ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ಚುನಾವಣೆಗೆ ಮುಹೂರ್ತ ನಿಗದಿ, ಸುಪ್ರೀಂಕೋರ್ಟ್ ಹೇಳಿದ್ದೇನು?

|
Google Oneindia Kannada News

ನವದೆಹಲಿ, ಮೇ 20: ಬೃಹತ್ ಬೆಂಗಳೂರು ಮಹಾನಗರ‌ ಪಾಲಿಕೆ (ಬಿಬಿಎಂಪಿ)ಗೆ ಚುನಾವಣೆ ನಡೆಯದೇ ಈಗಾಗಲೇ ಎರಡು ವರ್ಷ ಕಳೆದಿದ್ದು, ರಾಜ್ಯ ಸರ್ಕಾರದ ಅರ್ಜಿ ಆಧರಿಸಿ ಸುಪ್ರೀಂಕೋರ್ಟ್ ನೀಡಿರುವ ತಡೆಯಾಜ್ಞೆಯಿಂದಾಗಿ ಈವರೆಗೆ ಬಿಬಿಎಂಪಿಗೆ ಚುನಾವಣೆ ನಡೆದಿಲ್ಲ. ಈ ಮಧ್ಯೆ ಸುಪ್ರೀಂಕೋರ್ಟ್ ನೀಡಿರುವ ಆದೇಶವೊಂದರ ಕುರಿತು ಸಚಿವ ಆರ್. ಅಶೋಕ ನೀಡಿರುವ ಹೇಳಿಕೆ ಗೊಂದಲಕ್ಕೆ ಕಾರಣವಾಗಿದ್ದು, ಬಿಬಿಎಂಪಿ ಚುನಾವಣೆ ಬಗ್ಗೆ ಚರ್ಚೆ ಆರಂಭವಾಗಿತ್ತು. ಇದೆಲ್ಲದರ ನಡುವೆ ಇಂದು ಸುಪ್ರೀಂಕೋರ್ಟ್ ಮಹತ್ವದ ಸೂಚನೆ ನೀಡಿದ್ದು, ಎಂಟು ವಾರದೊಳಗೆ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಕಂಡು ಬಂಡಿದೆ.

ಬಿಬಿಎಂಪಿ ಚುನಾವಣೆಗೆ ಮುಹೂರ್ತ ನಿಗದಿ ಪಡಿಸುವ ಮುನ್ನ ವಾರ್ಡ್‌ಗಳ ಮರು ವಿಂಗಡಣೆ‌ ಹಾಗೂ ಒಬಿಸಿ ಮೀಸಲಾತಿ ಅಂತಿಮಗೊಳಿಸುವ ಕಾರ್ಯ ಪೂರ್ಣಗೊಳಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಮೇ 20 ನೀಡಿರುವ ಆದೇಶದಲ್ಲಿ ಹೇಳಿದೆ.

ಸ್ಥಳೀಯ ಸಂಸ್ಥೆ ಚುನಾವಣೆ: ಮೇ 23ಕ್ಕೆ ವಿಚಾರಣೆ ಮುಂದೂಡಿಕೆಸ್ಥಳೀಯ ಸಂಸ್ಥೆ ಚುನಾವಣೆ: ಮೇ 23ಕ್ಕೆ ವಿಚಾರಣೆ ಮುಂದೂಡಿಕೆ

243 ವಾರ್ಡ್‌ಗಳಿಗೆ ಬಿಬಿಎಂಪಿ ಕಾಯ್ದೆ 2020 ರ ಪ್ರಕಾರ ಬಿಬಿಎಂಪಿಗೆ ಚುನಾವಣೆ ನಡೆಸಬೇಕಾಗುತ್ತದೆ, ಅದರಂತೆ ಏಕಕಾಲದಲ್ಲಿ ವಾರ್ಡ್ ಪುನರ್ ವಿಂಗಡಣಾ ಪ್ರಕ್ರಿಯೆ ಮತ್ತು ಒಬಿಸಿ ಮೀಸಲಾತಿಯನ್ನು ಪೂರ್ಣಗೊಳಿಸಲು ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಂಟು ವಾರಗಳ ಕಾಲಾವಕಾಶವನ್ನು ನೀಡಿದ್ದು, ವಿಚಾರಣೆಯನ್ನು ಆಗಸ್ಟ್‌ ತಿಂಗಳಿಗೆ ಮುಂದೂಡಿದೆ.

BBMP elections should be held after delimitation process says SC

ಸದ್ಯ ಏನಿದೆ ಪರಿಸ್ಥಿತಿ:
ಅಧಿಕಾರಿಗಳ ಆಡಳಿತದಲ್ಲಿರುವ ಬಿಬಿಎಂಪಿಯ ವಾರ್ಡ್‌ ಮರು ವಿಂಗಡಣೆ ಕಾರ್ಯ ಜಾರಿಯಲ್ಲಿದೆ. ಈ ಪ್ರಕ್ರಿಯೆಯನ್ನು ಮುಂದಿನ 8 ವಾರಗಳಲ್ಲಿ ಪೂರ್ಣಗೊಳಿಸಬೇಕಿದೆ. ಶೀಘ್ರವೇ ಪೂರ್ಣಗೊಳಿಸುವುದಾಗಿ ಕರ್ನಾಟಕ ಸರ್ಕಾರ ಕೂಡಾ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ

ಬಿಬಿಎಂಪಿ ಚುನಾವಣೆಗೆ ಮುಹೂರ್ತ ನಿಗದಿ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ನೇತೃತ್ವದ ದ್ವಿಸದಸ್ಯ ಪೀಠದೆದುರು ರಾಜ್ಯ‌ ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.

ವಾರ್ಡ್‌ ಮರು ವಿಂಗಡಣೆ ಹಾಗೂ ಮೀಸಲಾತಿ ಅಂತಿಮಗೊಳಿಸುವ ಸಂಬಂಧದ ಪ್ರಕ್ರಿಯೆ ಮುಗಿದ ಬಳಿಕ ಆಯೋಗವು ಆದೇಶ ಪ್ರಕಟಿಸಲಿದೆ. ಎರಡು ವರ್ಷಗಳ ಹಿಂದೆ ಬಿಬಿಎಂಪಿ ಸದಸ್ಯರ‌ ಅವಧಿ ಪೂರ್ಣಗೊಂಡಿದ್ದು, ವಾರ್ಡ್‌ ಮರು ವಿಂಗಡಣೆ ಸಂಬಂಧ ಸರ್ಕಾರದ ಪ್ರಕ್ರಿಯೆ ಅಂತಿಮಗೊಂಡ ನಂತರ‌ ಚುನಾವಣೆ ನಡೆಯುವುದು ಖಚಿತವಾದಂತಾಗಿದೆ.

Recommended Video

ಎಂಥಾ ಕ್ಯಾಚ್!!!ಮ್ಯಾಕ್ಸ್ವೆಲ್ ಹಿಡಿದ ಕ್ಯಾಚ್ ನೋಡಿ ಅಚ್ಚರಿಗೊಂಡ ಕ್ರಿಕೆಟ್ ಲೋಕ | OneIndia Kannada

English summary
BBMP elections should be held with in 8 weeks after delimitation process says Supreme Court today(May 20)
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X