ಬೆಂಗಳೂರು: ಕೆರೆ-ಹಸಿರು ರಕ್ಷಣೆಯ ನೋಂದಣಿ ದಿನಾಂಕ ವಿಸ್ತರಿಸಿದ ಬಿಬಿಎಂಪಿ, ಕೊನೆ ದಿನ-ಲಿಂಕ್ ಮಾಹಿತಿ ಇಲ್ಲಿದೆ
ಬೆಂಗಳೂರು, ಫೆಬ್ರವರಿ 01: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಬರುವ ಕೆರೆಗಳು ಮತ್ತು ಉದ್ಯಾನವನಗಳ ಸಮರ್ಪಕ ನಿರ್ವಹಣೆಯ ಬಗ್ಗೆ ಮೇಲ್ವಿಚಾರಣೆ ನೆಡೆಸಲು ಎರಡು ಪ್ರಮುಖ ವೆಬ್‌ಸೈಟ್‌ನಲ್ಲಿ ನೋಂದಾವಣೆಗೆ ನೀಡಿದ್ದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.
ಹೌದು, ಬಿಬಿಎಂಪಿ ವ್ಯಾಪ್ತಿಯಲ್ಲಿನ ಕೆರೆಗಳು ಮತ್ತು ಉದ್ಯಾನವನಗಳ ಸಮರ್ಪಕ ನಿರ್ವಹಣೆಯ ಬಗ್ಗೆ ಮೇಲ್ವಿಚಾರಣೆ ನೆಡೆಸಲು ಆಸಕ್ತಿವುಳ್ಳ ಬೆಂಗಳೂರಿನ ನಾಗರಿಕರು 'ಕೆರೆ ಮಿತ್ರ' ಹಾಗೂ 'ಹಸಿರು ಮಿತ್ರ' ರಾಗಿ ಪಾಲಿಕೆಯ ವೆಬ್‌ಸೈಟ್‌ನಲ್ಲಿ ನೊಂದಾಯಿಸಿಕೊಳ್ಳುವ ಅವಧಿ ದಿನಾಂಕ ಫೆಬ್ರುವರಿ 12ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

ಬೆಂಗಳೂರಿನ ನಿವಾಸಿಗಳು ಅವರು ವಾಸವಿರುವ ವಾರ್ಡ್/ ಸಮೀಪದಲ್ಲಿರುವ ಕೆರೆ ಅಥವಾ ಉದ್ಯಾನವನಕ್ಕೆ ಆಸಕ್ತಿ ಇದ್ದಲ್ಲಿ ಕೆರೆ ನಿರ್ವಹಣೆ ಬಗ್ಗೆ ಪ್ರತಿನಿತ್ಯ ಪರಿಶೀಲಿಸಿ, ಅಂತರ್ಜಾಲದಲ್ಲಿ ವಿವರಗಳನ್ನು ದಾಖಲಿಸುವ ಮೂಲಕ ಸಾರ್ವಜನಿಕರ ಅವಶ್ಯಕತೆ ಹಾಗೂ ಕೆರೆ/ಉದ್ಯಾನವನಗಳ ಆಗು-ಹೋಗುಗಳನ್ನು ಇನ್ನು ಉತ್ತಮವಾಗಿ ನಿಗಾವಹಿಸಲು ಅನುವು ಮಾಡಿಕೊಳ್ಳುವ ಉದ್ದೇಶ ಪಾಲಿಕೆ ಹೊಂದಿದೆ.
ಕೆರೆ - ಉದ್ಯಾನ ರಕ್ಷಣೆಗೆ ನೋಂದಣಿ
ಆಸಕ್ತ ನಾಗರಿಕರು https://www.bbmp.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ಕೆರೆ ಮಿತ್ರ ಹಾಗೂ ಹಸಿರು ಮಿತ್ರ ಆಗಿ ನೊಂದಾಯಿಸಿಕೊಳ್ಳಬಹುದು. ಈ ಮೊದಲು ಇದ್ದ ಜನವರಿ 31ರ ನೋಂದನಿ ಸಮಯವನ್ನುಈ ತಿಂಗಳ ಫೆಬ್ರವರಿ 12ರವರೆಗೆ ವಿಸ್ತರಿಸಿ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಲಾಗಿದೆ.
ಕೆರೆ ಮತ್ತು ಉದ್ಯಾನ ರಕ್ಷಣೆಗಾಗಿ ಬಿಬಿಎಂಪಿ ನೀಡಿರುವ ಸದರಿ ಸದಾವಕಾಶವನ್ನು ನಾಗರಿಕರು ಹಾಗೂ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪ್ರತಿನಿಧಿಗಳು ಸದುಪಯೋಗಪಡಿಸಿಕೊಳ್ಳಬೇಕು. ಹೀಗೆಂದು ಪ್ರಕಟಣೆಯಲ್ಲಿ ಬಿಬಿಎಂಪಿಯ ಅರಣ್ಯ, ಪರಿಸರ ಮತ್ತು ಹವಾಮಾನ ವೈಪರೀತ್ಯ ನಿರ್ವಹಣೆಯ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್ ಮನವಿ ಮಾಡಿಕೊಂಡಿದ್ದಾರೆ.

ನೋಂದಣಿಗೆ ಅಗತ್ಯವಾದ ವೆಬ್‌ಸೈಟ್ ಮಾಹಿತಿ
ಕೆರೆ ಮಿತ್ರ ಹಾಗೂ ಹಸಿರು ಮಿತ್ರರಾಗಲು ನೇರವಾಗಿ ಕೆಳಗಿನ ಲಿಂಕ್ ಮೂಲಕ ನೊಂದಾಯಿಸಿಕೊಳ್ಳಬಹುದು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಕೆರೆಗಳು ಮತ್ತು ಉದ್ಯಾನವನಗಳ ಸಮರ್ಪಕ ನಿರ್ವಹಣೆಯ ಬಗ್ಗೆ ಮೇಲ್ವಿಚಾರಣೆ ನೆಡೆಸಲು ಆಸಕ್ತಿವುಳ್ಳ ಬೆಂಗಳೂರಿನ ನಾಗರೀಕರು 'ಕೆರೆ ಮಿತ್ರ'ರಾಗಲು ಈ https://keremithra.bbmpgov.in/registration ವೆಬ್‌ಸೈಟ್ ಮತ್ತು 'ಹಸಿರು ಮಿತ್ರ' ರಾಗಲು https://hasirumithra.bbmpgov.in/registration ಲಿಂಕ್ ಭೇಟಿ ನೀಡಿ ನೊಂದಾಯಿಸಿಕೊಳ್ಳಬಹುದಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.
-
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?











Click it and Unblock the Notifications