ಸಾವು-ನೋವುಗಳ ನಡುವೆಯೂ ರಸ್ತೆ ಗುಂಡಿ ತುಂಬದ ಬಿಬಿಎಂಪಿ; ಗಡುವು ವಿಸ್ತರಣೆ
ಬೆಂಗಳೂರು, ನ.16: ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳಿಂದಾಗುತ್ತಿರುವ ಸಾವು ನೋವುಗಳು ಕಣ್ಣಿಗೆ ಕಾಣುತ್ತಲೆ ಇವೆ. ವಾರದಲ್ಲಿ ಒಮ್ಮೆಯಾದರೂ ಯಾರಾದರೂ ರಸ್ತೆ ಗುಂಡಿಗೆ ಬಿದ್ದು ಗಾಯ ಮಾಡಿಕೊಂಡ ವರದಿಗಳು ಬರುತ್ತಲೇ ಇವೆ. ಇತ್ತಿಚೆಗಷ್ಟೇ ರಸ್ತೆ ಗುಂಡಿ ಒಬ್ಬರನ್ನು ಬಲಿ ಪಡೆದಿದೆ. ಆದರೂ ಮಾತ್ರ ಬಿಬಿಎಂಪಿ ಮಾತ್ರ ತನ್ನ ಕೆಲಸ ಮುಗಿಸುತ್ತಿಲ್ಲ.
ನವೆಂಬರ್ 15 ರೊಳಗೆ ನಗರದ ಎಲ್ಲಾ ಗುಂಡಿಗಳನ್ನು ತುಂಬಿಸುವುದಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನವೆಂಬರ್ ಮೊದಲ ವಾರದಲ್ಲಿ ಭರವಸೆ ನೀಡಿತ್ತು. ಆದರೆ, ಈಗ ಮತ್ತೆ ಗಡುವು ವಿಸ್ತರಿಸಿಕೊಂಡಿದೆ.
ನಗರದಲ್ಲಿ ಸುರಿದ ಮಳೆಯಿಂದಾಗಿ ರಸ್ತೆ ಗುಂಡಿಗಳನ್ನು ತುಂಬುವ ಕೆಲಸ ಮತ್ತಷ್ಟು ವಿಳಂಬವಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ರಸ್ತೆ ಗುಂಡಿಗಳು ಮಾತ್ರ ಹಾಗೆ ಉಳಿದುಕೊಂಡಿವೆ. ಜನರು ಬಿಬಿಎಂಪಿ ಕ್ರಮದ ಬಗ್ಗೆ ಆಕ್ರೋಶ ಹೊರಹಾಕುತ್ತಿದ್ದಾರೆ.
ಅಕ್ಟೋಬರ್ 30 ರಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರು ನವೆಂಬರ್ 5 ರೊಳಗೆ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚಲಾಗುವುದು ಎಂದು ಮಾಧ್ಯಮಗಳಿಗೆ ತಿಳಿಸಿದ್ದರು. ಬಳಿಕ ಬಿಬಿಎಂಪಿ ಗಡುವನ್ನು ನವೆಂಬರ್ 15 ಕ್ಕೆ ಮುಂದೂಡಿತ್ತು. ಈಗ ಮತ್ತೆ ನವೆಂಬರ್ 20ರ ಒಳಗೆ ಎಲ್ಲಾ ಗುಂಡಿಗಳನ್ನು ಮುಚ್ಚುವುದಾಗಿ ತಿಳಿಸುತ್ತಿದೆ.

ಎಲ್ಲಾ ಗುಂಡಿಗಳನ್ನು ಮುಚ್ಚಲಾಗಿದೆ, ಒಂದು ಸಾವಿರ ಬಾಕಿಯಿದೆ!
ಬೆಂಗಳೂರಿನಲ್ಲಿ ಪ್ರತಿ ದಿನ ಓಡಾಡುವವರಿಗೆ ಎಲ್ಲಾ ರಸ್ತೆಗಳಲ್ಲೂ ಗುಂಡಿ- ಹೊಂಡಗಳ ದರ್ಶನವಾಗುತ್ತಲೆ ಇದೆ. ಆದರೆ, ಬಿಬಿಎಂಪಿ ಮಾತ್ರ ನಗರದ ಎಲ್ಲಾ ಗುಂಡಿಗಳನ್ನು ಮುಚ್ಚಲಾಗಿದೆ. ಉಳಿದಿರುವುದು ಕೇವಲ ಒಂದು ಸಾವಿರ ಗುಂಡಿಗಳಷ್ಟೆ ಎನ್ನುತ್ತಿದೆ.
''ಮೇ ತಿಂಗಳಿಂದ ಇಲ್ಲಿಯವರೆಗೆ 33 ಸಾವಿರ ಗುಂಡಿಗಳನ್ನು ಗುರುತಿಸಲಾಗಿದ್ದು, ಈವರೆಗೆ 32 ಸಾವಿರ ಗುಂಡಿ ಮುಚ್ಚಲಾಗಿದೆ. ಇನ್ನು ಒಂದು ಸಾವಿರ ಗುಂಡಿಗಳಷ್ಟೇ ಉಳಿದಿದ್ದು, ಮಳೆಯಿಂದಾಗಿ ಕೊಂಚ ವಿಳಂಬವಾಗಿದೆ" ಎಂದು ಬಿಬಿಎಂಪಿ ಆಯುಕ್ತರು ಹೇಳಿದ್ದಾರೆ.

ನ. 20ರ ಒಳಗೆ ಎಲ್ಲಾ ಗುಂಡಿಗಳನ್ನು ಮುಚ್ಚುತ್ತೇವೆ; ಬಿಬಿಎಂಪಿ
ಬೆಂಗಳೂರಿನಲ್ಲಿ ಕಳೆದ ವಾರದೀಮದ ಜಿಟಿ ಜಿಟಿ ಮಳೆ ಬರುತ್ತಲೇ ಇದೆ. ಆದರೆ ಮಧ್ಯಾಹ್ನದ ಹೊತ್ತಿಗೆ ಇದು ಕಡಿಮೆಯಾಗುತ್ತಿದೆ. ಚಳಿ ಜಾಸ್ತಿಯಿದೆ. ಇದನ್ನೆ ನೆಪ ಮಾಡಿಕೊಂಡಿರುವ ಬಿಬಿಎಂಪಿ ಮತ್ತೆ ಗುಂಡಿ ಮುಚ್ಚುವ ಗಡುವನ್ನು ವಿಸ್ತರಿಸಿಕೊಂಡಿದೆ.
ಮಳೆ ಬರುತ್ತಿರುವ ಕಾರಣ ಕಾಮಗಾರಿಯಲ್ಲಿ ವಿಳಂಬವಾಗುತ್ತಿದೆ. ನವೆಂಬರ್ 20ರ ರೊಳಗೆ ನಗರದ ರಸ್ತೆಗಳಲ್ಲಿನ ಎಲ್ಲಾ ಗುಂಡಿಗಳನ್ನು ಸಂಪೂರ್ಣವಾಗಿ ದುರಸ್ತಿಪಡಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಿಬಿಎಂಪಿಯಿಂದ ಗುಂಡಿ ಮುಚ್ಚುವ ಕಳಪೆ ಕಾಮಗಾರಿ
ಕನಕದಾಸರ ಜಯಂತಿ ಮತ್ತು ಬೆಂಗಳೂರು ನಿರ್ಮಾತ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ಪ್ರಧಾನಿ ಭೇಟಿ ನೀಡಿದ್ದ ವೇಳೆ ಮೆಜೆಸ್ಟಿಕ್ ಮತ್ತು ಗುಬ್ಬಿ ತೋಟದಪ್ಪ ರಸ್ತೆ ಪ್ರದೇಶಗಳಲ್ಲಿ ರಸ್ತೆಗಳನ್ನು ನವೀಕರಣಗೊಳಿಸಲಾಗಿತ್ತು. ಅಲ್ಲಿನ ಎಲ್ಲಾ ಗುಂಡಿಗಳನ್ನು ಕೆಲವೇ ಸಮಯಗಳಲ್ಲಿ ಮುಚ್ಚಲಾಗಿತ್ತು. ಆದರೆ, ಜನರು ಸಾವಿಗೆ ತುತ್ತಾಗುತ್ತಿದ್ದರು ಬಿಬಿಎಂಪಿ ಸ್ಪಂದಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.
ಇನ್ನು, ಬಿಬಿಎಂಪಿ ಈವರೆಗೆ ಮುಚ್ಚಿರುವ ರಸ್ತೆ ಗುಂಡಿಗಳು ಒಂದು ಸಣ್ಣ ಮಳೆಗೆ ಮತ್ತೆ ದುರಸ್ತಿಗೆ ಬರುತ್ತಿವೆ. ಹೀಗಾಗಿ ಕಳಪೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆರೋಪಿಸಲಾಗಿದೆ.
ಹೊಸ ತಿಪ್ಪಸಂದ್ರ ಮಾರುಕಟ್ಟೆ ರಸ್ತೆ ಕಾಮಗಾರಿ ಕಳಪೆಯಾಗಿದೆ ಎಂದು ಬೆಂಗಳೂರು ನವನಿರ್ಮಾಣ ಪಾರ್ಟಿ (ಬಿಎನ್‌ಪಿ) ಮಂಗಳವಾರ ಆರೋಪಿಸಿದೆ. ಬಿಬಿಎಂಪಿಯು ಪ್ರಸ್ತುತ ಹೊಸ ತಿಪ್ಪಸಂದ್ರದ 5ನೇ ಅಡ್ಡ ರಸ್ತೆ ಮತ್ತು ಮಾರುಕಟ್ಟೆ ರಸ್ತೆಯಲ್ಲಿ ದುರಸ್ತಿ ಕಾರ್ಯ ನಡೆಸುತ್ತಿದೆ.

ರಸ್ತೆಗುಂಡಿಯಿಂದ ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವು
"ನಾವು ನಿಯಮಿತವಾಗಿ ಮತ್ತು ಪ್ರಾಮಾಣಿಕವಾಗಿ ತೆರಿಗೆ ಕಟ್ಟುತ್ತಿದ್ದೇವೆ. ಆದರೆ ಉತ್ತಮ ರಸ್ತೆಗಳುಮಾತ್ರ ನಿರ್ಮಾಣವಾಗುತ್ತಿಲ್ಲ. ರಸ್ತೆಗಳು ಕಡಿಮೆ ಗುಣಮಟ್ಟದ್ದಾಗಿದ್ದು, ಅತ್ಯಂತ ಸುಲಭವಾಗಿ ಹೊಂಡಗಳು ನಿರ್ಮಾಣವಾಗುತ್ತಿವೆ. ಈ ರಸ್ತೆಗಳಲ್ಲಿ ಪ್ರಯಾಣಿಸಲು ನಾವು ನಮ್ಮ ಪ್ರಾಣವನ್ನು ಪಣಕ್ಕಿಡಬೇಕಾಗಿದೆ. ಗುಂಡಿಗಳಿಂದ ಕೂಡಿದ ರಸ್ತೆಗಳು ಸಾವಿಗೆ ಆಹ್ವಾನ ನೀಡುವಂತೆ ಕಾಣುತ್ತಿವೆ. ಸರಿಯಾಗಿ ತೆರಿಗೆ ಕಟ್ಟಿಯೂ ನಾವು ಯಾಕೆ ರಸ್ತೆಯಲ್ಲಿ ಬೀಳಬೇಕು?" ಎಂದು ವಾಹನ ಚಾಲಕರೊಬ್ಬರು ಆಕ್ರೋಶ ಹೊರಹಾಕಿದ್ದಾರೆ.
ಇತ್ತೀಚೆಗಷ್ಟೇ ಕರ್ನಾಟಕ ಹೈಕೋರ್ಟ್ ನಗರದಲ್ಲಿನ ಗುಂಡಿ ತುಂಬುವುದು ಮತ್ತು ರಸ್ತೆ ದುರಸ್ತಿ ಕಾಮಗಾರಿಯನ್ನು ಪರಿಶೀಲಿಸುವಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‌ಎಚ್‌ಎಐ) ಸೂಚಿಸಿತ್ತು.
ಇತ್ತಿಚೆಗೆ ರಾಜಾಜಿನಗರದ ಬಳಿ ಸುಬ್ರಹ್ಮಣ್ಯ ನಗರದ 2ನೇ ಮುಖ್ಯರಸ್ತೆಯಲ್ಲಿ ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿ ಕುಮಾರ್ ಎಂಬುವವರು ಮೃತಪಟ್ಟಿದ್ದಾರೆ. ಮೃತ ಕುಮಾರ್ ಮನೆ ಮುಂದೆ ಆಮ್ ಆದ್ಮಿ ಪಕ್ಷದ ನಾಯಕರು, ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿಗಳು, ಸಚಿವರು ಸ್ಥಳಕ್ಕೆ ಆಗಮಿಸುವಂತೆ ಆಗ್ರಹಿಸಿದ್ದರು.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications