Property: ಬೆಂಗಳೂರಿನ 1.85 ಲಕ್ಷ ಆಸ್ತಿದಾರರಿಗೆ ಹೊಸ ಶಾಕ್ ಕೊಟ್ಟ ಬಿಬಿಎಂಪಿ!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಬೆಂಗಳೂರಿನ ಬರೋಬ್ಬರಿ 1.85 ಲಕ್ಷಕ್ಕೂ ಹೆಚ್ಚು ಆಸ್ತಿ ಮಾಲೀಕರಿಗೆ ಶಾಕ್ ಕೊಡುವುದಕ್ಕೆ ಮುಂದಾಗಿದೆ. ಬೆಂಗಳೂರಿನಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತೀಚಿನ ದಿನಗಳಲ್ಲಿ ಬಿಬಿಎಂಪಿಯು ಕಠಿಣ ನಿಯಮಗಳನ್ನು ಅನುಸರಿಸುತ್ತಿದೆ. ಇದೀಗ ಇ ಖಾತಾ ಹಾಗೂ ಒಟಿಎಸ್ ಯೋಜನೆಗಳ ಮೂಲಕ ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗೆ ಉಳಿದಿರುವವರನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ತರಲಾಗಿದೆ. ಆಸ್ತಿ ತೆರಿಗೆ ಪಾವತಿ ಮಾಡದೆ ಇರುವ ಆಸ್ತಿದಾರರ ಆಸ್ತಿ ಹರಾಜು ಪ್ರಕ್ರಿಯೆಯಂತಹ ಗಂಭೀರ ಕ್ರಮಗಳನ್ನು ತೆಗೆದುಕೊಂಡಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಇದೀಗ ಆಸ್ತಿ ಮಾಲೀಕರಿಗೆ ಮತ್ತೊಂದು ಹೊಸ ಶಾಕ್ ಕೊಡುವುದಕ್ಕೆ ಮುಂದಾಗಿದೆ.
ಬೆಂಗಳೂರಿನ ಆಸ್ತಿ ಮಾಲೀಕರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಹೊಸ ಶಾಕ್ ಕೊಡುವುದಕ್ಕೆ ಮುಂದಾಗಿದೆ. ಕಳೆದ 10 ವರ್ಷಗಳಿಂದಲೂ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರು ಹಾಗೂ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ಶಾಕ್ ನೀಡಲಾಗುತ್ತಿದೆ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ಶೇ. 100ರಷ್ಟು ದಂಡ ವಿಧಿಸಲು ಅಧಿಕಾರವನ್ನು ಬಿಬಿಎಂಪಿಯು ಇತಿಹಾಸದಲ್ಲೇ ಮೊದಲ ಬಾರಿ ಜಾರಿ ಮಾಡಲು ಮುಂದಾಗಿದೆ. ಈ ಮೂಲಕ ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಬಾಕಿ ಮೊತ್ತ 380 ಕೋಟಿ ರೂಪಾಯಿ ಸಂಗ್ರಹಿಸಲು ನಿರ್ಧರಿಸಲಾಗಿದೆ.

ನಗರದಲ್ಲಿ ಆಸ್ತಿ ಮಾಲೀಕರು ಶಾಕ್‌ಗೆ ಒಳಗಾಗುವ ಒಂದಿಲ್ಲೊಂದು ಸುದ್ದಿಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಜಾರಿ ಮಾಡುತ್ತಿದೆ. ನಗರದಲ್ಲಿ ಆಸ್ತಿ ಮಾಲೀಕರಿಂದ / ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಂದ ಆಸ್ತಿ ತೆರಿಗೆ ಸಂಗ್ರಹದಲ್ಲಿ ಕಠಿಣ ನಿಯವನ್ನು ಅನುಸರಿಸುವುದಕ್ಕೆ ರಾಜ್ಯ ಸರ್ಕಾರವು ಅನುಮತಿ ನೀಡಿದೆ. ಇದಾದ ಮೇಲೆ ಬಿಬಿಎಂಪಿಯು ಕಠಿಣ ನಿಯಮಗಳನ್ನು ಅನುಸರಿಸುತ್ತಿದೆ.
ಈ ಬಾರಿ ನಗರದಲ್ಲಿ ಮಾರ್ಚ್ ಅಂತ್ಯದ ವೇಳೆಗೆ 1.85 ಲಕ್ಷಕ್ಕೂ ಹೆಚ್ಚು ಆಸ್ತಿ ಮಾಲೀಕರು ಬಾಕಿ ಪಾವತಿ ಮಾಡದಿದ್ದರೆ. ಈ ಆಸ್ತಿದಾರರಿಗೆ ಆಸ್ತಿ ತೆರಿಗೆಯು ಬರೋಬ್ಬರಿ ದುಪ್ಪಟ್ಟು ಆಗಲಿದೆ ಎಂದು ಬಿಬಿಎಂಪಿಯ ಕಂದಾಯ ವಿಭಾಗದ ಅಧಿಕಾರಿಗಳು ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಎಚ್ಚರಿಕೆ ನೀಡಿದ್ದಾರೆ. ಕಳೆದ ವರ್ಷ ಮಾರ್ಚ್‌ನಲ್ಲಿ ರಾಜ್ಯ ಸರ್ಕಾರದ ಅಧಿಸೂಚನೆಯ ಮೂಲಕ ಶೇ 100% ದಂಡದ ನಿಬಂಧನೆಯ ಅನುಸಾರ ಕ್ರಮ ವಹಿಸಲಾಗುತ್ತಿದೆ.
ಮೆಸೇಜ್ ಹಾಗೂ ನೋಟಿಸ್ ಎಚ್ಚರಿಕೆ: ಬೆಂಗಳೂರಿನಲ್ಲಿ 608 ಆಸ್ತಿದಾರರಿಗೆ ಆಸ್ತಿ ಹರಾಜು ಹಾಕುವುದಾಗಿ ಎಚ್ಚರಿಕೆ ನೀಡಿದ ಮೇಲೆ ಹಲವರು ಆಸ್ತಿ ತೆರಿಗೆ ಪಾವತಿ ಮಾಡಿದ್ದಾರೆ. ಆದರೆ, Ots ಜಾರಿ ಮಾಡಿದ ಮೇಲೂ ಹಲವರು ಆಸ್ತಿ ತೆರಿಗೆ ಪಾವತಿ ಮಾಡಿಲ್ಲ. ಹೀಗಾಗಿ ಕೆಲವು ಆಸ್ತಿದಾರರಿಗೆ ಮೆಸೇಜ್ ಹಾಗೂ ನೋಟಿಸ್‌ನ ಮೂಲಕ ಆಸ್ತಿ ತೆರಿಗೆ ಪಾವತಿ ಮಾಡುವಂತೆ ಸೂಚನೆ ನೀಡಲಾಗುತ್ತಿದೆ. ಈ ಬಾರಿ ಅಂದರೆ ಮಾರ್ಚ್ 31ರ ಒಳಗಾಗಿ ಪಾವತಿ ಮಾಡದೆ ಇದ್ದರೆ ದುಪ್ಪಟ್ಟು ದಂಡ ಪಾವತಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
ಇನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಇಲ್ಲಿಯ ವರೆಗೆ ಬರೋಬ್ಬರಿ 4,650 ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹವಾಗಿದೆ. ಆರ್ಥಿಕ ವರ್ಷ ಮುಕ್ತಾಯವಾಗುವುದರ ಒಳಗಾಗಿ 5,000 ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹ ಮಾಡುವ ಗುರಿಯನ್ನು ಹಾಕಿಕೊಳ್ಳಲಾಗಿದೆ.












Click it and Unblock the Notifications