Bengaluru Property: ಬೆಂಗಳೂರಿನಲ್ಲಿ ಆಸ್ತಿ ಬಾಕಿ ಉಳಿಸಿಕೊಂಡವರಿಗೆ ಶಾಕ್ ಕೊಟ್ಟ ಬಿಬಿಎಂಪಿ!
ಬೆಂಗಳೂರಿನಲ್ಲಿ ಆಸ್ತಿ ಬಾಕಿ ಉಳಿಸಿಕೊಂಡಿರುವವರಿಗೆ ಬಿಬಿಎಂಪಿ ಶಾಕ್ ಕೊಟ್ಟಿದೆ. ಸಾಮಾನ್ಯವಾಗಿ ನಗರದಲ್ಲಿ ಆಸ್ತಿ ಬಾಕಿ ಉಳಿಸಿಕೊಂಡಿರುವವರಿಗೆ ನೋಟಿಸ್ ನೀಡುವುದು ಹಾಗೂ ಎಚ್ಚರಿಕೆಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೊಡುತ್ತಿತ್ತು. ಇದೀಗ ಬಿಬಿಎಂಪಿಯು ಕಠಿಣ ಕ್ರಮಗಳಿಗೆ ಮುಂದಾಗಿದೆ.
ಹೌದು ನಗರದಲ್ಲಿ ಖಾತಾ ನಿಯಮ ಹಾಗೂ ಕಟ್ಟುನಿಟ್ಟಿನ ಇ ಖಾತಾ ಜಾರಿಯ ನಂತರ ಇದೀಗ ಬಿಬಿಎಂಪಿಯು ಆಸ್ತಿ ಬಾಕಿ ಉಳಿಸಿಕೊಂಡವರ ಮೇಲೆ ಕಠಿಣ ಕಾನೂನು ಕ್ರಮವನ್ನು ತೆಗೆದುಕೊಳ್ಳುತ್ತಿದೆ. ಇದೀಗ ಬೆಂಗಳೂರಿನ ವಾಣಿಜ್ಯ ಮಳಿಗೆಗಳಿಗೆ ಶಾಕ್ ಕೊಡುವುದಕ್ಕೆ ಬಿಬಿಎಂಪಿ ಮುಂದಾಗಿದೆ. ಆಸ್ತಿದಾರರಿಗೆ ಬಿಬಿಎಂಪಿ ಕೊಟ್ಟ ಶಾಕ್ ಏನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ರಾಜ್ಯ ರಾಜಧಾನಿಯಲ್ಲಿ ಆಸ್ತಿ ವಿಚಾರವಾಗಿ ಬಿಬಿಎಂಪಿಯು ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದಕ್ಕೆ ಮುಖ್ಯ ಕಾರಣ ನಗರದ ಆಸ್ತಿಯಿಂದಲೇ ಬಿಬಿಎಂಪಿಗೆ ಕೋಟ್ಯಾಂತರ ರೂಪಾಯಿ ಆದಾಯ ಹರಿದು ಬರುತ್ತದೆ. ಇನ್ನು ಬೆಂಗಳೂರಿನಲ್ಲಿ ಇ ಖಾತಾವನ್ನು ಕಡ್ಡಾಯವಾಗಿ ಮಾಡಿಸುತ್ತಿರುವ ಹಿಂದಿನ ಮುಖ್ಯ ಉದ್ದೇಶವೇ ಆಸ್ತಿ ವ್ಯಾಪ್ತಿಯಿಂದ ಹೊರಗುಳಿದಿರುವ ಆಸ್ತಿಗಳನ್ನು ಆಸ್ತಿ ವ್ಯಾಪ್ತಿಗೆ ತಂದು ತೆರಿಗೆ ಸಂಗ್ರಹ ಪ್ರಮಾಣ ಹೆಚ್ಚಳ ಮಾಡುವುದು ಸಹ ಆಗಿದೆ.
ಇದೀಗ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ಪಾಲಿಕೆ ಬಿಸಿ ಮುಟ್ಟಿಸುತ್ತಿದೆ ನಗರದ 830ಕ್ಕೂ ಹೆಚ್ಚು ವಾಣಿಜ್ಯ (ವಸತಿಯೇತರ) ಕಟ್ಟಡಗಳಿಗೆ ಬೀಗ ಮುದ್ರೆ ಹಾಕಲಾಗಿದೆ ಎಂದು ಬಿಬಿಎಂಪಿ ಹೇಳಿದೆ. ಅಲ್ಲದೆ ಈ ಅಭಿಯಾನವನ್ನು ಮುಂದುವರಿಸುವುದಾಗಿಯೂ ಎಚ್ಚರಿಕೆ ಕೊಡಲಾಗಿದೆ.

ನಗರದಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದ 830ಕ್ಕೂ ಹೆಚ್ಚು ವಾಣಿಜ್ಯ ಕಟ್ಟಡಗಳಿಗೆ ಬೀಗ ಜಡಿಯಲಾಗಿದೆ ಅಂತ ಬಿಬಿಎಂಪಿಯ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಹೇಳಿದ್ದಾರೆ. ಬಿಬಿಎಂಪಿಯ 8 ವಲಯಗಳಲ್ಲಿ ಅತಿ ಹೆಚ್ಚು ಬಾಕಿ ಆಸ್ತಿ ತೆರಿಗೆ ಪಾವತಿಸದ (ಸುಸ್ತಿದಾರರಿಂದ) ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಂದ ಆಸ್ತಿ ತೆರಿಗೆಯನ್ನು ಸಂಗ್ರಹಿಸಬೇಕು.
ಈ ನಿಟ್ಟಿನಲ್ಲಿ ಆಯಾ ವಲಯಗಳಲ್ಲಿ ಹೆಚ್ಚು ಬಾಕಿ ಉಳಿಸಿಕೊಂಡಿರುವಂತಹ ಕಟ್ಟಡಗಳಿಗೆ ಬೀಗ ಹಾಕಲಾಗಿದೆ. ಈ ರೀತಿ ಬೇಗ ಬಾಕಿ ಆಸ್ತಿ ತೆರಿಗೆಯನ್ನು ಸಂಗ್ರಹಿಸಲಾಗುತ್ತಿದೆ ಎಂದು ಬಿಬಿಎಂಪಿಯ ಕಂದಾಯ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ರೀತಿಯ ಎಲ್ಲಾ ಪರಿಷ್ಕರಣೆ ಪ್ರಕರಣಗಳಲ್ಲಿ, ಆಸ್ತಿಗಳಿಗೆ ಬೀಗಮುದ್ರೆ, ಮುಟ್ಟುಗೋಲು ಹಾಗೂ ಜಪ್ತಿ ಮಾರಾಟವನ್ನು ಬಳಸಿಕೊಂಡು ವಸೂಲಿ ಮಾಡಬೇಕಿದೆ. ಈ ಸಂಬಂಧ 2025ರ ಜನವರಿ 1 ರಿಂದ 9ನೇ ಜನವರಿ 2025 ರವರೆಗೆ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 830ಕ್ಕೂ ಹೆಚ್ಚು ವಾಣಿಜ್ಯ ಕಟ್ಟಡಗಳಿಗೆ ಬೀಗಮುದ್ರೆ ಹಾಕಿರುವುದಾಗಿ ಹೇಳಲಾಗಿದೆ.
ಕಳೆದ 24 ಗಂಟೆಗಳಲ್ಲಿ ಎಲ್ಲಾ 8 ವಲಯಗಳು ಸೇರಿದಂತೆ 182 ವಾಣಿಜ್ಯ ಕಟ್ಟಡಗಳಿಗೆ ಬೀಗ ಹಾಕಲಾಗಿದೆ. ಆಯಾ ವಲಯ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹಿಸುವ ವಿಚಾರವಾಗಿ ಸೂಕ್ತ ಕ್ರಮವನ್ನು ತೆಗೆದುಕೊಳ್ಳುವಂತೆ ಬಿಬಿಎಂಪಿಯ ವಲಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ಕಂದಾಯ ಅಧಿಕಾರಿಗಳ ಮೂಲಕ ಶಾಕ್: ಇನ್ನು ಬೆಂಗಳೂರಿನಲ್ಲಿ ಆಸ್ತಿ ಬಾಕಿ ಉಳಿಸಿಕೊಂಡಿರುವವರಿಗೆ ವಲಯವಾರು ಕಂದಾಯ ವಿಭಾಗದ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳಲಾಗಿದ್ದು. ಆ ಪಟ್ಟಿಯ ಅನುಸಾರ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಬಿಬಿಎಂಪಿಯು ವಲಯವಾರು ಆಸ್ತಿ ಬಾಕಿ ಉಳಿಸಿಕೊಂಡಿರುವವರ ಪಟ್ಟಿಯನ್ನು ಮಾಡಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications