ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಒಂಟಿಮನೆ ನಿರ್ಮಾಣ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ ಬಿಬಿಎಂಪಿ

|
Google Oneindia Kannada News

ಬೆಂಗಳೂರು, ಜನವರಿ 16: ಒಂಟಿಮನೆ ಯೋಜನೆಗೆ ಸಂಬಂಧಿಸಿದಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿರುವವರು ಒಂಟಿಮನೆ ನಿರ್ಮಾಣ ಮಾಡಿಕೊಳ್ಳಲು 5 ಲಕ್ಷ ರೂ. ಸಹಾಯಧನಕ್ಕಾಗಿ ನಿಗದಿಪಡಿಸಿದ್ದ ಅರ್ಜಿ ಸಲ್ಲಿಕೆ ದಿನಾವಂಕವನ್ನು ಜನವರಿ 20ರವರೆಗೆ ವಿಸ್ತರಿಸಿ ಆದೇಶಿಸಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 2022-23ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳಡಿ ಒಂಟಿಮನೆ ಯೋಜನೆ ಜಾರಿಯಲ್ಲಿದೆ. ಈ ಯೋಜನೆಯಡಿ ಪಾಲಿಕೆಯ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿರುವವರಿಗೆ ಒಂಟಿಮನೆ ಕಟ್ಟಿಕೊಳ್ಳಲು 5 ಲಕ್ಷ ರೂ. ಸಹಾಯಧನ ಪಡೆಯಬಹುದು. ಅದಕ್ಕಾಗಿ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಕೆಗೆ ಮೊದಲು ಮೊದಲ ಜನವರಿ 18 ನಿಗದಿ ಮಾಡಲಾಗಿದ್ದು, ಇದೀಗ ಅದನ್ನು ಜ.20ರವರೆಗೆ ವಿಸ್ತರಿಸಲಾಗಿದೆ.

Bengaluru Property Tax: ಹೊಸ ಆಸ್ತಿದಾರರ ಪರಿಶೀಲನೆ, ತೆರಿಗೆ ಸಂಗ್ರಹಕ್ಕೆ ಬಿಬಿಎಂಪಿ ಸೂಚನೆBengaluru Property Tax: ಹೊಸ ಆಸ್ತಿದಾರರ ಪರಿಶೀಲನೆ, ತೆರಿಗೆ ಸಂಗ್ರಹಕ್ಕೆ ಬಿಬಿಎಂಪಿ ಸೂಚನೆ

ಸದರಿ ಅವಧಿಯಲ್ಲಿ ಅರ್ಜಿಗಳನ್ನು ಆನ್‌ಲೈನ್‌ ಮುಖಾಂತರ ಸಲ್ಲಿಸಲು ಸಾಧ್ಯವಾಗಿರುವುದಿಲ್ಲ. ಆದ್ದರಿಂದ ಮತ್ತೊಮ್ಮೆ ಆನ್‌ಲೈನ್‌ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡುವಂತೆ ಸ್ಥಳೀಯರು ಬಿಬಿಎಂಪಿಗೆ ಕೋರಿದ್ದರು. ಹೀಗಾಗಿ ಒಂಟಿಮನೆ ಯೋಜನೆಗೆ ಸಂಬಂಧಿಸಿದಂತೆ ಪಾಲಿಕೆಯ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿರುವವರಿಗೆ ಒಂಟಿಮನೆ ನಿರ್ಮಾಣ ಕ್ಕೆ ಅರ್ಜಿ ಸಲ್ಲಿಕೆಗೆ ಅನುಕೂಲವಾಗುವಂತೆ ದಿನಾಂಕ ವಿಸ್ತರಿಸುವುದಾಗಿ ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.

BBMP has extended till Jan 20 date of application for single house construction grant

ಆಸ್ತಕರು ಪಾಲಿಕೆಯ ವೆಬ್ ಜಾಲತಾಣವಾದ https://welfare.bbmpgov.in ಮುಖಾಂತರ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಬೆಂಗಳೂರು ಒನ್ ಕೇಂದ್ರದಲ್ಲಿ 30 ರೂ. ಶುಲ್ಕ ಪಾವತಿಸಿ ಆನ್‌ಲೈನ್ ಮುಖೇನ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಎಲ್ಲಾ ವಲಯದ ಜಂಟಿ ಆಯುಕ್ತರು ರವರ ಕಛೇರಿಯಲ್ಲಿ ಸಹಾಯ ಕೇಂದ್ರವನ್ನು ಸ್ಥಾಪಿಸಿದ್ದು, ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ ಎಂದು ಕಲ್ಯಾಣ ವಿಭಾಗದ ವಿಶೇಷ ಆಯುಕ್ತರು ತಿಳಿಸಿದ್ದಾರೆ.

English summary
BBMP has extended till Jan 20 date of application for single house construction grant
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X