ಬೆಂಗಳೂರು: 25 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಬಿಡುಗಡೆ, ಜ.15ರ ಬಳಿಕ 3ಕ್ಷೇತ್ರ ಪಟ್ಟಿ ಪ್ರಕಟ
ಬೆಂಗಳೂರು, ಜನವರಿ 06: ಭಾರತದ ಚುನಾವಣಾ ಆಯೋಗದ ನಿರ್ದೇಶನ ಮೇರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಂತಿಮ ಮತದಾರರ ಪಟ್ಟಿ ಬಿಡುಗಡೆ ಮಾಡಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 82ಲಕ್ಷ ಮತದಾರರು ಇದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ಒಟ್ಟು 28 ವಿಧಾನಸಭಾ ಕ್ಷೇತ್ರಗಳ ಪೈಕಿ ಚಿಕ್ಕಪೇಟೆ, ಶಿವಾಜಿನಗರ ಮತ್ತು ಮಹಾದೇವಪುರ ವಿಧಾನಸಭಾ ಕ್ಷೇತ್ರಗಳನ್ನು ಬಿಟ್ಟು ಉಳಿದ 25 ವಿಧಾನಸಭಾ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿಯನ್ನು ಗುರುವಾರ ಬಿಬಿಎಂಪಿ ಬಿಡುಗಡೆ ಮಾಡಿದೆ. ಇದು ಕೇಂದ್ರ, ಉತ್ತರ, ದಕ್ಷಿಣ ಮತ್ತು ಬೆಂಗಳೂರು ನಗರ ವಿಭಾಗವಾಗವಾರು ಮತದಾರರ ಅಂಕಿ ಸಂಖ್ಯೆಗಳು ಹೀಗಿವೆ.
ಬಿಬಿಎಂಪಿ ಬಿಡುಗಡೆ ಮಾಡಿದ ಬೆಂಗಳೂರಿನ 25 ವಿಧಾನಸಭಾ ಕ್ಷೇತ್ರಗಳಲ್ಲಿ ಮಹಿಳೆಯರು, ಪುರುಷರು ಮತ್ತು ಇತರ ಸೇರಿ ಒಟ್ಟು 82,29,375 ಮತದಾರರು ಇದ್ದಾರೆ. ಈ ಪೈಕಿ 42,65,140 ಪುರುಷರು, 39,62,712 ಮಹಿಳಾ ಮತದಾರರು ಮತ್ತು 1,523 ತೃತೀಯಲಿಂಗಿಗಳು ಇರುವುದು ಕಂಡು ಬಂದಿದೆ.

ಸದ್ಯ ಕೈ ಬಿಡಡಲಾದ ಮಹದೇವಪುರ, ಚಿಕ್ಕಪೇಟೆ ಮತ್ತು ಶಿವಾಜಿನಗರದ ಮೂರು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಜನವರಿ 15 ರಂದು ಪ್ರಕಟಿಸಲಾಗುವುದು. ಅಂತಿಮ ಮತದಾರರ ಪಟ್ಟಿಯನ್ನು ಸಿಇಒ ವೆಬ್‌ಸೈಟ್ ಮತ್ತು ಬಿಬಿಎಂಪಿ ವೆಬ್‌ಸೈಟ್ ನಲ್ಲಿ (www.voterportal.eci.gov.in) ಅಳವಡಿಸಲಾಗಿದೆ. ಬೆಂಗಳೂರು ವ್ಯಾಪ್ತಿಯ ಮತದಾರರು ತಮ್ಮ ಮಾಹಿತಿಯನ್ನು ಪರಿಶೀಲಿಸಿಕೊಳ್ಳಬಹುದು ಎಂದು ಗಿರಿನಾಥ್ ಅವರು ತಿಳಿಸಿದರು.
ಮತದಾರರ ಪಟ್ಟಿ ಬಿಡುಗಡೆಯ ನಂತರವು ನಿರಂತರ ಪರಿಷ್ಕರಣೆಯಲ್ಲಿ, ಸೇರ್ಪಡೆ ತಿದ್ದುಪಡಿ, ಸ್ಥಳಾಂತರ ಹಾಗೂ ಮತದಾರರ ಪಟ್ಟಿಯಿಂದ ತೆಗೆದುಹಾಕುವಿಕೆ ಪ್ರಕ್ರಿಯೆ ಜಾರಿಯಲ್ಲಿರುತ್ತದೆ. ಈ ಪೈಕಿ ಮೊಬೈಲ್ ತಂತ್ರಾಂಶವಾದ ಓಟರ್ ಹೈಲ್ಪ್ ಲೈನ್ ಆಫ್ (Voter Helpline App ಇಲ್ಲವೇ www.nvsp.in ಪೋರ್ಟಲ್ ಮೂಲಕ ಪರಿಶೀಲಿಸಿ. ಜೊತೆಗೆ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇದೆ ಎಂದು ಮುಖ್ಯ ಆಯುಕ್ತರು ಹೇಳಿದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications