Breaking: ಬಿಬಿಎಂಪಿ ಚುನಾವಣೆ: ಎಲ್ಲಾ 243 ವಾರ್ಡ್‌ಗಳ ಮೀಸಲಾತಿ ಪಟ್ಟಿ ಬಿಡುಗಡೆ

ಬೆಂಗಳೂರು, ಆಗಸ್ಟ್ 03: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯ ಮೀಸಲಾತಿ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸುಪ್ರೀಂಕೋರ್ಟ್ ಆಗಸ್ಟ್‌ 4 ರೊಳಗೆ ಮೀಸಲಾತಿ ಪಟ್ಟಿ ಬಿಡುಗಡೆ ಮಾಡುವಂತೆ ಸೂಚನೆ ನೀಡಿತ್ತು. ಸುಪ್ರೀಂ ನೀಡಿದ ಗಡುವಿನ ಒಂದು ದಿನ ಮೊದಲೇ ಮೀಸಲಾತಿ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಬಿಬಿಎಂಪಿ 198 ವಾರ್ಡ್ ಮರುವಿಂಗಡಣೆ ಮಾಡಿ 243ಕ್ಕೆ ಏರಿಕೆ ಮಾಡಲಾಗಿದೆ. ಈ ವಾರ್ಡ್‌ಗಳಿಗೆ ಮೀಸಲಾತಿ ಪಟ್ಟಿ ಬಿಡುಗಡೆ ಮಾಡಿದೆ. ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ 2 ವರ್ಷಗಳಿಂದ ನ್ಯಾಯಾಲಯದಲ್ಲಿ ಅರ್ಜಿಯ ವಿಚಾರಣೆ ನಡೆಯುತ್ತಿದೆ. ಹೈಕೋರ್ಟ್ 198 ವಾರ್ಡ್‌ಗಳಿಗೆ ಚುನಾವಣೆಯನ್ನು ನಡೆಸುವಂತೆ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿಯನ್ನು ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ಪ್ರಗತಿಯಲ್ಲಿದೆ.

ಸುಪ್ರೀಂಕೋರ್ಟ್‌ನ ತ್ರಿಸದಸ್ಯ ಪೀಠ ಜುಲೈ 28ರಂದು ಅರ್ಜಿ ವಿಚಾರಣೆ ನಡೆಸಿ, ಒಂದು ವಾರದೊಳಗೆ ಬಿಬಿಎಂಪಿಯ 243 ವಾರ್ಡ್ ಮೀಸಲಾತಿ ಪಟ್ಟಿಯನ್ನು ಅಂತಿಮಗೊಳಿಸಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿತ್ತು.

BBMP Election: Government Released The BBMP Wards Reservation List

ಗಡುವು ಮುಗಿಯುವ ಒಂದು ದಿನದ ಮೊದಲೇ ಸರ್ಕಾರ ಮೀಸಲಾತಿ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೀಸಲಾತಿ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಸಾರ್ವಜನಿಕರ ಆಕ್ಷೇಪಣೆಗೆ ಅವಕಾಶವನ್ನು ನೀಡಬೇಕಿದೆ.

BBMP Election: Government Released The BBMP Wards Reservation List

ಬಿಬಿಎಂಪಿಯ 243 ವಾರ್ಡ್‌ಗಳ ಮೀಸಲಾತಿಗೆ ಸಂಬಂಧಿಸಿದಂತೆ ವರದಿ ಸಲ್ಲಿಕೆಗೆ ನ್ಯಾ.ಭಕ್ತವತ್ಸಲ ಸಮಿತಿಯನ್ನು ನೇಮಿಸಲಾಗಿತ್ತು. ಈ ಸಮಿತಿಯು ಜುಲೈ 21ರಂದು ತನ್ನ ವರದಿಯನ್ನು ಸಲ್ಲಿಕೆ ಮಾಡಿತ್ತು. ಇದನ್ನು ಪರಿಶೀಲಿಸಿದ ಸರ್ಕಾರ ಕರಡು ವರದಿಯನ್ನು ಬಿಡುಗಡೆ ಮಾಡಲು ವಿಳಂಬ ಧೋರಣೆ ಅನುಸರಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+