ಹೊಂಗಸಂದ್ರ ವಾರ್ಡ್ ಗೆದ್ದ ಬಿಜೆಪಿ ಅಭ್ಯರ್ಥಿ ಭಾರತಿ
ಬೆಂಗಳೂರು, ಆಗಸ್ಟ್ 13: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಆರಂಭಕ್ಕೂ ಮುನ್ನವೇ ಬಿಜೆಪಿ ತನ್ನ ವಿಜಯ ಪತಾಕೆ ಹಾರಿಸಿದೆ. ಹೊಂಗಸಂದ್ರ ವಾರ್ಡಿನ ಬಿಜೆಪಿ ಅಭ್ಯರ್ಥಿ ಭಾರತಿ ರಾಮಚಂದ್ರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ಬುಧವಾರ ತಿರಸ್ಕೃತಗೊಂಡಿತ್ತು. ಜಾತಿ ಪ್ರಮಾಣ ಪತ್ರ ಸಲ್ಲಿಸುವಾಗ ಆದ ಗೊಂದಲದಿಂದಾಗಿ ನಾಮಪತ್ರ ಸ್ವೀಕಾರಗೊಂಡಿರಲಿಲ್ಲ. [ಕನ್ನಡದ ತಿಂಡಿಯಲ್ಲಿ ಮತದಾನ ಜಾಗೃತಿ ಘಮ]

ಈ ವಾರ್ಡಿನಲ್ಲಿ ಜೆಡಿಎಸ್ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿಲಿಲ್ಲ. ಹಿಂದುಳಿದ ವರ್ಗದ (ಎ) ಮಹಿಳೆಗೆ ಮೀಸಲಾಗಿದ್ದ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸುವಾಗ ಮಹೇಶ್ವರಿ ಅವರು ಪತಿಯ ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದರು. ಬಿಜೆಪಿ ಮುಖಂಡ ಸತೀಶ್ ರೆಡ್ಡಿ ಅವರು ಈ ಬಗ್ಗೆ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ದೂರನ್ನು ಪರಿಶೀಲನೆ ನಡೆಸಿದ ಚುನಾವಣಾಧಿಕಾರಿಗಳು ನಾಮಪತ್ರವನ್ನು ತಿರಸ್ಕರಿಸಿದ್ದಾರೆ.[ಬಿಬಿಎಂಪಿ ಕದನ : 2 ಕಾಂಗ್ರೆಸ್, 1 ಜೆಡಿಎಸ್ ನಾಮಪತ್ರ ತಿರಸ್ಕೃತ]
ಜೆಡಿಎಸ್ ಸ್ಪರ್ಧಿಸಿದ ಮೂರು ವಾರ್ಡ್ಗಳ ಪೈಕಿ ಹೊಂಗಸಂದ್ರವು ಸೇರಿತ್ತು. ಆ.22ರ ಶನಿವಾರ ಮತದಾನ ನಡೆಯಬೇಕಿತ್ತು. ಉಳಿದಂತೆ ಕಣದಲ್ಲಿ ಶ್ವೇತಾ ಹಾಗೂ ಶಹೀನಾ ಹೆಸರಿನ ಇಬ್ಬರು ಪಕ್ಷೇತರ ಅಭ್ಯರ್ಥಿಗಳಿದ್ದರು. ಈ ಇಬ್ಬರು ನಾಮಪತ್ರ ವಾಪಸ್ ಪಡೆದ ಹಿನ್ನೆಲೆಯಲ್ಲಿ ಭಾರತಿ ರಾಮಚಂದ್ರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
More From
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications