ಆತ್ಮಹತ್ಯೆ ಬೆದರಿಕೆ ಆರೋಪ: ಬಿಬಿಎಂಪಿ 57 ಗುತ್ತಿಗೆದಾರರ ವಿರುದ್ಧ FIR ದಾಖಲು
ಬೆಂಗಳೂರು, ಆಗಸ್ಟ್ 17: ಬಾಕಿ ಬಿಲ್ ಬಿಡುಗಡೆ ಮಾಡುವಂತೆ ಬಿಬಿಎಂಪಿ ಗುತ್ತಿಗೆದಾರರ ಸಂಘ ಆಗ್ರಹಿಸಿದ್ದು, ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ 57 ಗುತ್ತಿಗೆದಾರರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬಾಕಿ ಬಿಲ್‌ಗಳನ್ನು ತೆರವುಗೊಳಿಸುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ 57 ಗುತ್ತಿಗೆದಾರರ ವಿರುದ್ಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಯೊಬ್ಬರು ಗುರುವಾರ ದೂರು ದಾಖಲಿಸಿದ್ದಾರೆ. ಸರ್ಕಾರಿ ನೌಕರನ ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ದೂರಿನ ಆಧಾರದ ಮೇಲೆ ಹೈಗ್ರೌಂಡ್ಸ್ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಗುತ್ತಿಗೆದಾರರು ಬಿಲ್ ಕ್ಲಿಯರ್ ಮಾಡುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿ ಮಹದೇವ್ ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಹಲವು ಗುತ್ತಿಗೆದಾರರನ್ನು ಕರೆಸಿ ವಿಚಾರಣೆ ನಡೆಸಿದ್ದರು. ಮತ್ತೊಂದು ಪ್ರಕರಣದಲ್ಲಿ ಗುತ್ತಿಗೆದಾರರು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರಿಗೆ ಪತ್ರ ಸಲ್ಲಿಸಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶೇ.10-15ರಷ್ಟು 'ಕಮಿಷನ್' ನೀಡುವಂತೆ ಒತ್ತಾಯಿಸಿದ್ದಾರೆ. ಶೇಷಾದ್ರಿಪುರಂ ಸಹಾಯಕ ಪೊಲೀಸ್ ಆಯುಕ್ತರು ಹಲವು ಗುತ್ತಿಗೆದಾರರನ್ನು ಕರೆಸಿ ಪ್ರಕರಣಕ್ಕೆ ಸಂಬಂಧಿಸಿದ ವಿವರಗಳನ್ನು ಕೇಳಿದರು.
ಡಿಸಿಎಂ ಡಿಕೆ ಶಿವಕುಮಾರ್ ಒತ್ತಡ ಹೇರಿ ಹಣ ಬಿಡುಗಡೆ ಮಾಡುತ್ತಿಲ್ಲ. ನಮ್ಮ ಕಾಮಗಾರಿ ಮುಕ್ತಾಯ ಆಗಿದ್ದರೂ ಹಣ ಬಿಡುಗಡೆಯಾಗಿಲ್ಲ. ಡಿಕೆ ಶಿವಕುಮಾರ್ ಹಣ ಬಿಡುಗಡೆ ಮಾಡದಂತೆ ಅಧಿಕಾರಿಗಳ ಮೇಲೆ ಒತ್ತಾಯ ಮಾಡಿದ್ದಾರೆ. ಹೀಗಾಗಿ ಸೂಕ್ತ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ಗುತ್ತಿಗೆದಾರರು ದೂರು ನೀಡಿದ್ದರು. ರಾಜ್ಯಪಾಲರಿಗೆ ನೀಡಲಾಗಿದ್ದ ದೂರು ಪೊಲೀಸ್ ಠಾಣೆಗೆ ರವಾನೆಯಾಗಿದ್ದು, ದೂರಿನಲ್ಲಿ ಸಹಿ ಹಾಕಿದ್ದ ಎಲ್ಲಾ ಗುತ್ತಿಗೆದಾರರಿಗೂ ವಿಚಾರಣೆ ಬರುವಂತೆ ನೋಟಿಸ್ ನೀಡಲಾಗಿದೆ.
ಈಗಾಗಲೇ ಕೆಲವು ಗುತ್ತಿಗೆದಾರರು ಎಸಿಪಿ ಮುಂದೆ ಹಾಜರಾಗಿದ್ದು, ಎಸಿಪಿ ಪ್ರಕಾಶ್ ರೆಡ್ಡಿ ಅವರು ವಿಚಾರಣೆ ನಡೆಯುತ್ತಿದ್ದಾರೆ. ರಾಜ್ಯಪಾಲರಿಗೆ ನೀಡಿದ ದೂರಿನಲ್ಲಿ ಬಿಲ್ ಬಿಡುಗಡೆ ಮಾಡದ ಬಿಬಿಎಂಪಿ, ಸರ್ಕಾರದ ವಿರುದ್ಧ ಆರೋಪ ಮಾಡಲಾಗಿತ್ತು.. ಆರೋಪಕ್ಕೆ ಸಂಬಂಧಿಸಿದಂತೆ ಮಾಹಿತಿ, ದಾಖಲೆ ನೀಡುವಂತೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಇನ್ನೂ ಆರೋಪ ಮಾಡಿ ಒಂದು ವಾರ ಕಳೆದರೂ ಗುತ್ತಿಗೆದಾರರು ಯೂ ಟರ್ನ್ ಮಾಡಿದ್ದು, ಯಾರೂ ಕಮಿಷನ್ ಕೇಳಿಲ್ಲ ಎಂದು ಹೇಳಿದ್ದಾರೆ. ಶಿವಕುಮಾರ್ ವಿರುದ್ಧ ಬಹಿರಂಗವಾಗಿ ಆರೋಪ ಮಾಡಿದ್ದ ಗುತ್ತಿಗೆದಾರರೊಬ್ಬರು ಬಹಿರಂಗ ಕ್ಷಮೆಯಾಚಿಸಿದ್ದಾರೆ. ಗುತ್ತಿಗೆದಾರರು ಕಳೆದ ಮೂರು ವರ್ಷಗಳಿಂದ ಬಿಲ್ಲು ಬಾಕಿ ಉಳಿದಿದ್ದು, ಅವುಗಳನ್ನು ತೆರವುಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.
ಬಿಬಿಎಂಪಿ ಕಾಮಗಾರಿಗಳಲ್ಲಿ ನಡೆದಿರುವ ಭ್ರಷ್ಟಾಚಾರದ ಆರೋಪದ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ನಾಲ್ಕು ವಿಶೇಷ ತಂಡಗಳನ್ನು ರಚಿಸಿದೆ. 30ರೊಳಗೆ ವರದಿ ಸಲ್ಲಿಸುವಂತೆ ತಂಡಗಳಿಗೆ ಸೂಚಿಸಲಾಗಿದೆ.
ಆತ್ಮಹತ್ಯೆ ಅಪರಾಧವಾಗಿದೆ. ಮಾನಸಿಕ ಚಿಕಿತ್ಸೆಗಾಗಿ ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಿ.
COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777












Click it and Unblock the Notifications