BBMP Election : ಬಿಬಿಎಂಪಿ ಚುನಾವಣೆ: ಡಿ.31ರೊಳಗೆ ಚುನಾವಣೆ ನಡೆಸಿ ಹೈಕೋರ್ಟ್‌ ಆದೇಶ

ಬೆಂಗಳೂರು, ಸೆಪ್ಟೆಂಬರ್ 30: ಬಿಎಂಎಂಪಿ ಚುನಾವಣೆ ಯಾವಾಗ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಇದಕ್ಕೆ ಹೈಕೋರ್ಟ್‌ ನ.30 ರೊಳಗೆ ಮೀಸಲಾತಿಯನ್ನು ಪ್ರಕಟಿಸಬೇಕು. ಡಿ.31 ರೊಳಗೆ ಬಿಬಿಎಂಪಿ ಚುನಾವಣೆ ನಡೆಸಲು ಆದೇಶವನ್ನು ಮಾಡಿದೆ.

ಬಿಬಿಎಂಪಿಯಲ್ಲಿ ಸದಸ್ಯರುಗಳಿಲ್ಲದೇ ಎರಡು ವರ್ಷಗಳೇ ಕಳೆದುಹೋಗಿದೆ. ಆದರೆ ಸರ್ಕಾರ ಬೇರೆ ಬೇರೆ ಕಾರಣಗಳನ್ನು ನೀಡುತ್ತ ಚುನಾವಣೆಯನ್ನು ಮುಂದೂಡಿಕೆ ಮಾಡಲು ತಂತ್ರಗಳನ್ನು ಹೆಣೆಯುತ್ತಲೇ ಇದೆ. ಶೀಘ್ರ ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಹಿಂದೇಟು ಹಾಕುತ್ತಿದೆ. ಒಬಿಸಿ ಸೇರಿಸಿ ಹೊಸ ಮೀಸಲಾತಿ ಪಟ್ಟಿಗೆ ಕಾಲಾವಕಾಶ ನೀಡುವಂತೆ ಸರ್ಕಾರ ಕೋರಿಕೆಯನ್ನು ಸಲ್ಲಿಸಿತ್ತು. ಹೊಸ ಮೀಸಲಾತಿ ಪಟ್ಟಿ ಪ್ರಕಟಕ್ಕೆ 16 ವಾರಗಳ ಕಾಲಾವಕಾಶ ಕೋರಿತ್ತು. ಅಂದರೆ 4 ತಿಂಗಳ ಕಾಲಾವಕಾಶವನ್ನು ನೀಡುವಂತೆ ಪ್ರಮಾಣಪತ್ರ ಸಲ್ಲಿಸಲಾಗಿತ್ತು. ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿತ್ತು. ಸರ್ಕಾರದ ಪ್ರಮಾಣಪತ್ರಕ್ಕೆ ಹೈಕೋರ್ಟ್ ಅಸಮಾಧಾನವನ್ನು ವ್ಯಕ್ತಪಡಿಸಿತ್ತು. ಇಷ್ಟು ಸಮಯ ಕೇಳಿದರೆ ತಕ್ಷಣ ಚುನಾವಣೆಗೆ ಆದೇಶಿಸಬೇಕಾದೀತು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿತ್ತು. ನ್ಯಾ. ಹೇಮಂತ್ ಚಂದನ್ ಗೌಡರ್ ಎಚ್ಚರಿಕೆಯನ್ನು ನೀಡಿದ್ದರು.

ಡಿ.31, 2022 ರೊಳಗೆ ಬಿಬಿಎಂಪಿ ಚುನಾವಣೆ ನಡೆಸಿ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಡಿ.31, 2022 ರೊಳಗೆ ಬಿಬಿಎಂಪಿ ಚುನಾವಣೆ ನಡೆಸಿ ಎಂದು ಆದೇಶವನ್ನು ನೀಡಿದೆ. ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆಯನ್ನು ನೀಡಿದೆ.

BBMP Election: High Court ordered to conduct elections by Before December 31

ಬಿಬಿಎಂಪಿ ವಾರ್ಡ್ ವಾರು ಮೀಸಲಾತಿ ಪಟ್ಟಿ ರದ್ದು ಹೈಕೋರ್ಟ್ ಬಿಬಿಎಂಪಿ ವಾರ್ಡ್ ವಾರು ಮೀಸಲಾತಿ ಪಟ್ಟಿ ರದ್ದುಪಡಿಸಿದೆ. ಸರ್ಕಾರ ಒಬಿಸಿ ಆಯೋಗಕ್ಕೆ ಅಂಕಿ ಅಂಶ ಒದಗಿಸಬೇಕು. ನ.30 ರೊಳಗೆ ಮೀಸಲಾತಿ ಪ್ರಕಟಿಸಬೇಕು. ಡಿ.31 ರೊಳಗೆ ಬಿಬಿಎಂಪಿ ಚುನಾವಣೆ ನಡೆಸಬೇಕೆಂದು ಆದೇಶವನ್ನು ಮಾಡಿದೆ.

BBMP Election: High Court ordered to conduct elections by Before December 31

ಹೊಸವರ್ಷಕ್ಕೂ ಮುನ್ನ ಬಿಬಿಎಂಪಿ ಚುನಾವಣೆ?
2023 ಹೊಸ ವರ್ಷ ಪ್ರಾರಂಭಕ್ಕೂ ಮುನ್ನವೇ ಬಿಬಿಎಂಪಿ ಚುನಾವಣೆ ನಡೆಯುತ್ತದೆಯೇ ಎಂಬ ಪ್ರಶ್ನೆ ಮೂಡಿದೆ. ಹೈಕೋರ್ಟ್ ಖಡಕ್ ಆದೇಶವನ್ನು ನೀಡಿದ್ದರು ಸರ್ಕಾರ ಇನ್ಯಾವುದೋ ಕುಂಟು ನೆಪವನ್ನು ಹೇಳಿ ಚುನಾವಣೆಯನ್ನು ಮುಂದೂಡಲು ಪ್ರಯತ್ನಿಸುತ್ತಾ ಎಂಬ ಪ್ರಶ್ನೆಯು ಎದುರಾಗಿದೆ. ಹೈಕೋರ್ಟ್‌ ಆದೇಶದಂತೆ ಎಲ್ಲವೂ ನಡೆದರೇ ನೂತನ ವರ್ಷದೊಳಗೆ ಬಿಬಿಎಂಪಿ ಚುನಾವಣೆ ನಡೆದು 243 ವಾರ್ಡ್‌ಗಳಿಗೆ ಸದಸ್ಯರು ಲಭ್ಯವಾಗಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+