Bengaluru: ವಿವಿಧೆಡೆಯ ಇಂದಿರಾ ಕ್ಯಾಂಟಿನ್ ದುರಸ್ಥಿಗೆ ಬಿಬಿಎಂಪಿ ಸೂಚನೆ, ಎಲ್ಲಿ ಏನು ಹಾಳಾಗಿದೆ ತಿಳಿಯಿರಿ?
ಬೆಂಗಳೂರು, ಜುಲೈ 12: ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾಗಿರುವ 'ಇಂದಿರಾ ಕ್ಯಾಂಟೀನ್' ಪುನರ್ ಆರಂಭಕ್ಕೆ, ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಈಗಾಗಲೇ 100 ರೂ. ಹಣ ಹಂಚಿಕೆ ಮಾಡಿದ್ದಾರೆ. ಇದರ ಬೆನಲ್ಲೆ ದುರಸ್ಥಿ ಎದರು ನೋಡುತ್ತಿದ್ದ ವಿವಿಧೆಡೆಯ ಇಂದಿರಾ ಕ್ಯಾಂಟೀನ್‌ಗಳನ್ನು ಸರಿಪಡಿಸಲು ಬಿಬಿಎಂಪಿ ಮುಂದಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು, ಬುಧವಾರ ಬೆಂಗಳೂರಿನ ಪೂರ್ವ ವಲಯದ ಹೆಬ್ಬಾಳ ಹಾಗೂ ವಿಶ್ವನಾಥ ನಾಗೇನಹಳ್ಳಿ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಎರಡು ಇಂದಿರಾ ಕ್ಯಾಂಟೀನ್ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಅವರು, ಈ ವಲಯದಲ್ಲಿ ಇಂದಿರಾ ಕ್ಯಾಂಟೀನ್‌ಗಳ ದುರಸ್ಥಿ ಕಾರ್ಯಗಳನ್ನು ಕೂಡಲೇ ಕೈಗೆತ್ತಿಕೊಂಡು ಸರಿಪಡಿಸಲು ಅವರು ಸೂಚಿಸಿದರು.

ವಿವಿಧ ಇಂದಿರಾ ಕ್ಯಾಂಟೀನ್ ಗಳಲ್ಲಿನ ನಿರ್ವಹಣೆ ಹಾಗೂ ಆಹಾರದ ಗುಣಮಟ್ಟವನ್ನು ಪರಿಶೀಲಿಸಿದರು. ಈ ವೇಳೆ ಇಂದಿರಾ ಕ್ಯಾಂಟೀನ್ ನಲ್ಲಿ ದುರಸ್ಥಿಯಲ್ಲಿರುವ ವಿದ್ಯುತ್ ಲೈಟ್ ಸರಿಪಡಿಸಬೇಕು, ಕೈ ತೊಳೆಯುವ ನೀರಿನ ವ್ಯವಸ್ಥೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕದ ಬಳಕೆಗೆ ಅನುಕೂಲ ಮಾಡಿಕೊಂಡುವಂತೆ ಅವರು ತಿಳಿಸಿದರು.
ಶೌಚಾಲಯವನ್ನು ಸಾರ್ವಜನಿಕರ ಉಪಯೋಗಕ್ಕಾಗಿ ತೆರೆಯಬೇಕು. ಅದಕ್ಕೆ ಅಗತ್ಯ ನೀರಿನ ವ್ಯವಸ್ಥೆ ಮಾಡುವಂತೆ ಕ್ಯಾಂಟೀನ್ ನಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ನಿರ್ದೇಶನ ನೀಡಿದರು.

ಆಹಾರದ ಮೆನು ಶೀಘ್ರವೇ ಬದಲಾವಣೆ
ಇಂದಿರಾ ಕ್ಯಾಂಟೀನ್ ತಪಾಸಣೆಯ ವೇಳೆ ಸಾರ್ವಜನಿಕರ ಬಳಿ ತಿಂಡಿಯ ಗುಣಮಟ್ಟ ವಿಚಾರಿಸಿದಾಗ ಪ್ರತಿನಿತ್ಯ ಅಕ್ಕಿಯಿಂದ ಮಾಡಿದಂತಹ ಆಹಾರ ಮಾತ್ರ ಲಭ್ಯವಾಗಲಿದೆ. ಅದನ್ನು ಬದಲಿಸಲು ಮನವಿ ಮಾಡಿದರು. ಅದಕ್ಕೆ ಪ್ರತಿಕ್ರಿಯಿಸಿದ ಆಯುಕ್ತರು, ಇಂದಿರಾ ಕ್ಯಾಂಟೀನ್ ಗಳಲ್ಲಿ ನೀಡುವ ಆಹಾರದ ಮೆನು ಶೀಘ್ರವೇ ಬದಲಾಗಲಿದೆ. ದಿನನಿತ್ಯ ಬೇರೆ-ಬೇರೆ ತಿಂಡಿ-ಊಟದ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಇಂದಿರಾ ಕ್ಯಾಂಟೀನ್ ಗಳಿಗೆ ನಿಯೋಜಿಸಿರುವ ಮಾರ್ಷಲ್‌ಗಳನ್ನು ಬರೀ ಇಂದಿರಾ ಕ್ಯಾಂಟೀನ್ ನೋಡಿಕೊಳ್ಳುವುದು ಮಾತ್ರವಲ್ಲದೇ ಬೇರೆ-ಬೇರೆ ಜವಾಬ್ದಾರಿಗಳನ್ನು ಸಹ ನೀಡಬೇಕೆಂದು ವಲಯ ಜಂಟಿ ಆಯುಕ್ತರಿಗೆ ಸೂಚನೆ ನೀಡಲಾಯಿತು. ಜೊತೆಗೆ ಇಂದಿರಾ ಕ್ಯಾಂಟೀನ್/ಆಹಾರದ ಗುಣಮಟ್ಟ/ಹೆಚ್ಚು ಹಣ ಪಡೆಯುವ ವಿಚಾರವಾಗಿ ದೂರುಗಳಿದ್ದಲ್ಲಿ ಪಾಲಿಕೆಯ ಉಚಿತ ಸಹಾಯವಾಣಿ ಸಂಖ್ಯೆಯಾದ 1533 ಗೆ ಕರೆ ಮಾಡಿ ದೂರುಗಳನ್ನು ನೀಡಬಹುದು ಎಂದು ಹೇಳಿದರು.
ಸಣ್ಣ ಪುಟ್ಟು ದರುಸ್ಥಿ ಇದ್ದರೂ ಸರಿಪಡಿಸಿ
ಇದೇ ವೇಳೆ ವಿಶ್ವನಾಥ ನಾಗೇನಹಳ್ಳಿ ವಾರ್ಡ್ ನಲ್ಲಿರುವ ಇಂದಿರಾ ಕ್ಯಾಂಟೀನ್ ಗೆ ಭೇಟಿ ನಿಡಿ ಪರಿಶೀಲನೆ ನಡೆಸಲಾಯಿತು. ಅಲ್ಲಿನ ಇಂದಿರಾ ಕ್ಯಾಂಟೀನ್ ನ ನಾಮ ಫಲಕ ಹಾಳಾಗಿದ್ದು, ಅದನ್ನು ಕೂಡಲೇ ಬದಲಿಸಬೇಕು. ಇಂದಿರಾ ಕ್ಯಾಂಟೀನ್ ಗೆ ಅಳವಡಿಸಿರುವ ಮೆಟ್ಟಿಲುಗಳು ಹಾಳಾಗಿದ್ದು, ದುರಸ್ಥಿಗೊಳಿಸಲು, ಇನ್ನಿತರ ಸಣ್ಣ-ಪುಟ್ಟ ದುರಸ್ಥಿಗಳಿದ್ದರೆ ಅವುಗಳನ್ನು ಕೂಡಲೇ ಸಿರಪಡಿಸುವ ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ತಿಳಿಸಿದರು.
ಇಂದಿರಾ ಕ್ಯಾಂಟೀನ್ ಪರಿಶೀಲನೆ ವೇಳೆ ವಲಯ ಜಂಟಿ ಆಯುಕ್ತರಾದ ಪಲ್ಲವಿ, ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ವಲಯ ಮುಖ್ಯ ಅಭಿಯಂತರರಾದ ಸುಗುಣಾ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications