬಿಎಂಪಿ ವಿಭಜನೆ ಹೇಗೆ?, ಸಂಕ್ಷಿಪ್ತ ಮಾಹಿತಿ]

ಇನ್ಸ್‌ಪೆಕ್ಟರ್ ಬದಲಾವಣೆ ಮಾಡಿ : ಕಾಂಗ್ರೆಸ್‌ ಪಕ್ಷದ ಸಚಿವರು ಮತ್ತು ಕೆಲವು ಶಾಸಕರು ಪೊಲೀಸ್‌ ಅಧಿಕಾರಿಗಳನ್ನು ಬಳಸಿಕೊಂಡು ಜನರನ್ನು ಬೆದರಿಸುವ ತಂತ್ರವನ್ನು ಆರಂಭಿಸಿದ್ದಾರೆ. ಆದ್ದರಿಂದ, ಚುನಾವಣೆ ಮುಗಿಯುವ ತನಕ ಚುನಾವಣಾ ಆಯೋಗ, ಸೂಕ್ಷ್ಮ ಪ್ರದೇಶಗಳಲ್ಲಿರುವ ಇನ್‌ಸ್ಪೆಕ್ಟರ್‌ ಮತ್ತು ಅಧಿಕಾರಿಗಳನ್ನು ತಾತ್ಕಾಲಿಕವಾಗಿ ಬದಲಾಯಿಸಬೇಕು ಎಂದು ಜೋಶಿ ಒತ್ತಾಯಿಸಿದರು.

ಆಗಸ್ಟ್‌ 11ಕ್ಕೆ ಪ್ರಣಾಳಿಕೆ ಬಿಡುಗಡೆ : ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅವರಿಗೆ ಪಾಲಿಕೆ ಚುನಾವಣಾ ಉಸ್ತುವಾರಿ ವಹಿಸಲಾಗಿದೆ. ಮಾಜಿ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಪ್ರಣಾಳಿಕೆ ಸಮಿತಿ ರಚನೆ ಮಾಡಲಾಗಿದೆ. ಆಗಸ್ಟ್‌ 11ರಂದು ಪ್ರಣಾಳಿಕೆ ಬಿಡುಗಡೆ ಮಾಡಲಾಗುತ್ತದೆ ಎಂದರು.

ಇಂದು ಅಧಿಸೂಚನೆ ಪ್ರಕಟ : ಅಂದಹಾಗೆ ಬಿಬಿಎಂಪಿ ಚುನಾವಣೆ ಅಧಿಸೂಚನೆ ಆಗಸ್ಟ್‌ 3ರ ಸೋಮವಾರ ಪ್ರಕಟಗೊಳ್ಳಲಿದೆ. ಚುನಾವಣಾಧಿಕಾರಿಯೂ ಆಗಿರುವ ಬಿಬಿಎಂಪಿ ಆಯುಕ್ತ ಜಿ.ಕುಮಾರ್ ನಾಯಕ್ ಅಧಿಸೂಚನೆ ಹೊರಡಿಸಲಿದ್ದಾರೆ.

ಜುಲೈ 17ರಿಂದ ನೀತಿ ಸಂಹಿತೆ ಜಾರಿಗೆ ಬಂದಿದೆ. ಆಗಸ್ಟ್ 10 ನಾಮಪತ್ರ ಸಲ್ಲಿಸಲು ಕೊನೆ ದಿನಾಂಕವಾಗಿದ್ದು, ಆಗಸ್ಟ್ 13 ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ. ಆಗಸ್ಟ್ 22 ರಂದು ಮತದಾನ ನಡೆಯಲಿದೆ. ಆಗಸ್ಟ್ 25 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+