Deepavali Fest: ಉತ್ಪತ್ತಿಯಾಗುವ ತ್ಯಾಜ್ಯ ವಿಲೇವಾರಿಗೆ ಬಿಬಿಎಂಪಿ ಮಾರ್ಗಸೂಚಿ ಬಿಡುಗಡೆ, ಪಟ್ಟಿ
ಬೆಂಗಳೂರು, ಅಕ್ಟೋಬರ್ 10: ಸಾಲು ಸಾಲು ಹಬ್ಬಗಳು ಎದುರಾಗಿವೆ. ದಸರಾ ಮುಗಿಯುತ್ತಿದ್ದಂತೆ ದೀಪಾವಳಿ ಎದುರಾಗಲಿದೆ. ಹಬ್ಬದ ಪ್ರಯುಕ್ತ ಅತ್ಯಧಿಕ ಉತ್ಪನ್ನ ಮಾರುಕಟ್ಟೆಗೆ ಬರುತ್ತದೆ. ಖರೀದಿ, ಹಬ್ಬದಾಚರಣೆ ಬಳಿಕ ಭಾರೀ ಪ್ರಮಾಣದಲ್ಲಿ ಕಸ ಉತ್ಪತ್ತಿಯಾಗುತ್ತದೆ. ಇದರ ವಿಲೇವಾರಿಯದ್ದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಸಮಸ್ಯೆ ಆಗುತ್ತಿದೆ. ಈ ಸಂಬಂಧ ಗುರುವಾರ ಬಿಬಿಎಂಪಿ ಮಾರ್ಗಸೂಚಿ ಹೊರಡಿಸಿ ಆದೇಶಿಸಿದೆ.
ರಾಜ್ಯ ರಾಜಧಾನಿ ಬೆಂಗಳೂರಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹೆಚ್ಚುವರಿ ತ್ಯಾಜ್ಯ, ಉತ್ಪತ್ತಿಯಾಗುತ್ತದೆಂದು ಅಂದಾಜಿಸಲಾಗಿದೆ. ಹಬ್ಬದ ದಿನಗಳಂದು ಹಾಗೂ ನಂತರ ಘನತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಲು ಈ ಕೆಳಕಂಡಂತೆ ವಿಲೇವಾರಿ ಕ್ರಮಗಳನ್ನು ಅನುಸರಿಸಬೇಕು ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಕಟ್ಟುನಿಟ್ಟಾಗಿ ತಿಳಿಸಿದ್ದಾರೆ.

ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಮಾರ್ಗಸೂಚಿಗಳ ಪಟ್ಟಿ
* ಬಾಳೇಕಂದು, ಮಾವಿನ ಎಲೆ, ಹೂವು ಹಾಗೂ ಇತರೆ ಹಬ್ಬದ ವಸ್ತುಗಳನ್ನು ಮಾರಾಟ ಮಾಡುವ ವ್ಯಾಪಾರಿಗಳಿಗೆ ವಿಶೇಷವಾಗಿ ಮಾರುಕಟ್ಟೆಗಳಲ್ಲಿ ಹಸಿ ಮತ್ತು ಒಣ ತ್ಯಾಜ್ಯವನ್ನು ವಿಂಗಡಿಸಿ ನೀಡಲು ಅರಿವು ಮೂಡಿಸುವುದು.
* ಹಬ್ಬದ ದಿನಗಳಂದು ಉತ್ಪತ್ತಿಯಾಗುವ ಬಾಳೇಕಂದು, ಮಾವಿನ ಎಲೆ ಹಾಗೂ ಇತರೆ ಹಸಿರು ತ್ಯಾಜ್ಯವನ್ನು ಹಸಿತ್ಯಾಜ್ಯ ಸಂಸ್ಕರಣಾ ಘಟಕಗಳಲ್ಲಿ ಇರುವ ಶೆಡ್ಡರ್ಸ್ ಗಳಿಗೆ ವಿಲೇವಾರಿ ಮಾಡುವುದು.
* ಮಾರುಕಟ್ಟೆಗಳು ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬದ ಸಾಮಾನುಗಳನ್ನು ಮಾರಾಟ ಮಾಡುವ ವ್ಯಾಪಾರಿಗಳು ಏಕ ಬಳಕೆ ಪ್ಲಾಸ್ಟಿಕ್‌ಗಳನ್ನು ಬಳಸದಂತೆ ನಿಗಾವಹಿಸಲು ವಾರ್ಡ್‌ಗಳಲ್ಲಿ ಘನತ್ಯಾಜ್ಯ ಆರೋಗ್ಯ ಅಧಿಕಾರಿಗಳ ಮತ್ತು ಮಾರ್ಷಲ್‌ಗಳು ತಂಡಗಳನ್ನು ರಚಿಸಿಕೊಂಡು ದಿನಂಪ್ರತಿ ಪರಿವೀಕ್ಷಣೆ ಕೈಗೊಂಡು ಪ್ಲಾಸ್ಟಿಕ್ ಮಾರಾಟ / ಬಳಕೆದಾರರಿಗೆ ನಿಯಮಾನುಸಾರ ದಂಡ ವಿಧಿಸಿ ಪ್ಲಾಸ್ಟಿಕ್‌ನ್ನು ವಶಪಡಿಸಿಕೊಂಡು ಮರುಬಳಕೆಯಾಗದಂತೆ ಅಗತ್ಯ ಕ್ರಮವಹಿಸುವುದು.
* ದಸರ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಉತ್ಪತ್ತಿಯಾಗುವ ಹೆಚ್ಚುವರಿ ತ್ಯಾಜ್ಯವನ್ನು ಅಂದಾಜಿಸಿ. ಸದರಿ ತ್ಯಾಜ್ಯವನ್ನು ಸಂಪೂರ್ಣವಾಗಿ ಸಂಗ್ರಹಿಸಿ, ವಿಲೇವಾರಿ ಮಾಡಲು ಅಗತ್ಯ ಕ್ರಮ ಪಹಿಸುವುದು.
* ಬ್ಲಾಕ್‌ಸ್ಪಾಟ್(ಕಸ ಸುರಿಯುವ ಸ್ಥಳ)ಗಳಲ್ಲಿ ತ್ಯಾಜ್ಯ ಶೇಖರಣೆಗೊಂಡು ಸಾರ್ವಜನಿಕರಿಗೆ ತೊಂದರೆಯಾಗದಂತೆ ವಿಶೇಷ ಗಮನ ಹರಿಸುವುದು ಹಾಗೂ ಮಾರುಕಟ್ಟೆಗಳು ಮತ್ತು ಇತರೆ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಾಣವಾಗುವ ಬ್ಲಾಕ್ ಸ್ಪಾಟ್ ಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲು ಕ್ರಮವಹಿಸುವುದು.
* ಹಬ್ಬದ ಪ್ರಯುಕ್ತ ಮಾರುಕಟ್ಟೆಗಳು ಹಾಗೂ ಇತರೆ ಪ್ರದೇಶಗಳಲ್ಲಿ ಬಾಳೇಕಂದು, ಮಾವಿನ ಎಲೆ, ಹೂವು ಮತ್ತು ಇತರೆ ಹಸಿ ತ್ಯಾಜ್ಯವನ್ನು ಆದ್ಯತೆ ಮೇರೆಗೆ ವಾರ್ಡ್‌ಗಳಲ್ಲಿಯೇ ಹಸಿ / ತೋಟಗಾರಿಕೆ ತ್ಯಾಜ್ಯ ಸಂಸ್ಕರಣಾ ಸೌಲಭ್ಯಗಳನ್ನು ಕಲ್ಪಿಸಿಕೊಂಡು ವಿಲೇವಾರಿ ಮಾಡುವುದು ಅಥವಾ ವಾರ್ಡ್‌ಗಳಲ್ಲಿ ವಿಕೇಂದ್ರೀಕೃತ ಹಸಿ ತ್ಯಾಜ್ಯ ಸಂಸ್ಕರಣಾ ಘಟಕಗಳಿದ್ದಲ್ಲಿ ಅಲ್ಲಿಗೆ ವಿಲೇವಾರಿ ಮಾಡುವುದು.
ಮೇಲಿನ ನಿರ್ದೇಶನಗಳನ್ನು ಕಟ್ಟುನಿಟಾಗಿ ಪಾಲಿಸಿ ದಸರಾ ಹಾಗೂ ದೀಪಾವಳಿ ಹಬ್ಬದ ದಿನಗಳಂದು ಸಾರ್ವಜನಿಕರಿಗೆ ತೊಂದರೆ ಆಗದಂತೆ ಎಚ್ಚರ ವಹಿಸಬೇಕು ಎಂದು ತುಷಾರ್ ಗಿರಿ ನಾಥ್ ಗಿರಿ ನಾಥ್ ಅವರು ತಿಳಿಸಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications