• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

AAPಯಿಂದ ಉಚಿತ ನೀರು - ವಿದ್ಯುತ್ -ಶಿಕ್ಷಣದ ಭರವಸೆಯ ಪ್ರಣಾಳಿಕೆ..?

|
Google Oneindia Kannada News

ಬೆಂಗಳೂರು, ಮೇ 20: ಬಿಬಿಎಂಪಿಯ ಚುನಾವಣೆಯ ಮೇಲೆ ಎರಡು ರಾಷ್ಟ್ರೀಯ ಪಕ್ಷ ಬಿಜೆಪಿ, ಕಾಂಗ್ರೆಸ್, ಪ್ರಾದೇಶಿಕ ಪಕ್ಷ ಜ್ಯಾತ್ಯತೀತ ಜನತಾದಳ ಕಣ್ಣಿಟ್ಟಿದೆ. ಇದರ ಜೊತೆಗೆ ಬಿಬಿಎಂಪಿ ಮೇಲೆ ವಿಶೇಷವಾದ ಕಣ್ಣಿಟ್ಟಿರುವುದು ಆಮ್ ಆದ್ಮಿ ಪಕ್ಷ. ದೆಹಲಿಯ ಜೊತೆಗೆ ಬೆಂಗಳೂರನ್ನು ಹೊಲಿಕೆ ಮಾಡಿ ಬೆಂಗಳೂರನ್ನು ಬದಲಾಯಿಸುವ ವಾಗ್ದಾನದೊಂದಿಗೆ ಆಮ್ ಆದ್ಮಿ ಪಕ್ಷ ಸನ್ನದ್ದವಾಗುತ್ತಿದೆ.

ಉಚಿತ ನೀರು - ವಿದ್ಯುತ್ -ಶಿಕ್ಷಣದ ಭರವಸೆಯ ಪ್ರಣಾಳಿಕೆ..?

ಎಎಪಿ ಬಿಬಿಎಂಪಿಯ ಚುನಾವಣೆ ಮೇಲೆ ಕಣ್ಣಿಟ್ಟು ವಿಶೇಷ ಪ್ರಣಾಳಿಕೆಯನ್ನು ಸಿದ್ದತೆ ಮಾಡಿಕೊಳ್ಳುತ್ತಿದೆ. ದೆಹಲಿ ಸರ್ಕಾರದ ನಿರ್ಧಾರದಂತೆ ನಿರ್ಧಿಷ್ಟ ಪ್ರಮಾಣದ ನೀರು ಮತ್ತು ಉಚಿತ ವಿದ್ಯುತ್ ಭರವಸೆಯನ್ನು ನೀಡಲು ಸಜ್ಜಾಗಿದೆ. ದೆಹಲಿ ಮಾಡಲ್ ನಂತೆ ಶಾಲೆಗಳನ್ನು ಉನ್ನತಿಕರಣ ಮಾಡುವ ಭರವಸೆಯನ್ನು ಎಎಪಿ ತನ್ನ ಪ್ರಣಾಳಿಕೆಯಲ್ಲಿ ತರಲು ಉತ್ಸುಕವಾಗಿದ್ದು. ಬೆಂಗಳೂರಿಗೆ ಅಗತ್ಯವಾಗಿ ಬೇಕಾಗಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ವಾಗ್ದಾನದೊಂದಿಗೆ ಬಿಬಿಎಂಪಿಯ ಅಖಾಡಕ್ಕೆ ಇಳಿಯಲು ಸಜ್ಜಾಗುತ್ತಿದೆ. ಬಿಬಿಎಂಪಿಯ ಚುನಾವಣೆಗೆ ಮೂರು ಪಕ್ಷಕ್ಕಿಂತಲೂ ಆಮ್ ಆದ್ಮಿ ಪಾರ್ಟಿಯು ಹೆಚ್ಚಿನ ಉತ್ಸಾಹವನ್ನು ತೋರುತ್ತಿದೆ.

ಇನ್ನು ಬಿಬಿಎಂಪಿ ವಾರ್ಡ್‌ ಪುನರ್‌ ವಿಂಗಡನೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ, ಎಂಟು ವಾರಗಳೊಳಗೆ ಬಿಬಿಎಂಪಿ ಚುನಾವಣೆಗೆ ಅಧಿಸೂಚನೆ ಹೊರಡಿಸಬೇಕೆಂಬ ಸುಪ್ರೀಂ ಕೋರ್ಟ್‌ ಆದೇಶವನ್ನು ಆಮ್‌ ಆದ್ಮಿ ಪಾರ್ಟಿ ಸ್ವಾಗತಿಸಿದ್ದು, ಅಭೂತಪೂರ್ವ ಬಹುಮತದೊಂದಿಗೆ ಪಕ್ಷವು ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ.

ಕಾರ್ಪೋರೇಟರ್‌ ಇಲ್ಲದ್ದರಿಂದ ಬೆಂಗಳೂರಿನ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ

ಸುಪ್ರೀಂಕೋರ್ಟ್‌ ತೀರ್ಪು ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, "2020ರಲ್ಲೇ ನಡೆಯಬೇಕಿದ್ದ ಬಿಬಿಎಂಪಿ ಚುನಾವಣೆಯು ನಾನಾ ಕಾರಣಗಳಿಗೆ ಮುಂದೂಡಲ್ಪಟ್ಟಿತ್ತು. ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಆಡಳಿತಾರೂಢ ಬಿಜೆಪಿ ಕೂಡ ಚುನಾವಣೆಯನ್ನು ಮುಂದೂಡಲು ಬೇರೆಬೇರೆ ಕುತಂತ್ರ ಮಾಡುತ್ತಿತ್ತು. ಚುನಾವಣೆ ನಡೆಯದೇ ಕಾರ್ಪೋರೇಟರ್‌ ಇಲ್ಲದ್ದರಿಂದ ಬೆಂಗಳೂರಿನ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ರಾಜ್ಯ ಬಿಜೆಪಿ ಸರ್ಕಾರ 40% ಕಮಿಷನ್‌ ದಂಧೆಯಿಂದಾಗಿ ರಸ್ತೆಗಳು ಶೋಚನೀಯ ಸ್ಥಿತಿ ತಲುಪಿವೆ. ಮನೆಗಳಿಗೆ ಮಳೆ ನೀರು ನುಗ್ಗುತ್ತಿದ್ದರೂ, ಜವಾಬ್ದಾರಿ ಹೊರುವವರು ಇಲ್ಲವಾಗಿದೆ" ಎಂದು ಹೇಳಿದರು.

ಬಿಬಿಎಂಪಿ ಚುನಾವಣೆಗೆ ಆಮ್‌ ಆದ್ಮಿ ಪಾರ್ಟಿಯು ಸಂಪೂರ್ಣ ಸಿದ್ಧ

"ಈಗ ಸುಪ್ರೀಂ ಕೋರ್ಟ್‌ ಆದೇಶ ನೀಡಿರುವುದರಿಂದ, ಸದ್ಯದಲ್ಲೇ ಚುನಾವಣೆ ನಡೆಯುವ ವಿಶ್ವಾಸವಿದೆ. ಚುನಾವಣೆ ಎದುರಿಸಲು ಆಮ್‌ ಆದ್ಮಿ ಪಾರ್ಟಿಯು ಸಂಪೂರ್ಣ ಸಿದ್ಧವಾಗಿದೆ. ಪಕ್ಷವು ಭರ್ಜರಿ ಬಹುಮತದೊಂದಿಗೆ ಬಿಬಿಎಂಪಿ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ನಿಶ್ಚಿತ. ಎಲ್ಲ ವಾರ್ಡ್‌ಗಳಲ್ಲೂ ಪಕ್ಷಕ್ಕೆ ಕಾರ್ಯಕರ್ತರು, ಮುಖಂಡರು ಇದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ, ಪಕ್ಷದ ಸಿದ್ಧಾಂತಗಳು ಹಾಗೂ ದೆಹಲಿಯ ಕೇಜ್ರಿವಾಲ್‌ ಆಡಳಿತವನ್ನು ಗಮನಿಸುತ್ತಿರುವ ಅಸಂಖ್ಯಾತ ಬೆಂಬಲಿಗರು ಬೆಂಗಳೂರಿನಾದ್ಯಂತ ಇದ್ದಾರೆ. ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ನಿಂದ ದುರಾಡಳಿತದಿಂದ ಬೆಂಗಳೂರಿನ ಜನರು ರೋಸಿ ಹೋಗಿದ್ದು, ನಿರೀಕ್ಷೆಗೂ ಮೀರಿದ ಪ್ರಮಾಣದಲ್ಲಿ ಎಎಪಿಯನ್ನು ಬೆಂಬಲಿಸಲಿದ್ದಾರೆ" ಎಂದು ಪೃಥ್ವಿ ರೆಡ್ಡಿ ಹೇಳಿದರು.

ಬೆಂಗಳೂರಿಗೆ ಗುಣಮಟ್ಟದ ಮೂಲಸೌಕರ್ಯಗಳು ಸಿಗುತ್ತಿಲ್ಲ

"ಬೆಂಗಳೂರಿನ ಜನರು ಆದಾಯ ತೆರಿಗೆ, ಜಿಎಸ್‌ಟಿ, ಆಸ್ತಿ ತೆರಿಗೆ ಸೇರಿದಂತೆ ವಿವಿಧ ರೀತಿಯ ತೆರಿಗೆಯನ್ನು ಕಟ್ಟುತ್ತಿದ್ದಾರೆ. ಆದರೆ ಅವರಿಗೆ ಅದಕ್ಕೆ ಪ್ರತಿಯಾಗಿ ಗುಣಮಟ್ಟದ ಮೂಲಸೌಕರ್ಯಗಳು ಸಿಗುತ್ತಿಲ್ಲ. ಅವರು ಕಟ್ಟುತ್ತಿರುವ ತೆರಿಗೆ ಬಿಜೆಪಿಯಂತಹ ಭ್ರಷ್ಟ ಪಕ್ಷಗಳ ಜನಪ್ರತಿನಿಧಿಗಳ ಜೇಬು ಸೇರುತ್ತಿದೆ. ಆಮ್‌ ಆದ್ಮಿ ಪಾರ್ಟಿಯೊಂದೇ ಜನರ ಒಂದೊಂದು ರೂಪಾಯಿ ತೆರಿಗೆಯನ್ನು ಜನರ ಒಳಿತಿಗೆ ಬಳಸುತ್ತದೆ. ಇದನ್ನು ದೆಹಲಿಯಲ್ಲಿ ನಾವು ಸಾಧಿಸಿ ತೋರಿಸಿದ್ದೇವೆ. ಈ ಕಾರಣಕ್ಕಾಗಿಯೇ ಬೆಂಗಳೂರಿನಲ್ಲಿ ಪಕ್ಷಕ್ಕೆ ಉತ್ತಮ ಸ್ಪಂದನೆ ಸಿಗುತ್ತಿದೆ" ಎಂದು ಪೃಥ್ವಿ ರೆಡ್ಡಿ ಹೇಳಿದರು.

BBMP ellection: Aam admi party special focus for ellection
   Kohli ಈ ಬಾರಿ ಮೊದಲ ಬಾರಿ ಪಂದ್ಯ ಶ್ರೇಷ್ಠರಾಗಿ ಹೇಳಿದ್ದೇನು? | Oneindia Kannada
   English summary
   Two national party BJP, Congress and regional party secular Janata Dal has been keeping an eye on the BBMP elections. In addition, the Aam Aadmi Party has a special eye on the BBMP. know more.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X