ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ಮತದಾರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ವಾರ್ಡ್ ಕಚೇರಿಗೆ ಭೇಟಿ ನೀಡಿ

|
Google Oneindia Kannada News

ಬೆಂಗಳೂರು, ಆಗಸ್ಟ್ 25: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 2022ರ ಚುನಾವಣೆ ಸಂಬಂಧ ಕರ್ನಾಟಕ ರಾಜ್ಯ ಚುನಾವಣೆ ಆಯೋಗವು ಗುರುವಾರ ವಾರ್ಡವಾರು ಮತದಾರರ ಪಟ್ಟಿ ಪ್ರಕಟಿಸಿದೆ. ಬಿಬಿಎಂಪಿ 243 ವಾರ್ಡ್‌ಗಳಲ್ಲಿ 79,08,394 ಮತದಾರರಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗ ಆಯುಕ್ತ ಬಸವರಾಜು ಮಾಹಿತಿ ನೀಡಿದರು.

ಬಿಬಿಎಂಪಿಯ 243 ವಾರ್ಡವಾರು ಕರಡು ಮತದಾರರ ಪಟ್ಟಿ ಪ್ರಕಟಿಸುವ ಸಂಬಂಧ ಗುರುವಾರ ಮಧ್ಯಾಹ್ನ ರಾಜ್ಯ ಚುನಾವಣಾ ಆಯೋಗ ಹಾಗೂ ಬಿಬಿಎಂಪಿ ಜಂಟಿ ಸುದ್ದಿಗೋಷ್ಠಿ ನಡೆಸಿ, ವಿವರ ಹಂಚಿಕೊಂಡಿವೆ. ಈ ವೇಳೆ ಚುನಾವಣಾಧಿಕಾರಿಗಳು ಮಾತನಾಡಿ, ಬಿಬಿಎಂಪಿ ಚುನಾವಣೆ ಸಲುವಾಗಿ ಜುಲೈನಲ್ಲಿ ಬಿಬಿಎಂಪಿ ವ್ಯಾಪ್ತಿಯ 243 ವಾರ್ಡ್‌ಗಳ ಕ್ಷೇತ್ರ ಪುನರ್‌ವಿಂಗಡಣೆ ಮಾಡಿ ಎಲ್ಲ ವಾರ್ಡ್‌ಗಳ ಗಡಿ ಗುರುತಿಸಿ ಅಂತಿಮ ಪಟ್ಟಿ ಹೊರಡಿಸಲಾಗಿದೆ. ನಂತರ ಜುಲೈ 15ರಂದು ವಾರ್ಡ್‌ವಾರು ಮತದಾರರ ಪಟ್ಟಿ ತಯಾರಿಸಲು ಸೂಚಿಸಲಾಗಿತ್ತು ಎಂದರು.

Ganesh Chaturthi 2022 : ಗಣೇಶ ಚತುರ್ಥಿ ಪೂಜಾ ವಿಧಾನ, ಶುಭ ಮುಹೂರ್ತ ಹಾಗೂ ಮಹತ್ವGanesh Chaturthi 2022 : ಗಣೇಶ ಚತುರ್ಥಿ ಪೂಜಾ ವಿಧಾನ, ಶುಭ ಮುಹೂರ್ತ ಹಾಗೂ ಮಹತ್ವ

ಅದರಂತೆ ಜುಲೈ 31ರಂದು ವಿಧಾನಸಭಾ ಕ್ಷೇತ್ರವಾರು ಮತದಾರರ ಮಾಹಿತಿಯನ್ನು ವಾರ್ಡ್‌ವಾರು ಪುನರ್‌ವಿಂಗಡಿಸಿ ಮತದಾರರ ಪಟ್ಟಿಯನ್ನು ಸಿದ್ದಗೊಳಿಸಲಾಗಿದೆ. ಬಿಬಿಎಂಪಿಯಡಿ 243 ವಾರ್ಡ್ ಗಳಲ್ಲಿ ಒಟ್ಟು 79,08,394 ಮತದಾರರಿದ್ದಾರೆ. ಅದರಲ್ಲಿ 41,09,496 ಪುರುಷರು 37,97,497 ಮಹಿಳೆಯರು ಹಾಗೂ 1,401 ಇತರೆ ಮತದಾರರು ಇದ್ದಾರೆ. ಒಂದು ವಾರ್ಡ್‌ನಲ್ಲಿ ಕನಿಷ್ಠ 18,604 ಹಾಗೂ ಗರಿಷ್ಠ 51,653 ಮತದಾರರು ಇದ್ದಾರೆ ಎಂದು ಅವರು ವಿವರಿಸಿದರು.

ವಾರ್ಡ್ ಕಚೇರಿ, ವೆಬ್‌ಸೈಟ್‌ನಲ್ಲಿ ಮತದಾರರ ಪಟ್ಟಿ ಲಭ್ಯ

ವಾರ್ಡ್ ಕಚೇರಿ, ವೆಬ್‌ಸೈಟ್‌ನಲ್ಲಿ ಮತದಾರರ ಪಟ್ಟಿ ಲಭ್ಯ

ರಾಜ್ಯ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಆಗಸ್ಟ್ 25ರಂದು ಗುರುವಾರ ಬಿಬಿಎಂಪಿ ವ್ಯಾಪ್ತಿಯ ವಾರ್ಡ್‌ವಾರು ಮತದಾರರ ಪಟ್ಟಿಯ ಕರಡು ಪ್ರತಿಯನ್ನು ವಲಯ ಜಂಟಿ ಆಯುಕ್ತರುಗಳ ಕಚೇರಿ, ಆಯಾ ವ್ಯಾಪ್ತಿಯ ಮತದಾರರ ನೊಂದಣಾಧಿಕಾರಿ/ ಸಹಾಯಕ ಮತದಾರರ ನೊಂದಣಾಧಿಕಾರಿ ಮತ್ತು ವಾರ್ಡ್ ಕಚೇರಿಗಳಲ್ಲಿ ಲಭ್ಯವಿದೆ. ಜತೆಗೆ www.bbmp.gov.in ಅಧಿಕೃತ ವೆಬ್‌ಸೈಟ್‌ನಲ್ಲೂ

ಕರಡು ಮತದಾರರ ಪ್ರಚುರ ಪಡಿಸಲಾಗಿದೆ.

ಅಧಿಕ ಮತದಾನಕ್ಕೆ ಕ್ರಮ ಕೈಗೊಳ್ಳಲಾಗುವುದು

ಅಧಿಕ ಮತದಾನಕ್ಕೆ ಕ್ರಮ ಕೈಗೊಳ್ಳಲಾಗುವುದು

ಬಿಬಿಎಂಪಿ ಮತದಾರರ ಪಟ್ಟಿಯಿಂದ ತಮ್ಮ ಹೆಸರು ಬಿಟ್ಟಿದ್ದರೆ ಅಂತವರು ತಿಳಿಸಬೇಕು. ಬಿಬಿಎಂಪಿ ಚುನಾವಣೆಯಲ್ಲಿ 2010ರಲ್ಲಿ ಶೇ.44 ಮತದಾನ, 2015ರಲ್ಲಿ ಶೇ.49ರಷ್ಟು ಮತದಾನವಾಗಿತ್ತು. ಇದರ ಹೊರತು ಮಹಾನಗರ ಮುಂಬೈನಲ್ಲಿ 2017ರಲ್ಲಿ ಅಧಿಕ ಶೇ. 55ರಷ್ಟು ಮತದಾನವಾಗಿತ್ತು. ಈ ಬಾರಿ ಸಾರ್ವತ್ರಿಕ ಚುನಾವಣೆಯಲ್ಲಿ ಬೆಂಗಳೂರಿನಲ್ಲಿ ಅಧಿಕ ಮತದಾನ ವಾಗುವಂತೆ ಪ್ರಯತ್ನಿಸಲಾಗುವುದು ಎಂದು ಬಸವರಾಜು ತಿಳಿಸಿದರು.

ಆಕ್ಷೇಪಣೆ ಸಲ್ಲಿಕೆಗೆ ಸೆ.2ರವರೆಗೆ ಅಕವಾಶ

ಆಕ್ಷೇಪಣೆ ಸಲ್ಲಿಕೆಗೆ ಸೆ.2ರವರೆಗೆ ಅಕವಾಶ

ಸಾರ್ವಜನಿಕರು/ಮತದಾರರು ತಮ್ಮ ಹಾಗೂ ಕುಟುಂಬದ ಮಾಹಿತಿಯನ್ನು ಮತದಾರರ ಪಟ್ಟಿಯಲ್ಲಿ ಪರಿಶೀಲಿಸಿಕೊಳ್ಳಬಹುದು. ಅದಲ್ಲದೇ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸೆಪ್ಟಂಬರ್ 2 ರವರೆಗೆ ತಲಪಿಸಲು ಅವಕಾಶ ಇದೆ. ಆಕ್ಷೇಪಣೆಗಳು ಇದ್ದಲ್ಲಿ ಸಂಬಂಧಪಟ್ಟ ತಮ್ಮ ವ್ಯಾಪ್ತಿಯ ಮತದಾರರ ನೋಂದಣಾಧಿಕಾರಿಗಳ ಕಛೇರಿಗಳಲ್ಲಿ ಸಲ್ಲಿಸಬಹುದಾಗಿದೆ.

ಪೋರ್ಟಲ್‌, ಆಪ್‌ ಮೂಲಕ ಹೆಸರು ನೋಂದಾಯಿಸಿಕೊಳ್ಳಿ

ಪೋರ್ಟಲ್‌, ಆಪ್‌ ಮೂಲಕ ಹೆಸರು ನೋಂದಾಯಿಸಿಕೊಳ್ಳಿ

ಇನ್ನೂ ಹೊಸದಾಗಿ ಮತದಾರರು ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಲು ಮೊಬೈಲ್ ಆ್ಯಪ್ 'ವೋಟರ್ ಹೆಲ್ಪ್‌ಲೈನ್‌' (Voter Helpline App) ಮತ್ತು ನ್ಯಾಷನಲ್ ವೋಟರ್‌ ಸರ್ವಿಸ್ ಪೋರ್ಟಲ್ (ಎನ್‌ವಿಎಸ್‌ಪಿ) ಅಧಿಕೃತ ವೆಬ್‌ಸೈಟ್ ಮೂಲಕ ವಿಧಾನಸಭಾ ಕ್ಷೇತ್ರವಾರು ಅರ್ಜಿ ಸಲ್ಲಿಸಬೇಕು. ಈ ರೀತಿ ಅರ್ಜಿ ಸಲ್ಲಿಕೆಯಾದರೆ ಅದರನ್ವಯ ಮುಂದಿನ ಹಂತದಲ್ಲಿ ಸ್ವೀಕೃತ ಅರ್ಜಿ ಪರಿಶೀಲಿಸಿ ವಾರ್ಡ್‌ವಾರು ಮತದಾರರ ಪಟ್ಟಿಯನ್ನು ಸಿದ್ಧಗೊಳಿಸಲು ಕ್ರಮ ವಹಿಸಲು ಅನುಕೂಲವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್, ಆಡಳಿತ ವಿಭಾಗದ ವಿಶೇಷ ಆಯುಕ್ತರು ಹಾಗೂ ಅಪರ ಜಿಲ್ಲಾ ಚುನಾವಣಾ ಅಧಿಕಾರಿ (ಕೇಂದ್ರ) ರಂಗಪ್ಪ, ವಿಶೇಷ ಆಯುಕ್ತ ಡಾ. ಹರೀಶ್ ಕುಮಾರ್, ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಹೊನ್ನಮ್ಮ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

English summary
BBMP Elections 2022, 243 Ward wise draft voters list released by Election Commission of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X