ಬಿಬಿಎಂಪಿ ಚುನಾವಣೆ: ಮಂಗಳವಾರದಿಂದ (ಜ.25) ಮೂರು ದಿನ ಬಿಜೆಪಿ ಸಭೆ

ಬೆಂಗಳೂರು: ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದ್ದು, ಬಿಜೆಪಿ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ದೃಷ್ಟಿಯಿಂದ ಪಕ್ಷವನ್ನು ಸಂಘಟಿಸಲು ಬಿಜೆಪಿ ಜನವರಿ 25, 26, 27 ರಂದು ಬಿಬಿಎಂಪಿ ಚುನಾವಣೆ ಪೂರ್ವ ಸಿದ್ಧತಾ ಸಭೆ ಕರೆದಿದೆ. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿಯೇ ಸಭೆ ನಡೆಯುತ್ತದೆ.

ರಾಜ್ಯ ಬಿಜೆಪಿ ಅಧ್ಯಕ್ಷರು ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿಯೇ ಸಭೆ ನಡೆಯಲಿದೆ. ಮಂಗಳವಾರ ಬೆಳಗ್ಗೆ 10ಕ್ಕೆ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ.

BBMP Election: BJP three days meeting start from Jan 25

ಬೆಂಗಳೂರು ಉತ್ತರ ಜಿಲ್ಲೆ, ದಕ್ಷಿಣ ಜಿಲ್ಲೆ, ಮತ್ತು ಕೇಂದ್ರ ಜಿಲ್ಲಾ ಪದಾಧಿಕಾರಿಗಳು, ಮಂಡಳಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಶಾಸಕರು ಹಾಗೂ ಚುನಾಯಿತ ಜನಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಮುಖ್ಯಮಂತ್ರಿಯೇ ಉಸ್ತುವಾರಿ:

ಜಿಲ್ಲಾ ಉಸ್ತುವಾರಿಗಳ ಹಂಚಿಕೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಉಸ್ತುವಾರಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಉಳಿಸಿಕೊಂಡಿದ್ದಾರೆ.

ಬೆಂಗಳೂರು ಜಿಲ್ಲೆಯ ಉಸ್ತುವಾರಿಗೆ ಸಚಿವರಾದ ಆರ್. ಅಶೋಕ್, ವಿ. ಸೋಮಣ್ಣ, ಡಾ.ಸಿ.ಎನ್. ಅಶ್ವತ್ಥ ನಾರಾಯಣ, ಬೈರತಿ ಬಸವರಾಜ ಸಹಿತ ಹಲವರು ಕಣ್ಣು ಇತ್ತು. ಆದರೆ, ಬಿಬಿಎಂಪಿಗೆ ಚುನಾವಣೆ ಘೋಷಣೆ ಆಗುತ್ತಿರುವ ಕಾರಣದಿಂದ ಒಬ್ಬರಿಗೆ ಸಚಿವಸ್ಥಾನ ಕೊಟ್ಟರೆ ಮತ್ತೊಬ್ಬರಿಗೆ ಮುನಿಸು ಉಂಟಾಗಿ ಅದು ಚುನಾವಣೆಯ ಮೇಲೆ ಪರಿಣಾಮ ಬೀರಬಹುದು ಎಂಬ ಉದ್ದೇಶದಿಂದ ಮುಖ್ಯಮಂತ್ರಿ ಬಳಿಯೇ ಉಸ್ತುವಾರಿ ಉಳಿಸಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.

ಒಂದೂವರೆ ವರ್ಷದಿಂದ ಜನಪ್ರತಿನಿಧಿಗಳಿಲ್ಲ:

ಇನ್ನು ಬಿಬಿಎಂಪಿಗೆ ಕಳೆದ ಒಂದೂವರೆ ವರ್ಷದಿಂದ ಜನಪ್ರತಿನಿಧಿಗಳಿಲ್ಲದೆ ಅಧಿಕಾರಿಗಳ ಆಡಳಿತದಲ್ಲಿಯೇ ಮುಂದುವರಿಯುತ್ತದೆ. ಹೀಗಾಗಿ ಶೀಘ್ರ ಚುನಾವಣೆ ನಡೆಸಲು ಸರ್ಕಾರ ಈಗ ಮನಸ್ಸು ಮಾಡಿದೆ.

Recommended Video

      Team India ಕಳೆದ ಸರಣಿಯ ಬೆಸ್ಟ್ ಕ್ಷಣಗಳು | Oneindia Kannada

      ಮುಂದಿನ ವರ್ಷ ವಿಧಾನಸಭಾ ಚುನಾವಣೆ ಎದುರಾಗುವುದರಿಂದ ಬಿಬಿಎಂಪಿ ಚುನಾವಣೆ ಪ್ರತಿಷ್ಠೆಯ ವಿಷವಾಗಿದೆ. 28 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಂಗಳೂರಿನಲ್ಲಿ ಹೆಚ್ಚಿನ ಶಾಸಕರು ಆಯ್ಕೆ ಆಗಬೇಕಾದರೆ ಈಗ ಬಿಬಿಎಂಪಿ ಚುನಾವಣೆಯನ್ನು ಗೆಲ್ಲುವುದು ಬಿಜೆಪಿಗೆ ಅನಿವಾರ್ಯವಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+