ಬಿಬಿಎಂಪಿ ಕದನ : ಶಿವಾಜಿನಗರ ಕ್ಷೇತ್ರದಲ್ಲಿ ಯಾರಿಗೆ ಗೆಲುವು?
ಬೆಂಗಳೂರು, ಆಗಸ್ಟ್ 19 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಬೆಂಗಳೂರು ನಗರದ ಐವರು ಸಚಿವರಿಗೆ ಮಹತ್ವದ್ದಾಗಿದೆ. ತಮ್ಮ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲು ಅವರು ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಮೂಲಸೌಲಭ್ಯ ಅಭಿವೃದ್ಧಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಹಾಗೂ ಹಜ್ ಖಾತೆ ಸಚಿವರಾಗಿರುವ ಆರ್.ರೋಷನ್ ಬೇಗ್ ಅವರು ಪ್ರತಿನಿಧಿಸುವ ಶಿವಾಜಿನಗರ ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರಿದೆ.
ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ 7 ವಾರ್ಡ್‌ಗಳಿವೆ. 2010ರ ಚುನಾವಣೆಯಲ್ಲಿ ಏಳು ವಾರ್ಡ್‌ಗಳಲ್ಲಿ 4ರಲ್ಲಿ ಕಾಂಗ್ರೆಸ್, 2ರಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಒಂದು ಸ್ಥಾನ ಪಕ್ಷೇತರರ ಪಾಲಾಗಿತ್ತು. [ಚುನಾವಣಾ ಪ್ರಚಾರದ ಚಿತ್ರಗಳು]

ಈ ಬಾರಿ ಸಚಿವ ರೋಷನ್ ಬೇಗ್ ಅವರು 7 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಪ್ರಯತ್ನ ನಡೆಸುತ್ತಿದ್ದಾರೆ. ಕಳೆದ ಬಾರಿ ಶಿವಾಜಿನಗರ ವಾರ್ಡ್‌ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಜಯಗಳಿಸಿದ್ದ ಫರೀದಾ ಅವರಿಗೆ ಈ ಬಾರಿ ಕಾಂಗ್ರೆಸ್ ಟಿಕೆಟ್ ನೀಡಿ ಕಣಕ್ಕಿಳಿಸಲಾಗಿದೆ.
ಶಿವಾಜಿನಗರ ವಿಧಾನಸಭೆ ವ್ಯಾಪ್ತಿಯಲ್ಲಿ ರೆಸೆಲ್ ಮಾರುಕಟ್ಟೆ, ಬೌರಿಂಗ್ ಆಸ್ಪತ್ರೆಗಳಿವೆ. ಚರ್ಚ್, ಮಸೀದಿ, ದೇವಾಲಯಗಳು ಇರುವುದರಿಂದ ಎಲ್ಲಾ ಧರ್ಮೀಯರು ಶಿವಾಜಿನಗರಕ್ಕೆ ಭೇಟಿ ನೀಡುತ್ತಾರೆ. ಇದು ಪ್ರಮುಖ ವ್ಯಾಪಾರಿ ಕೇಂದ್ರವಾಗಿರುವುದರಿಂದ ಇಲ್ಲಿ ಕಸ ವಿಲೇವಾರಿ ಸಮಸ್ಯೆ ಇದೆ. [ರಾಮಸ್ವಾಮಿ ಪಾಳ್ಯ ವಾರ್ಡ್ 'ಕೈ'ಗೆ ಬಂಡಾಯದ ಬಿಸಿ]
ವಾರ್ಡ್‌ಗಳ ವಿವರಗಳು : ಜಯಮಹಲ್ ವಾರ್ಡ್ (63) ವಾರ್ಡ್‌ನಲ್ಲಿ ಎಂ.ಕೆ.ಗುಣಶೇಖರ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಬಿಜೆಪಿ ಬಾಲಕೃಷ್ಣ ಅವರನ್ನು ಕಣಕ್ಕಿಳಿಸಿದ್ದು, ಜೆಡಿಎಸ್‌ನಿಂದ ಖಲೀಮ್ ಪಾಷಾ ಅವರು ಅಖಾಡದಲ್ಲಿದ್ದಾರೆ.
ಹಲಸೂರು ವಾರ್ಡ್ (90)ನಲ್ಲಿ ಮೂರು ಪಕ್ಷಗಳ ಅಭ್ಯರ್ಥಿಗಳ ಜೊತೆ ಮಾಜಿ ಸದಸ್ಯರಾದ ಶರವಣ ಅವರ ಪತ್ನಿ ಮಮತಾ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದು ಕುತೂಹಲ ಮೂಡಿಸಿದೆ. ಕಾಂಗ್ರೆಸ್‌ನಿಂದ ಎನ್.ಯಶೋಧಾ, ಬಿಜೆಪಿಯಿಂದ ಸಿ.ಜಿ.ಸುಮತಿ ರವಿ ಮತ್ತು ಜೆಡಿಎಸ್‌ನಿಂದ ಅಶ್ವಿನಿ ಅವರು ಕಣದಲ್ಲಿದ್ದಾರೆ. [ಒಣಹಣ್ಣುಗಳ ಸರದಾರ ರಸಲ್ ಮಾರ್ಕೆಟ್ ಮಹಮ್ಮದ್]
ಬಂಡಾಯದ ಬಿಸಿ : ರಾಮಸ್ವಾಮಿ ಪಾಳ್ಯ (62) ವಾರ್ಡ್‌ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಂಡಾಯದ ಬಿಸಿ ತಟ್ಟಿತ್ತು. ಮೇರಿ ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಮಾಜಿ ಸಂಸದ ಎಚ್.ಟಿ.ಸಾಂಗ್ಲಿಯಾನ ಅವರು ಮೇರಿ ಅವರಿಗೆ ಬೆಂಬಲ ನೀಡಿದ್ದರು. ಆದರೆ, ಸಚಿವ ರೋಷನ್ ಬೇಗ್ ಸಂಧಾನ ಸಭೆ ನಡೆಸಿ ಬಂಡಾಯದ ಬಿಸಿ ತಗ್ಗಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ನೇತ್ರಾವತಿ ಕೃಷ್ಣೇಗೌಡ, ಬಿಜೆಪಿಯಿಂದ ಗಿರಿಜಾ ಪ್ರಕಾಶ್, ಜೆಡಿಎಸ್‌ನಿಂದ ಸಿ.ಸಮೀನಾ ಸ್ಪರ್ಧಿಸಿದ್ದಾರೆ.

ಭಾರತೀ ನಗರ ವಾರ್ಡ್ (91)ನಿಂದ ಮಾಜಿ ಬಿಬಿಎಂಪಿ ಸದಸ್ಯ ಶಕೀಲ್ ಅಹಮದ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಬಿಜೆಪಿಯಿಂದ ಉಮಾಮಹೇಶ್ವರಿ ಮತ್ತು ಜೆಡಿಎಸ್‌ನಿಂದ ಸೈಯದ್ ಮುಜಾಯಿದ್ ಕಣದಲ್ಲಿದ್ದಾರೆ.
ಪಕ್ಷೇತರ ಅಭ್ಯರ್ಥಿ ಗೆದ್ದಿದ್ದರು : ಶಿವಾಜಿನಗರ (92)ವಾರ್ಡ್‌ನಲ್ಲಿ 2010ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಜಯಗಳಿಸಿದ್ದ ಫರೀದಾ ಅವರಿಗೆ ಈ ಬಾರಿ ಕಾಂಗ್ರೆಸ್ ಟಿಕೆಟ್ ನೀಡಿದೆ. ಬಿಜೆಪಿಯಿಂದ ಸರಳಾ ಮತ್ತು ಜೆಡಿಎಸ್‌ನಿಂದ ರಜಿಯಾ ಸುಲ್ತಾನ್ ಅವರು ಕಣದಲ್ಲಿದ್ದಾರೆ.
ಕಟ್ಟಾ ಪುತ್ರ ಗೆದ್ದಿದ್ದರು : ವಸಂತ ನಗರ ವಾರ್ಡ್ (93)ರಲ್ಲಿ 2010ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡ ಪುತ್ರ ಕಟ್ಟಾ ಜಗದೀಶ್ ಗೆಲುವು ಸಾಧಿಸಿದ್ದರು. ಈ ಬಾರಿ ಮೀಸಲಾತಿ ಬದಲಾಗಿದ್ದು, ಬಿಜೆಪಿಯಿಂದ ಕೆ.ಯಶೋಧ, ಕಾಂಗ್ರೆಸ್‌ನಿಂದ ಬಿ.ಆರ್.ನಾಯ್ಡು ಮತ್ತು ಜೆಡಿಎಸ್‌ನಿಂದ ಜೆ.ಸಿ.ರವಿ ಕಣದಲ್ಲಿದ್ದಾರೆ.
ಸಂಪಂಗಿರಾಮನಗರ (110) ವಾರ್ಡ್‌ನಲ್ಲಿ ಬಿಜೆಪಿಯಿಂದ ಡಾ.ಆನಂದ ಕುಮಾರ್, ಕಾಂಗ್ರೆಸ್‌ನಿಂದ ವಸಂತಕುಮಾರ್, ಜೆಡಿಎಸ್‌ನಿಂದ ಧನಲಕ್ಷ್ಮೀ ಅವರು ಚುನಾವಣಾ ಕಣದಲ್ಲಿದ್ದಾರೆ.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
CBSE 10ನೇ ತರಗತಿ ಫಲಿತಾಂಶ 2026: ದಕ್ಷಿಣ ಭಾರತದ ವಿದ್ಯಾರ್ಥಿಗಳದ್ದೇ ಮೇಲುಗೈ, ಶೇ. 98.91ರಷ್ಟು ಸಾಧನೆ ಮಾಡಿದ ಬೆಂಗಳೂರು -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications