ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಾರ್ವಜನಿಕ ಕಾಮಗಾರಿ; ಬಿಬಿಎಂಪಿಯಿಂದ ಎಂಜಿನಿಯರುಗಳಿಗೆ ತರಬೇತಿ

|
Google Oneindia Kannada News

ಬೆಂಗಳೂರು, ಫೆಬ್ರವರಿ 26: ಸರ್ಕಾರಿ ಕಾಮಗಾರಿಗಳ ಬಗ್ಗೆ ಒಂದು ದಿನದ ತರಬೇತಿಯನ್ನು ಬಿಬಿಎಂಪಿ ಎಂಜಿನಿಯರಿಂಗ್ ವಿಭಾಗದ 400 ಸಿಬ್ಬಂದಿಗಳಿಗೆ ನೀಡಲಾಯಿತು.

ಫೆ 13 ರಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ 2020-21ನೇ ಸಾಲಿನ ಆಯವ್ಯಯದ ಬೇಡಿಕೆಗಳ ಬಗ್ಗೆ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಮುಖ್ಯಮಂತ್ರಿ ಸೂಚಿಸಿದಂತೆ, ಪಾಲಿಕೆಯ ಕಾಮಗಾರಿ ಇಲಾಖೆಯ ಎಂಜಿನಿಯರುಗಳಿಗೆ ತರಬೇತಿ ನೀಡಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.

ಪುಟ್‌ಪಾತ್ ಒತ್ತುವರಿದಾರರಿಗೆ ಎಚ್ಚರಿಕೆ ಕೊಟ್ಟ ಬಿಬಿಎಂಪಿ ಮೇಯರ್ಪುಟ್‌ಪಾತ್ ಒತ್ತುವರಿದಾರರಿಗೆ ಎಚ್ಚರಿಕೆ ಕೊಟ್ಟ ಬಿಬಿಎಂಪಿ ಮೇಯರ್

ಅಂದಾಜು ಪಟ್ಟಿ ತಯಾರಿಸುವುದು, ಡಾಂಬರೀಕರಣ ಕಾಮಗಾರಿ ನಡೆಯುವ ಸಮಯದಲ್ಲಿ ಮಾರ್ಗಸೂಚಿಯಂತೆ ಕೈಗೊಳ್ಳಬೇಕಾದ ಕ್ರಮಗಳು, ಗುಂಡಿ ಮುಚ್ಚುವ ಕಾಮಗಾರಿಯ ಪ್ರಮಾಣಿತ ಕಾರ್ಯಚರಣೆ ವಿಧಾನ, ಇ-ಪ್ರಕ್ಕೂರ್‌ಮೆಂಟ್ ಮುಖಾಂತರ ಕಾಮಗಾರಿಗಳಿಗೆ ಟೆಂಡರ್ ಕರೆಯಲು ಅನುಸರಿಸಬೇಕಾದ ವಿಧಾನ, ಸಹಾಯ 2.0 ಆಪ್‌ನಲ್ಲಿ ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಬೇಕಾದ ಕ್ರಮ ಇತರೆ ವಿಷಯಗಳಿಗೆ ಸಂಬಂಧಿಸಿದಂತೆ, ಪಾಲಿಕೆಯ ಟೌನ್‌ಹಾಲ್‌ನಲ್ಲಿ ತರಬೇತಿ ನೀಡಲಾಯಿತು.

BBMP Gives Latest Training To BBMP Engineers

ತರಬೇತಿಗೆ ಆಯುಕ್ತರು, ವಿಶೇಷ ಆಯುಕ್ತರು(ಯೋಜನೆ) ರವರು ಉಪಸ್ಥಿತರಿದ್ದು, ಕಾರ್ಯಗಾರದ ಹಂತದಲ್ಲಿ ಮಾನ್ಯ ಆಯುಕ್ತರು ರವರು, ಪಾಲಿಕೆಯ ಎಲ್ಲಾ ಅಭಿಯಂತರರುಗಳು ಸಮರ್ಪಕವಾಗಿ ಕೆಲಸ ಕಾರ್ಯಗಳನ್ನು ನಿರ್ವಹಿಸಿ, ಸಾರ್ವಜನಿಕರ ಸಮ್ಮುಖದಲ್ಲಿ ಒಳ್ಳೆಯ ಅಭಿಪ್ರಾಯವನ್ನು ರೂಪಿಸಿಕೊಳ್ಳಲು ಸೂಚನೆ ನೀಡಿದ್ದಾರೆ.

English summary
BBMP Gives Latest Training To BBMP Engineers For Public Development Works At Town Hall In Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X