August 15: ಸ್ವಾತಂತ್ರೋತ್ಸವ ಆಚರಣೆಗೆ ವೇಳೆ ಮೂಲಸೌಕರ್ಯಗಳಿಗೆ ಆದ್ಯತೆ ನೀಡಿ: ಬಿಬಿಎಂಪಿ
ಬೆಂಗಳೂರು, ಜುಲೈ 11: ಪ್ರತಿ ವರ್ಷದಂತೆ ಈ ವರ್ಷವು ಸಹ ಬಹುವಿಜೃಂಭಣೆಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆಯು ಆಗಸ್ಟ್ 15ರಂದು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸೇರಿದಂತೆ ರಾಜ್ಯಾದ್ಯಂತ ನಡೆಯಲಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಅಗತ್ಯ ಸಿದ್ಧತೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತೊಡಗಿದೆ.
ರಾಜ್ಯಮಟ್ಟದ ಸ್ವಾತಂತ್ರ್ಯ ದಿನಾಚರಣೆಗೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯಮಟ್ಟದ ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ಸಂಬಂಧ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಸ್ವಾತಂತ್ರೋತ್ಸವ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುವ ಸಂಬಂಧ ಆಯಾ ಇಲಾಖೆಗಳಿಗೆ ನೀಡಿರುವ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಬೇಕೆಂದು ತಿಳಿಸಿದರು.
ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಸನಗಳ ವ್ಯವಸ್ಥೆ, ಯಾವ ದ್ವಾರಗಳಲ್ಲಿ ಯಾರಿಗೆ ಪ್ರವೇಶ ನೀಡಬೇಕು, ಪಾರ್ಕಿಂಗ್ ವ್ಯವಸ್ಥೆ, ಮಾರ್ಗ ಬದಲಾವಣೆ ಸೇರಿದಂತೆ ಇನ್ನಿತರೆ ವ್ಯವಸ್ಥೆಗಳಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲದಂತೆ ನೋಡಿಕೊಳ್ಳಬೇಕೆಂದು ಸೂಚಿಸಲಾಯಿತು.
ಅಗತ್ಯ ನೀರಿನ ವ್ಯವಸ್ಥೆಗೆ ಜಲಮಂಡಳಿಗೆ ಸೂಚನೆ
ಬೆಂಗಳೂರು ಜಲಮಂಡಳಿ ವತಿಯಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಮೈದಾನದಲ್ಲಿ ಶೌಚಾಲಯಗಳ ವ್ಯವಸ್ಥೆ, ಕಾರ್ಯಕ್ರಮದ ದಿನ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸುವ ಹಾಗೂ ಭದ್ರತೆಯ ಹಿತದೃಷ್ಠಿಯಿಂದ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕೆಂದು ತಿಳಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಸರಿಯಾದ ರೀತಿಯಲ್ಲಿ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ನಾಡಗೀತೆ, ರೈತ ಗೀತೆ ಹಾಡಲು ಸೂಕ್ತ ತಂಡವನ್ನು ಆಯ್ಕೆ ಮಾಡಬೇಕು. ಪ್ರಥಮ ಚಿಕಿತ್ಸೆ ವ್ಯಸವ್ಥೆಗಾಗಿ ಆಂಬುಲೆನ್ಸ್ ಜೊತೆಗೆ ಅಗತ್ಯ ಔಷಧಿ ಹಾಗೂ ಸಿಬ್ಬಂದಿಯನ್ನು ನಿಯೋಜನೆ ಮಾಡಿಕೊಳ್ಳಬೇಕೆಂದು ಹೇಳಿದರು.
ಈ ವೇಳೆ ಸಭೆಯಲ್ಲಿ ಬಿಬಿಎಂಪಿ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ಡಾ. ಆರ್.ಎಲ್ ದೀಪಕ್, ಕರೀಗೌಡ, ಸ್ನೇಹಲ್, ವಿನೋತ್ ಪ್ರಿಯಾ, ಬೆಂಗಳೂರು ನಗರ ಜಿಲ್ಲಾಧಿಕಾರಿಯಾದ ದನಾಯಂದ್, ವಲಯ ಜಂಟಿ ಆಯುಕ್ತರು, ಬಿಬಿಎಂಪಿ, ಲೋಕೋಪಯೋಗಿ ಇಲಾಖೆ, ಪೊಲೀಸ್ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಗಳ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
ಅಂದು ಸಂಚಾರ ಮಾರ್ಗ ಬದಲು
ಸ್ವಾತಂತ್ರೋತ್ಸವಕ್ಕೆ ಇನ್ನೂ ಒಂದು ತಿಂಗಳು ಬಾಕಿ ಇದೆ. ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮುಂದೆ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ಆಗಸ್ಟ್ 15ರಂದು ಮಾಣಿಕ್ ಷಾ ಪರೇಡ್ ಮೈದಾನ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ಸವಾರರಿಗೆ ಸಂಚಾರ ನಿರ್ಬಂಧ ಇರುತ್ತದೆ. ಪರ್ಯಾಯ ಮಾರ್ಗವನ್ನು ಬೆಂಗಳೂರು ಸಂಚಾರಿ ಪೊಲೀಸರು ಶೀಘ್ರವೇ ಪ್ರಕಟಿಸಲಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications