ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ಮೀಸಲಾತಿ ಪಟ್ಟಿ ಅಂತಿಮಗೊಳಿಸಿದ ಸರ್ಕಾರ: ಶೀಘ್ರವೇ ಚುನಾವಣೆ?

|
Google Oneindia Kannada News

ಬೆಂಗಳೂರು, ಆಗಸ್ಟ್ 16: ಬಿಬಿಎಂಪಿ ಚುನಾವಣೆಯ ಸಂಬಂಧ 243 ವಾರ್ಡ್‌ಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ಪಟ್ಟಿ ಪ್ರಕಟ ಮಾಡಿದೆ. ವಾರ್ಡ್ ಮೀಸಲಾತಿ ಪಟ್ಟಿಯನ್ನು ಅಂತಿಮಗೊಳಿಸಿದ್ದು ಮಂಗಳವಾರ ಬಿಡುಗಡೆ ಮಾಡಿದೆ. ಆಕ್ಷೇಪಣೆ ನಡುವೆಯೂ ಹಳೇ ಪಟ್ಟಿಯನ್ನೇ ಸರ್ಕಾರ ಅಂತಿಮಗೊಳಿಸಿದೆ.

2011ರ ಜನಗಣತಿಯಂತೆ ಮೀಸಲಾತಿ ಅಂತಿಮಗೊಳಿಸಿ ಪಟ್ಟಿ ಬಿಡುಗಡೆ ಮಾಡಿದೆ. ಬಿಬಿಎಂಪಿ ಚುನಾವಣೆಯ ಸಂಬಂಧ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿತ್ತು. ಮೀಸಲಾತಿ ಪಟ್ಟಿಗೆ ಪ್ರತಿಪಕ್ಷಗಳು ಸೇರಿದಂತೆ ಆಡಳಿತ ಪಕ್ಷದ ಸದಸ್ಯರಿಂದಲೂ ತೀವ್ರವಾದ ಆಕ್ಷೇಪ ಕೇಳಿ ಬಂದಿತ್ತು. ಆಕ್ಷೇಪಣೆಯನ್ನು ಸಲ್ಲಿಸಲು ಅವಕಾಶ ನೀಡಿತ್ತು. ಆಕ್ಷೇಪಣೆ ಸಲ್ಲಿಕೆ ಆಗಸ್ಟ್ 10 ಕಡೆಯ ದಿನವಾಗಿತ್ತು. 2000ಕ್ಕೂ ಹೆಚ್ಚು ಆಕ್ಷೇಪಣೆಗಳು ಸಲ್ಲಿಕೆಯಾಗಿದ್ದವು. ಈ ಆಕ್ಷೇಪಣೆಯನ್ನು ಪರಿಶೀಲನೆ ಮಾಡಿದ ನಂತರ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

ಬಿಬಿಎಂಪಿಯಲ್ಲಿದ್ದ 198 ವಾರ್ಡ್‌ಗಳನ್ನು 2011ರ ಜನಸಂಖ್ಯಾ ಆಧಾರದಲ್ಲಿ 243 ವಾರ್ಡ್‌ಗಳಾಗಿ ಮರು ವಿಂಗಡಣೆಯನ್ನು ಮಾಡಲಾಯಿತು. ವಾರ್ಡ್ ಮರುವಿಂಗಡಣೆ ಬಳಿಕ, ರಾಜ್ಯ ಸರ್ಕಾರ ಅವಸರದಲ್ಲಿ ಮೀಸಲಾತಿ ಪಟ್ಟಿ ಬಿಡುಗಡೆ ಮಾಡಿತ್ತು.

BBMP Election: The State Government Released The BBMP Wards Final Reservation List

ಮೀಸಲಾತಿ ಪ್ರಕಟಿಸುವ ವೇಳೆ ಬಿಬಿಎಂಪಿ ಕಾಯ್ದೆ ಉಲ್ಲಂಘನೆಯಾಗಿದೆ ಆರೋಪ ಕೇಳಿಬಂದಿತ್ತು. ಆಡಳಿತ ಪಕ್ಷ ಬಿಜೆಪಿ ತನಗೆ ಅನುಕೂಲವಾಗುವಂತೆ ಮೀಸಲಾತಿ ಪಟ್ಟಿ ಬಿಡುಗಡೆ ಮಾಡಿದೆ. ಈ ಮೀಸಲಾತಿಗೆ ತೀವ್ರವಾದ ಆಕ್ಷೇಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೀಸಲಾತಿಯನ್ನು ಅಲ್ಪ ತಿದ್ದುಪಡಿ ಮಾಡಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ.

ಮಧ್ಯಂತರ ಆದೇಶ ನೀಡಲು ಹೈಕೋರ್ಟ್ ನಿರಾಕರಣೆ:

ಈ ಮಧ್ಯೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಾರ್ಡ್‌ಗಳ ಪುನರ್‌ ವಿಂಗಡಣೆ ಕುರಿತಂತೆ ಮಧ್ಯಂತರ ಆದೇಶ ನೀಡಲು ಹೈಕೋರ್ಟ್ ನಿರಾಕರಿಸಿದೆ.

BBMP Election: The State Government Released The BBMP Wards Final Reservation List

ಅಲ್ಲದೆ, ವಾರ್ಡ್ ವಿಂಗಡಣೆಯನ್ನು ವಿರೋಧಿಸಿ ಸಲ್ಲಿಸಿರುವ ಅರ್ಜಿಗಳ ಬಗ್ಗೆ ಬಲವಾದ ಆಕ್ಷೇಪ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗ ಅರ್ಜಿದಾರರ ಯಾವುದೇ ಮನವಿ ಪರಿಗಣಿಸಬಾರದೆಂದು ನ್ಯಾಯಾಲಯಕ್ಕೆ ಮನವಿ ಮಾಡಿವೆ.

ವಾರ್ಡ್‌ ಪುನರ್ ವಿಂಗಡಣೆ ಮತ್ತು ಮೀಸಲಾತಿ ಬಗ್ಗೆ ಸಾಕಷ್ಟು ಆಕ್ಷೇಪಗಳಿದ್ದರೂ ಸಹ ಸರ್ಕಾರ ಅಂತಿಮ ಪಟ್ಟಿ ಹೊರಡಿಸಿದೆ. ಶೀಘ್ರದಲ್ಲಿಯೇ ಬಿಬಿಎಂಪಿಗೆ ಚುನಾವಣೆ ಘೋಷಣೆಯಾಗಲಿದೆಯೇ ಎಂಬ ನಿರೀಕ್ಷೆ ಬೆಂಗಳೂರಿಗರಲ್ಲಿ ಹೆಚ್ಚಾಗಿದೆ.

Recommended Video

ಬಿಜೆಪಿಯೊಳಗೆ ಸಚಿವ ಬಿ.ಶ್ರೀರಾಮುಲು ಸಿಡಿಸಿದ ಕಿಡಿ | Oneindia Kannada

English summary
The state government published the reservation Final list for the BBMP elections On Tuseday. The reservation list was strongly opposed by members of the ruling party, including the opposition parties. More than 2000 objections have been submitted against reservation list.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X