ಬಿಬಿಎಂಪಿ ಚುನಾವಣೆ, ಬಹಿರಂಗ ಪ್ರಚಾರಕ್ಕೆ ಇಂದು ಸಂಜೆಯೇ ತೆರೆ
ಬೆಂಗಳೂರು, ಆಗಸ್ಟ್ 19 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ ತೆರೆ ಬೀಳಲಿದೆ. ನಂತರ ಮೊಬೈಲ್ ಮೂಲಕ ಎಸ್‌ಎಂಎಸ್ ಕಳುಹಿಸುವಂತಿಲ್ಲ, ರೇಡಿಯೋ ಹಾಗೂ ಟಿವಿ, ಪತ್ರಿಕಾ ಮಾಧ್ಯಮಗಳ ಮೂಲಕವೂ ಪ್ರಚಾರ ಮಾಡಬಾರದು ಎಂದು ರಾಜ್ಯ ಚುನಾವಣಾ ಆಯೋಗ ಸೂಚನೆ ನೀಡಿದೆ. [ಚುನಾವಣಾ ಪ್ರಚಾರದ ಚಿತ್ರಗಳು]
ಆ.22ರ ಶನಿವಾರ ಬೆಳಗ್ಗೆ 7 ಗಂಟೆಯಿಂದ ಮತದಾನ ನಡೆಯಲಿದೆ. ಮತದಾನಕ್ಕೆ 48 ಗಂಟೆ ಮುಂಚಿತವಾಗಿ ಬಹಿರಂಗ ಪ್ರಚಾರವನ್ನು ಅಂತ್ಯಗೊಳಿಸುವಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಅದರ ಅನ್ವಯ ಇಂದು ಸಂಜೆ ಬಹಿರಂಗ ಪ್ರಚಾರ ಬಹುತೇಕ ಅಂತ್ಯಗೊಳ್ಳಲಿದೆ. [ಚುನಾವಣೆ ದಿನ ರಜೆ ಘೋಷಣೆ]

ಶನಿವಾರ ಬೆಳಗ್ಗೆ 7ಗಂಟೆಗೆ ಮತದಾನ ಆರಂಭವಾಗುತ್ತದೆ. ಅದಕ್ಕೆ 48 ಗಂಟೆಗಳ ಮೊದಲು ಅಂದರೆ ಆ.20ರ ಗುರುವಾರ ಬೆಳಗ್ಗೆ 7ಕ್ಕೆ ಬಹಿರಂಗ ಪ್ರಚಾರವನ್ನು ರಾಜಕೀಯ ಪಕ್ಷಗಳು ಅಂತ್ಯಗೊಳಿಸಬೇಕು. ಆದ್ದರಿಂದ ವಿವಿಧ ಪಕ್ಷಗಳು ಬುಧವಾರ ರಾತ್ರಿಯೇ ಬಹಿರಂಗ ಪ್ರಚಾರ ಮುಕ್ತಾಯಗೊಳಿಸಲಿವೆ. [500 ರೂ. ಕೊಟ್ಟವರನ್ನು ಆರಿಸಿ ಐದು ವರ್ಷ ಕೂರಿಸಬೇಡಿ]
ಗುರುವಾರದಿಂದ ಅಭ್ಯರ್ಥಿಗಳು ಮನೆ-ಮನೆಗೆ ತೆರಳಿ ಪ್ರಚಾರ ಕಾರ್ಯ ನಡೆಸಬಹುದಾಗಿದೆ. ಬಹಿರಂಗ ಪ್ರಚಾರದ ಅವಧಿ ಮುಕ್ತಾಯಗೊಂಡ ಬಳಿಕ. ಯಾವುದೇ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಗಳು ಸಾರ್ವಜನಿಕ ಸಭೆ ಅಥವಾ ಸಮಾರಂಭಗಳನ್ನು ಮಾಡುವಂತಿಲ್ಲ ಎಂದು ಆಯೋಗ ಸೂಚಿಸಿದೆ.
ಎಸ್‌ಎಂಎಸ್ ಕಳಿಸುವಂತಿಲ್ಲ : ಇತ್ತೀಚಿನ ದಿನಗಳಲ್ಲಿ ಆಧುನಿಕ ಮಾಧ್ಯಮಗಳನ್ನು ಉಪಯೋಗಿಸಿಕೊಂಡು ಪ್ರಚಾರ ಮಾಡಲಾಗುತ್ತಿದೆ. ಆದ್ದರಿಂದ ಬಹಿರಂಗ ಪ್ರಚಾರ ಮುಗಿದ ಬಳಿಕ ಮೊಬೈಲ್ ಮೂಲಕ ಎಸ್‌ಎಂಎಸ್ ಕಳುಹಿಸುವಂತಿಲ್ಲ, ರೇಡಿಯೋ ಹಾಗೂ ಟಿವಿ, ಪತ್ರಿಕಾ ಮಾಧ್ಯಮಗಳ ಮೂಲಕ ಪ್ರಚಾರ ಮಾಡಬಾರದು ಎಂದು ಆಯೋಗ ನಿರ್ದೇಶನ ನೀಡಿದೆ.












Click it and Unblock the Notifications