ನಾಮಪತ್ರ ಸಲ್ಲಿಸಿದ ಬಿಬಿಎಂಪಿ ಮಾಜಿ ಮೇಯರ್ ಕಟ್ಟೆ ಸತ್ಯಾ
ಬೆಂಗಳೂರು, ಆಗಸ್ಟ್ 10 : ಮಾಜಿ ಮೇಯರ್ ಕಟ್ಟೆ ಸತ್ಯನಾರಾಯಣ ಅವರಿಗೆ ಕೊನೆ ಕ್ಷಣದಲ್ಲಿ ಬಿಜೆಪಿ ಟಿಕೆಟ್ ನೀಡಿದೆ. ಬಸವನಗುಡಿ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಅವರು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಸೋಮವಾರ ಚನ್ನಮ್ಮನಕೆರೆ ಅಚ್ಚುಕಟ್ಟು ಪ್ರದೇಶದ ಬಿಬಿಎಂಪಿ ಕಚೇರಿಯಲ್ಲಿ ಕಟ್ಟೆ ಸತ್ಯನಾರಾಯಣ ಅವರು ನಾಮಪತ್ರ ಸಲ್ಲಿಸಿದ್ದಾರೆ. 'ಮಾಜಿ ಮೇಯರ್‌ಗಳಿಗೆ ಟಿಕೆಟ್ ನೀಡುವುದಿಲ್ಲ' ಎಂದು ನಿರ್ಣಯ ಕೈಗೊಂಡಿದ್ದ ಬಿಜೆಪಿ ಮೊದಲ ಪಟ್ಟಿಯಲ್ಲಿ ಯಾರಿಗೂ ಟಿಕೆಟ್ ನೀಡಿರಲಿಲ್ಲ. ಆದರೆ, ಮೂರನೇ ಪಟ್ಟಿಯಲ್ಲಿ ಶಾಂತ ಕುಮಾರಿ ಮತ್ತು ಕಟ್ಟೆ ಸತ್ಯನಾರಾಯಣ ಅವರಿಗೆ ಟಿಕೆಟ್ ನೀಡಲಾಗಿತ್ತು. [ಬಿಜೆಪಿ ಬಿಬಿಎಂಪಿ ಚುನಾವಣಾ ವೆಬ್ ಸೈಟ್]

ಬಿಬಿಎಂಪಿಯ ಐದು ವರ್ಷಗಳ ಆಡಳಿತದಲ್ಲಿ ಎಸ್.ಕೆ. ನಟರಾಜ್ (ಸಾರಕ್ಕಿ ವಾರ್ಡ್), ಶಾರದಮ್ಮ (ಶೆಟ್ಟಿಹಳ್ಳಿ ವಾರ್ಡ್), ಡಿ.ವೆಂಕಟೇಶಮೂರ್ತಿ (ಕತ್ರಿಗುಪ್ಪೆ ವಾರ್ಡ್), ಕಟ್ಟೆ ಸತ್ಯನಾರಾಯಣ (ಬಸವನಗುಡಿ ವಾರ್ಡ್) ಮತ್ತು ಎನ್.ಶಾಂತಕುಮಾರಿ (ಮೂಡಲಪಾಳ್ಯ ವಾರ್ಡ್) ಮೇಯರ್ ಆಗಿದ್ದರು. [ಬಿಜೆಪಿ 96 ಅಭ್ಯರ್ಥಿಗಳ ಪಟ್ಟಿ]
ಐವರು ಮಾಜಿ ಮೇಯರ್‌ಗಳ ಪೈಕಿ ಕಟ್ಟೆ ಸತ್ಯನಾರಾಯಣ ಮತ್ತು ಶಾಂತಕುಮಾರಿ ಅವರಿಗೆ ಮಾತ್ರ ಟಿಕೆಟ್ ಸಿಕ್ಕಿದೆ. ಎಸ್.ಕೆ.ನಟರಾಜ್ ಅವರು ಪ್ರತಿನಿಧಿಸುತ್ತಿದ್ದ ಸಾರಕ್ಕಿ ವಾರ್ಡ್ ಮೀಸಲಾತಿ ಬದಲಾಗಿದ್ದು, ಅವರ ಪತ್ನಿಗೆ ಜೆ.ಪಿ.ನಗರ ವಾರ್ಡ್‌ನಲ್ಲಿ ಟಿಕೆಟ್ ಸಿಕ್ಕಿದೆ. ಆದರೆ, ವೆಂಕಟೇಶಮೂರ್ತಿ, ಶಾರದಮ್ಮ ಅವರಿಗೆ ಟಿಕೆಟ್ ಸಿಕ್ಕಿಲ್ಲ. [ಬಿಜೆಪಿ 2ನೇ ಪಟ್ಟಿ]
ವೆಂಕಟೇಶಮೂರ್ತಿ ಪ್ರತಿಭಟನೆ : ಶಾಸಕ ಆರ್. ಅಶೋಕ್ ಅವರು ತಮಗೆ ಟಿಕೆಟ್ ತಪ್ಪಿಸಿದ್ದಾರೆ ಎಂದು ಭಾನುವಾರ ಡಿ.ವೆಂಕಟೇಶಮೂರ್ತಿ ಅವರು ತಮ್ಮ ಬೆಂಬಲಿಗರೊಂದಿಗೆ ವಿದ್ಯಾಪೀಠ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದರು.
ಅಂದಹಾಗೆ ನಾಮಪತ್ರ ಸಲ್ಲಿಕೆ ಮಾಡಲು ಆ.10ರ ಸೋಮವಾರ ಮಧ್ಯಾಹ್ನ 3.30ರ ತನಕ ಅವಕಾಶವಿದೆ. ಆ.22ರ ಶನಿವಾರ ಮತದಾನ ನಡೆಯಲಿದ್ದು, ಆ.25ರ ಮಂಗಳವಾರ ಮತ ಎಣಿಕೆ ನಡೆಯಲಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications