ಬಿಬಿಎಂಪಿಯ 20 ಕೋಟಿ ಮೌಲ್ಯದ ಆಸ್ತಿ ವಶ

ಬೆಂಗಳೂರು, ಜು.11: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸೇರಿದ ಸುಮಾರು 20 ಕೋಟಿ ಮೌಲ್ಯದ ಆಸ್ತಿಯಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ದನದ ಕೊಟ್ಟಿಯನ್ನು ಪಾಲಿಕೆ ಅಧಿಕಾರಿಗಳು ತೆರವುಗೊಳಿಸಿ, ಭೂಮಿಯನ್ನು ವಶಪಡಿಸಿಕೊಂಡಿದ್ದಾರೆ. ಪಾಲಿಕೆಯ ಮಾಜಿ ಸದಸ್ಯ ನ.ವೆಂಕಟೇಶ್ ಪಾಲಿಕೆ ಜಾಗವನ್ನು ಕಬಳಿಸಿ ದನದ ಕೊಟ್ಟಿಗೆ ನಿರ್ಮಿಸಿದ್ದರು.

ಶುಕ್ರವಾರ ಸ್ಥಳೀಯ ಪಾಲಿಕೆ ಸದಸ್ಯೆ ವಿಜಯ ಕುಮಾರಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ದನದ ಕೊಟ್ಟಿಗೆಯನ್ನು ತೆರವುಗೊಳಿಸಿ ಜಾಗವನ್ನು ವಶಪಡಿಸಿಕೊಳ್ಳಲಾಗಿದೆ. ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಪಾಲಿಕೆ ಸದಸ್ಯ ನ.ವೆಂಕಟೇಶ್ ವಾರ್ಡ್ ನಂ.46ರ ರಾಜಮಹಲ್ ಗುಟ್ಟಹಳ್ಳಿಯ ದತ್ತಾತ್ರೇಯ ದೇವಸ್ಥಾನ ಸಮೀಪ ಪಾಲಿಕೆಗೆ ಸೇರಿದ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದರು.

BBMP

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸೇರಿದ ಈ ಜಾಗದ ಮಾರುಕಟ್ಟೆ ಮೌಲ್ಯ ಸುಮಾರು 20 ಕೋಟಿ ಎಂದು ಅಂದಾಜಿಸಲಾಗಿದೆ. ಶುಕ್ರವಾರ ಸ್ಥಳೀಯ ಪಾಲಿಕೆ ಸದಸ್ಯೆ ವಿಜಯ ಕುಮಾರಿ ನೇತೃತ್ವದಲ್ಲಿ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು, ಕಾರ್ಯಚರಣೆ ನಡೆಸಿ ಅತಿಕ್ರಮಣ ಮಾಡಿಕೊಂಡಿದ್ದ ಜಾಗವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ರಾಜಕೀಯ ಷಡ್ಯಂತ್ರ: ಪಾಲಿಕೆ ಕಾರ್ಯಾಚರಣೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ನ.ವೆಂಕಟೇಶ್, ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಮೂಲೆಗುಂಪು ಮಾಡಲು ಏಕಾಏಕಿ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆ ಹಿಂದೆ ರಾಜಕೀಯ ದುರುದ್ದೇಶವಿದೆ. ಬಿಜೆಪಿಯ ಪಾಲಿಕೆ ಸದಸ್ಯರ ಒತ್ತಾಯಕ್ಕೆ ಮಣಿದು ಕಾರ್ಯಾಚರಣೆ ನಡೆಸಲಾಗಿದೆ ಎಂದು ದೂರಿದ್ದಾರೆ. [ಅಭಿವೃದ್ಧಿ ಶುಲ್ಕು ಸಂಗ್ರಹ ಆರಂಭಿಸಿದ ಬಿಬಿಎಂಪಿ]

ನೋಟಿಸ್ ಕೊಟ್ಟಿಲ್ಲ : ಬಿಬಿಎಂಪಿ ಅಧಿಕಾರಿಗಳು ಕಾರ್ಯಾಚರಣೆಗೆ ಆಗಮಿಸುವ ಮೊದಲು ಯಾವುದೇ ನೋಟಿಸ್ ನೀಡಿಲ್ಲ. ಏಕಾಏಕಿ ಜಾಗವನ್ನು ತೆರವುಗೊಳಿಸಿದ್ದಾರೆ. ನೋಟಿಸ್ ನೀಡಿದ್ದರೆ, ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದೆವು. ಏಕಾಏಕಿ ಆಸ್ತಿ ವಶಪಡಿಸಿಕೊಂಡಿರುವುದು ಸರಿಯಾದ ಕ್ರಮವಲ್ಲ ಎಂದು ಆರೋಪಿಸಿದ್ದಾರೆ. [73 ಅಂಗಡಿಗಳಿಗೆ ಬೀಗ ಜಡಿದ ಬಿಬಿಎಂಪಿ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+