ಬೆಂಗಳೂರಿನ ಆಸ್ತಿದಾರರಿಗೆ ಮತ್ತೊಂದು ಶಾಕ್ ಕೊಟ್ಟ ಬಿಬಿಎಂಪಿ!

ಬೆಂಗಳೂರಿನ ಆಸ್ತಿದಾರರಿಗೆ ಶಾಕ್ ಕೊಡುವುದನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮುಂದುವರಿಸಿದೆ. ನಗರದಲ್ಲಿ ಅನಧಿಕೃವಾಗಿ ಹಾಗೂ ಕಟ್ಟಡ ನಕ್ಷೆ ಮಂಜೂರಾತಿ ಇಲ್ಲದೆ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಕೆಡವುತ್ತಿದ್ದಾರೆ. ಕಳೆದ ತಿಂಗಳು ಬೆಂಗಳೂರಿಯನ ಯಲಹಂಕ ವಲಯದಲ್ಲಿ ಈ ಕಾರ್ಯಾಚರಣೆಯನ್ನು ನಡೆಸಲಾಗಿತ್ತು. ಇದೀಗ ಈ ಕಾರ್ಯಾಚರಣೆಯನ್ನು ಬೆಂಗಳೂರಿನ ವಿವಿಧ ಭಾಗದಲ್ಲಿ ವಿಸ್ತರಿಸಲಾಗಿದೆ. ನಗರದಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಲಾಗಿರುವ ಕಟ್ಟಡಗಳನ್ನು ಹೊಡೆದುರುಳಿಸಲಾಗುತ್ತಿದೆ.

ಬೆಂಗಳೂರಿನ ವಿವಿಧ ಭಾಗದಲ್ಲಿ ರಸ್ತೆ ಭಾಗಕ್ಕೆ ಬರುವಂತೆ ಹಾಗೂ ನಕ್ಷೆ ಮಂಜೂರಾತಿ ತೆಗೆದುಕೊಳ್ಳದೆ ಕಟ್ಟಡಗಳನ್ನು ನಿರ್ಮಾಣ ಮಾಡಿರುವ ಆಸ್ತಿದಾರರ ಆಸ್ತಿಯ ಮೇಲೆ ಬಿಬಿಎಂಪಿ ಕಣ್ಣಿಟ್ಟಿದ್ದು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಪ್ರಾರಂಭಿಸಿದೆ. ಮಹದೇವಪುರ ವಲಯದ ಎ.ಇ.ಸಿ.ಎಸ್ ಲೇಔಟ್ ನಲ್ಲಿ ನಕ್ಷೆ ಮಂಜೂರಾತಿ ಪಡೆಯದೆ ಅನಧಿಕೃತವಾಗಿ ನಿರ್ಮಿಸಿದ ಕಟ್ಟಡ ವ್ಯತ್ತಿರಿಕ್ತ (ಕಟ್ಟಡದ ಅನಧಿಕೃತ) ಭಾಗಗಳ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಹದೇವಪುರ ವಲಯ ಆಯುಕ್ತರಾದ ರಮೇಶ್ ಅವರು ತಿಳಿಸಿದ್ದಾರೆ.

BBMP gives another shock to Bengaluru property owners Partial demolition of unauthorized buildings

ಮಹದೇವಪುರ ವಲಯ ಎ.ಇ.ಸಿ.ಎಸ್ ಲೇಔಟ್, ಸಿ-ಬ್ಲಾಕ್ 1ನೇ ಮುಖ್ಯ ರಸ್ತೆಯಲ್ಲಿ ಬರುವ ಸೈಟ್ ಸಂ. 735 ರ ಸ್ವತ್ತಿನ ಮಾಲೀಕರಾದ ಭಾಸ್ಕರ್ ಎಂಬುವವರು 38 X 59 ಚ.ಅ (11.80 X 18.10ಮೀ) ಸೈಟ್ ನಲ್ಲಿ ನಕ್ಷೆ ಮಂಜೂರಾತಿ ಪಡೆಯದೆ ಅನಧಿಕೃತವಾಗಿ ನೆಲಮಾಳಿಗೆ + ನೆಲ ಸೇರಿದಂತೆ 6 ಅಂತಸ್ತು ಕಟ್ಟಡ ನಿರ್ಮಾಣ ಮಾಡಿದ್ದರು. ಮುಂದುವರಿದು, ಸ್ವತ್ತಿನ ಮಾಲೀಕರಿಗೆ ಕಟ್ಟಡದ ಮಾಲೀಕರಿಗೆ ಈಗಾಗಲೇ ಬಿಬಿಎಂಪಿ 2020 ಕಾಯ್ದೆಯಡಿ ತಾತ್ಕಾಲಿಕ ಆದೇಶ ಹಾಗೂ ಸ್ಥಿರಿಕರಣ ಆದೇಶದ ನೋಟೀಸ್‌ಗಳನ್ನು ಜಾರಿ ಮಾಡಲಾಗಿರುತ್ತದೆ. ಆದರೂ ಸಹಾ ಕಟ್ಟಡ ನಿರ್ಮಾಣ ಕಾರ್ಯ ನಿಲ್ಲಿಸದ ಪರಿಣಾಮ, ಇಂದು ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ನಡೆಸಲಾಗಿರುತ್ತದೆ ಎಂದು ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹೆಚ್ಚುವರಿಯಾಗಿ ನಿರ್ಮಿಸಿರುವ 2 ಮಹಡಿಗಳನ್ನು ಮೂರು ಕೊರೆಯುವ ಯಂತ್ರಗಳು ಹಾಗೂ 10 ಸಿಬ್ಬಂದಿ ಮೂಲಕ ತೆರವು ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಕಾರ್ಯಾಚರಣೆ ಪೂರ್ಣಗೊಂಡ ಬಳಿಕ ತೆರವುಗೊಳಿಸಲು ತಗುಲಿದ ವೆಚ್ಚವನ್ನು ಕಟ್ಟಡ ಮಾಲೀಕರಿಂದ ವಸೂಲಿ ಮಾಡಲಾಗುವುದು ಎಂದು ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ವೇಳೆ ಕಾರ್ಯಪಾಲಕ ಎಂಜಿನಿಯರ್‌ ರವಿಕುಮಾರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಹಾಗೂ ಪೊಲೀಸ್ ಸಿಬ್ಬಂದಿ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+