ಬಿಬಿಎಂಪಿ ಕದನ : ಜೆಡಿಎಸ್ ಅಭ್ಯರ್ಥಿ ಪತಿ ಬಂಧನ
ಬೆಂಗಳೂರು, ಆಗಸ್ಟ್ 22 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ರಾತ್ರಿ ಮತದಾರರಿಗೆ 1 ಲಕ್ಷ ಹಣವನ್ನು ಹಂಚುತ್ತಿದ್ದರು ಎಂಬ ಆರೋಪದ ಮೇಲೆ ಬಂಧಿಸಲಾಗಿದೆ.
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಜೆ.ಪಿ.ಪಾರ್ಕ್ ವಾರ್ಡ್ (ನಂ 17)ನಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವರಲಕ್ಷ್ಮೀ ಗಂಗಣ್ಣ ಅವರ ಪತಿ ಗಂಗಣ್ಣ ಅವರನ್ನು ಪೊಲೀಸರು ರಾತ್ರಿ 1 ಗಂಟೆ ಸುಮಾರಿಗೆ ಬಂಧಿಸಿದ್ದಾರೆ. ಮತದಾರರಿಗೆ ಹಣ ಹಂಚುತ್ತಿದ್ದರು ಎಂಬ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. [ಮತದಾನದ ಕ್ಷಣ-ಕ್ಷಣದ ಮಾಹಿತಿ]

ಅಭ್ಯರ್ಥಿ ಬೆಂಬಲಿಗರ ಬಂಧನ : ಜೀವನ್ ಭೀಮಾನಗರ ಠಾಣೆ ಪೊಲೀಸರು ಜೆಡಿಎಸ್ ಅಭ್ಯರ್ಥಿ ಬೆಂಬಲಿಗರನ್ನು ಬಂಧಿಸಿ ದೌರ್ಜನ್ಯವೆಸಗಿದ್ದಾರೆ ಎಂದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಆರೋಪಿಸಿದ್ದಾರೆ. ವಾರ್ಡ್ ನಂಬರ್ 88ರ ಜೆಡಿಎಸ್ ಅಭ್ಯರ್ಥಿ ಆಯೇಷಾ ಬೇಗಂ ಬೆಂಬಲಿಗರನ್ನು ಶುಕ್ರವಾರ ರಾತ್ರಿ ಬಂಧಿಸಿ ಪೊಲೀಸ್ ಠಾಣೆಯಲ್ಲಿ ಇಟ್ಟುಕೊಂಡಿದ್ದಾರೆ ಎಂದು ದೇವೇಗೌಡರು ಮಾಧ್ಯಮಗಳಿಗೆ ಹೇಳಿದ್ದಾರೆ.[ಬಿಬಿಎಂಪಿ ಚುನಾವಣೆ ಫಲಿತಾಂಶ, ಇದು ಓದುಗರ ತೀರ್ಪು]
'ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಜಯಗಳಿಸಬಾರದು ಎಂದು ಕಾಂಗ್ರೆಸ್ ಸರ್ಕಾರ ಇಂತಹ ಕೀಳು ಮಟ್ಟದ ರಾಜಕೀಯ ಮಾಡುತ್ತಿದೆ' ಎಂದು ಆರೋಪಿಸಿರುವ ದೇವೇಗೌಡರು ಶನಿವಾರ ಬೆಳಗ್ಗೆ ಪೊಲೀಸ್ ಠಾಣೆಗೆ ತೆರಳಿದ್ದಾರೆ.












Click it and Unblock the Notifications