ಬಿಬಿಎಂಪಿ ಫಲಿತಾಂಶ: ಸಿಎಂ ನೇತೃತ್ವದಲ್ಲಿ ತುರ್ತು ಸಭೆ
ಬೆಂಗಳೂರು, ಆಗಸ್ಟ್, 25: ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ನಗರ ವ್ಯಾಪ್ತಿಯ ಸಚಿವರು ಮತ್ತು ಶಾಸಕರ ಸಭೆ ಕರೆದಿದ್ದಾರೆ.
ಈಗಾಗಲೇ ಬಹುತೇಕ ಕ್ಷೇತ್ರಗಳ ಫಲಿತಾಂಶ ಬಂದಿದ್ದು ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಗೆ ನಿರೀಕ್ಷಿತ ಪ್ರಮಾಣದ ಸಾಧನೆ ಸಾಧ್ಯವಾಗಿಲ್ಲ. ಮುಖ್ಯಮಂತ್ರಿ ಆದಿಯಾಗಿ ಸಚಿವರು ಪ್ರಚಾರದಲ್ಲಿ ತೊಡಗಿಕೊಂಡಿದ್ದರೂ ಜನ ಬೆಂಬಲ ನೀಡಿಲ್ಲ.[ಬಿಬಿಎಂಪಿ ಚುನಾವಣಾ ಫಲಿತಾಂಶ 2015]

ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಯಾಕೆ ಸಾಧ್ಯವಾಗಲಿಲ್ಲ? ಮುಂದೆ ಯಾವ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬೇಕು? ಎಂಬ ಕುರಿತು ಚರ್ಚೆ ಮಾಡಲಾಗುವುದು. ಸಭೆಯಲ್ಲಿ ನಗರ ವ್ಯಾಪ್ತಿಯ ಶಾಸಕರು, ಸಂಸದರ ಆದಿಯಾಗಿ ಪ್ರಮುಖರು ಭಾಗವಹಿಸಲಿದ್ದಾರೆ.[ಬಿಬಿಎಂಪಿ : ಬೆಂಗಳೂರು ನಗರ ಜಿಲ್ಲೆ ಫಲಿತಾಂಶ]
ಚುನಾವಣಾ ಫಲಿತಾಂಶ ಬಿಜೆಪಿ ಪರ ವಾಲುತ್ತಿರುವುದು ನಿಚ್ಚಳವಾಗುತ್ತಿದ್ದಂತೆ ಕಾಂಗ್ರೆಸ್ ನಲ್ಲಿ ಆಂತರಿಕ ತಳಮಳ ಉಂಟಾಗಿರುಗವುದು ಸುಳ್ಳಲ್ಲ. ಹೈ ಕಮಾಂಡ್ ಮುಂದೆ ಯಾವ ಬಗೆಯ ಬದಲಾವಣೆ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.












Click it and Unblock the Notifications