ಬಿಬಿಎಂಪಿ ಚುನಾವಣೆ : ಏಕಸದಸ್ಯ ಪೀಠದ ಆದೇಶ ರದ್ದು

ಬೆಂಗಳೂರು, ಏ.24 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸಲು ಸರ್ಕಾರಕ್ಕೆ ಕಾಲವಕಾಶ ಸಿಕ್ಕಿದೆ. ಮೇ 30ರೊಳಗೆ ಬಿಬಿಎಂಪಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಏಕ ಸದಸ್ಯ ಪೀಠ ನೀಡಿದ್ದ ಆದೇಶವನ್ನು ವಿಭಾಗೀಯ ಪೀಠ ರದ್ದುಗೊಳಿಸಿದೆ.

ಮೇ 30ರೊಳಗೆ ಬಿಬಿಎಂಪಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಏಕ ಸದಸ್ಯ ಪೀಠ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲಾ ಮತ್ತು ರಾಮ್ ಮೋಹನ್ ರೆಡ್ಡಿ ಅವರ ವಿಭಾಗೀಯ ಪೀಠ ಬುಧವಾರ ವಿಚಾರಣೆ ಮುಗಿಸಿ ತೀರ್ಪನ್ನು ಕಾಯ್ದಿರಿಸಿತ್ತು. ಶುಕ್ರವಾರ ನ್ಯಾಯಪೀಠ ತೀರ್ಪನ್ನು ಪ್ರಕಟಿಸಿದೆ. [ಬಿಬಿಎಂಪಿ ಚುನಾವಣೆ ಮುಂದೂಡುವಂತಿಲ್ಲ]

High Court

ಹೈಕೋರ್ಟ್ ತೀರ್ಪಿನಿಂದಾಗಿ ಸರ್ಕಾರಕ್ಕೆ ಸಮಾಧಾನ ಸಿಕ್ಕಿದೆ. ಬಿಬಿಎಂಪಿಯನ್ನು ಮೂರು ಭಾಗಗಳಾಗಿ ವಿಭಜನೆ ಮಾಡಿ ಚುನಾವಣೆ ನಡೆಸಲು ಸರ್ಕಾರ ಚಿಂತನೆ ನಡೆಸಿತ್ತು. ಹೈಕೋರ್ಟ್‌ ತೀರ್ಪಿನಿಂದಾಗಿ ಸರ್ಕಾರಕ್ಕೆ 6 ತಿಂಗಳ ಕಾಲಾವಕಾಶ ಸಿಕ್ಕಿದಂತಾಗಿದೆ.

ಬಿಜೆಪಿಯ ಬಿಬಿಎಂಪಿ ಸದಸ್ಯ­ರಾದ ಸಿ.ಕೆ.ರಾಮಮೂರ್ತಿ ಮತ್ತು ಬಿ.ಸೋಮಶೇಖರ್‌ ಅವರು ಸಕಾಲದಲ್ಲಿ ಚುನಾವಣೆ ನಡೆಸುವಂತೆ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಕೋರ್ಟ್‌ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ ಮೇ.30ರೊಳಗೆ ಚುನಾವಣೆ ನಡೆಸುವಂತೆ ಆದೇಶ ನೀಡಿತ್ತು.

ಏಕ ಸದಸ್ಯ ಪೀಠದ ಆದೇಶ ರದ್ದು

ಏಕ ಸದಸ್ಯ ಪೀಠದ ಆದೇಶ ರದ್ದು

ಮೇ 30ರೊಳಗೆ ಬಿಬಿಎಂಪಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಏಕ ಸದಸ್ಯ ಪೀಠ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲಾ ಮತ್ತು ರಾಮ್ ಮೋಹನ್ ರೆಡ್ಡಿ ಅವರ ವಿಭಾಗೀಯ ಪೀಠ ಆದೇಶವನ್ನು ರದ್ದುಗೊಳಿಸಿ ಶುಕ್ರವಾರ ತೀರ್ಪು ನೀಡಿದೆ.

ಸರ್ಕಾರದ ವಾದ ಏನಾಗಿತ್ತು?

ಸರ್ಕಾರದ ವಾದ ಏನಾಗಿತ್ತು?

ಬಿಬಿಎಂಪಿಯನ್ನು ಮೂರು ಭಾಗಗಳಾಗಿ ವಿಭಜನೆ ಮಾಡಿ ಚುನಾವಣೆ ನಡೆಸುವುದು ಸರ್ಕಾರದ ಚಿಂತನೆಯಾಗಿತ್ತು. ಆದ್ದರಿಂದ ಸರ್ಕಾರದ ಪರವಾಗಿ ವಾದ ಮಂಡನೆ ಮಾಡಿದ್ದ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ 6 ತಿಂಗಳಿನಲ್ಲಿ ಚುನಾವಣೆ ನಡೆಸುತ್ತೇವೆ. ಏಕ ಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಮನವಿ ಮಾಡಿದ್ದರು.

ಬಿಬಿಎಂಪಿ ಸದಸ್ಯರು ಅರ್ಜಿ ಸಲ್ಲಿಸಿದ್ದರು

ಬಿಬಿಎಂಪಿ ಸದಸ್ಯರು ಅರ್ಜಿ ಸಲ್ಲಿಸಿದ್ದರು

ಬಿಜೆಪಿಯ ಬಿಬಿಎಂಪಿ ಸದಸ್ಯ­ರಾದ ಸಿ.ಕೆ.ರಾಮಮೂರ್ತಿ ಮತ್ತು ಬಿ.ಸೋಮಶೇಖರ್‌ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಬಿಬಿಎಂಪಿ ವಿಭಜನೆ ಪ್ರಸ್ತಾಪ ಮುಂದಿಟ್ಟುಕೊಂಡು ಚುನಾವಣೆಯನ್ನು ಮುಂದೂಡಲು ಸರ್ಕಾರ ಚಿಂತನೆ ನಡೆಸಿದೆ. ಚುನಾವಣೆ ಮುಂದೂಡದಂತೆ ಆದೇಶ ನೀಡಬೇಕು ಎಂದು ಮನವಿ ಮಾಡಿದ್ದರು. ಏಕ ಸದಸ್ಯ ಪೀಠ ಮೇ 30ರೊಳಗೆ ಚುನಾವಣೆ ನಡೆಸುವಂತೆ ಆದೇಶ ನೀಡಿತ್ತು.

ವಿಭಜನೆಗೆ ಕಾಲಾವಕಾಶ ಪಡೆದ ಸರ್ಕಾರ

ವಿಭಜನೆಗೆ ಕಾಲಾವಕಾಶ ಪಡೆದ ಸರ್ಕಾರ

ಬಿಬಿಎಂಪಿಯನ್ನು ಮೂರು ಭಾಗಗಳಾಗಿ ವಿಂಗಡನೆ ಮಾಡಲು ಸರ್ಕಾರ ವಿಶೇಷ ವಿಧಾನಸಭೆ ಅಧಿವೇಶನ ನಡೆಸಿ'ಕರ್ನಾಟಕ ನಗರ ಪಾಲಿಕೆಗಳ (ತಿದ್ದುಪಡಿ) ವಿಧೇಯಕ-2015'ವನ್ನು ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆದಿದೆ. ಆದರೆ, ವಿಧಾನಪರಿಷತ್ತಿನಲ್ಲಿ ಅನುಮೋದನೆ ಸಿಕ್ಕಿಲ್ಲ. ಸೋಮವಾರಕ್ಕೆ ಕಲಾಪವನ್ನು ಮುಂದೂಡಲಾಗಿದೆ.

ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ

ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ

ಬಿಬಿಎಂಪಿ ಚುನಾವಣೆಗೆ ತಡೆ ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುತ್ತದೆ ಎಂದು ಮಾಜಿ ಉಪಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಸಕಾಲದಲ್ಲಿ ಪಾಲಿಕೆ ಚುನಾವಣೆ ನಡೆಸುವಂತೆ ಬಿಜೆಪಿ ಮೊದಲಿನಿಂದಲೂ ಹೋರಾಟ ಮಾಡುತ್ತಿದೆ.

ಹೈಕೋರ್ಟ್ ತೀರ್ಪು ಅಚ್ಚರಿ ತಂದಿಲ್ಲ

ಹೈಕೋರ್ಟ್ ತೀರ್ಪು ಅಚ್ಚರಿ ತಂದಿಲ್ಲ

'ಹೈಕೋರ್ಟ್ ಏಕ ಸದಸ್ಯ ಪೀಠ ನೀಡಿದ್ದ ಆದೇಶವನ್ನು ವಿಭಾಗೀಯ ಪೀಠ ರದ್ದುಗೊಳಿಸಿದ ಆದೇಶ ಅಚ್ಚರಿ ತಂದಿಲ್ಲ. ಒಂದು ವಾರದ ಬೆಳವಣಿಗೆಗಳನ್ನು ನೋಡಿ ಇದನ್ನು ನಿರೀಕ್ಷೆ ಮಾಡಿದ್ದೆ. ಸರ್ಕಾರ ಬಿಬಿಎಂಪಿಯನ್ನು ಮೂರು ಭಾಗಗಳಾಗಿ ವಿಭಜನೆ ಮಾಡಲು ಹೊರಟಿದೆ. ಇದಕ್ಕೆ ಎಷ್ಟರ ಮಟ್ಟಿನ ಜಯ ಸಿಗಲಿದೆ ಎಂದು ಕಾದು ನೋಡುತ್ತೇವೆ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+