ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ 209 ಪ್ರದೇಶಗಳು ಪ್ರವಾಹ ಭೀತಿಯಲ್ಲಿವೆ: ಬಿಬಿಎಂಪಿ

|
Google Oneindia Kannada News

ಬೆಂಗಳೂರು, ಆಗಸ್ಟ್ 08: ಬೆಂಗಳೂರಿನಲ್ಲಿ 209 ಪ್ರದೇಶಗಳು ಪ್ರವಾಹ ಭೀತಿಯಲ್ಲಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ. ಅದರಲ್ಲಿ 153 ಪ್ರದೇಶಗಳು ಸೂಕ್ಷ್ಮ ಹಾಗೂ 56 ಅತೀ ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲಾಗಿದೆ.

Recommended Video

Kerala Flight crash ದುರಂತದಲ್ಲಿದ್ದ 40 ಮಂದಿಗೆ Corona | Oneindia Kannada

ಈ ಪ್ರದೇಶದಲ್ಲಿ ಮಳೆ ಹಾನಿ ತಡೆಗೆ ಅಗತ್ಯ ಕಾಮಗಾರಿಗಳನ್ನು ಕೈಗೊಂಡಿರುವುದಾಗಿ ಹೇಳುತ್ತಿದೆ. ಪ್ರವಾಹದ ಕುರಿತಂತೆ ಮುಂಚಿತವಾಗಿ ಮಾಹಿತಿ ಪಡೆಯಲು 28 ಕಡೆ ರಾಜಕಾಲುವೆಗಳಲ್ಲಿ ಸೆನ್ಸರ್ ಗಳನ್ನು ಅಳವಡಿಸಲಾಗಿದೆ. ಇದರಿಂದ ಪ್ರವಾಹ ಪರಿಸ್ಥಿತಿ ಉಂಟಾಗಿರುವುದು ತಿಳಿಯುತ್ತಿದ್ದಂತೆಯೇ ಸ್ಥಳೀಯರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಸಹಾಯವಾಗಲಿದೆ.

ಕರ್ನಾಟಕದ 4 ಜಿಲ್ಲೆಗಳಲ್ಲಿ 2 ದಿನ ಮಳೆಯ ರೆಡ್ ಅಲರ್ಟ್ ಘೋಷಣೆಕರ್ನಾಟಕದ 4 ಜಿಲ್ಲೆಗಳಲ್ಲಿ 2 ದಿನ ಮಳೆಯ ರೆಡ್ ಅಲರ್ಟ್ ಘೋಷಣೆ

ಮಳೆ ಬಂದಾಗ ಬೀಳುವ ಮರಗಳು, ಮುರಿದು ಬೀಳುವ ರೆಂಬೆ-ಕೊಂಬೆಗಳ ತೆರವಿಗೆ ವಿಧಾನಸಭಾ ಕ್ಷೇತ್ರವಾರು 28 ತಂಡಗಳನ್ನು ನಿಯೋಜಿಸಲಾಗಿದೆ. ಮರಗಳು, ರೆಂಬೆ-ಕೊಂಬೆಗಳನ್ನು ತೆರವುಗೊಳಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದ್ದು, ಆ ವಾಹನಗಳ ಓಡಾಟದ ಮೇಲೆ ನಿಗಾ ಇಡಲು ಸಹಕಾರಿಯಾಗಲಿದೆ. ಯಾವುದೇ ಪ್ರದೇಶಗಳಿಂದ ದೂರುಗಳು ಬಂದರೂ ತಕ್ಷಣ ಸ್ಥಳಕ್ಕೆ ಕಳುಹಿಸಲಾಗುತ್ತದೆ.

BBMP Has Identified 209 Flood Prone Areas Across Bengaluru

ಬೆಂಗಳೂರಿನಲ್ಲಿ ಮಳೆಯಾಗುವ ಪ್ರಮಾಣ, ಯಾವ ಪ್ರದೇಶದಲ್ಲಿ ಹೆಚ್ಚು ಮಳೆಯಾಗಲಿದೆ, ಪ್ರವಾಹ ಭೀತಿ ಉಂಟಾಗಲಿದೆ ಎಂಬುದನ್ನು ತಿಳಿಯಲು ರೆಡಾರ್ ಅಳವಡಿಕೆಗೆ 15 ಕೋಟಿ ರೂ .ವೆಚ್ಚ ಮಾಡಲಾಗುತ್ತಿದೆ.

ಉಳಿದ 35 ಕೋಟಿ ರೂ ವೆಚ್ಚದಲ್ಲಿ ಪ್ರವಾಹ ಉಂಟಾಗುವ ಕಡೆ ಯೋಜನೆಗಳನ್ನು ರೂಪಿಸಲು ನಿರ್ಧರಿಸಲಾಗಿದೆ.

English summary
Karnataka is not only reeling under the impact of COVID-19, many districts in the state are facing a flood-like situation along with terrible landslides. In light of the situation, Bruhat Bengaluru Mahanagara Palike (BBMP) has declared 209 areas in Bengaluru as flood-prone.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X