ಮಾಜಿ ಬಿಬಿಎಂಪಿ ಸದಸ್ಯ ಎಂ. ನಾಗರಾಜ್ ಕೋವಿಡ್‌ಗೆ ಬಲಿ
ಬೆಂಗಳೂರು, ಸೆಪ್ಟೆಂಬರ್ 18 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಎಂ. ನಾಗರಾಜ್ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಎರಡು ಬಾರಿ ಬಿಬಿಎಂಪಿ ಸದ್ಯರಾಗಿ ಅವರು ಆಯ್ಕೆಯಾಗಿದ್ದರು.
ಕೋವಿಡ್ ಸೋಂಕಿಗೆ ತುತ್ತಾಗಿದ್ದ ಎಂ. ನಾಗರಾಜ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಎಂ. ನಾಗರಾಜ್ ಅವರು 2001ರಲ್ಲಿ ಕುರುಬರಹಳ್ಳಿ, 2010ರಲ್ಲಿ ನಂದಿನಿ ಲೇಔಟ್ ವಾರ್ಡ್‌ನಿಂದ ಬಿಬಿಎಂಪಿ ಸದಸ್ಯರಾಗಿ ಆಯ್ಕೆಯಾಗಿದ್ದರು. ಲೆಕ್ಕಪತ್ರ ಸ್ಥಾಯಿ ಸಮಿತಿ, ವಿಪಕ್ಷ ನಾಯಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದರು.
ಗುರುವಾರ ರಾತ್ರಿ ರಾಜ್ಯಸಭಾ ಸದಸ್ಯ, ಬಿಜೆಪಿ ನಾಯಕ ಅಶೋಕ ಗಸ್ತಿ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಅವರಿಗೂ ಸಹ ಕೋವಿಡ್ ಸೋಂಕು ತಗುಲಿತ್ತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಬೆಂಗಳೂರು ನಗರದಲ್ಲಿ ಗುರುವಾರ 3,799 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 184082. ಸಕ್ರಿಯ ಪ್ರಕರಣಗಳ ಸಂಖ್ಯೆ 41,053.












Click it and Unblock the Notifications