ಬೊಮ್ಮನಹಳ್ಳಿ ಕ್ಷೇತ್ರದ ಮತಗಟ್ಟೆಗಳಿಗೆ ಮೂಲಸೌಕರ್ಯ ಒದಗಿಸಿ: ಬಿಬಿಎಂಪಿ
ಬೆಂಗಳೂರು, ಜನವರಿ 18: ಚುನಾವಣೆ ಸಮೀಪಿಸುತ್ತಿದೆ, ಮತಗಟ್ಟೆಗಳಿಗೆ ಅಗತ್ಯವಾಗಿ ಬೇಕಿರುವ ಕನಿಷ್ಟ ಮೂಲಭೂತ ಸೌಲಭ್ಯಗಳನ್ನು ಒಸಗಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕರ್ನಾಟಕದಲ್ಲಿ ಸಾರ್ವತ್ರಿಕ ವಿಧಾನಸಭಾ ಚುನಾವಣೆ 2023 ಹತ್ತಿರವಾಗುತ್ತಿದೆ. ಈ ಸಂಬಂಧ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಬರುವ ಮತಗಟ್ಟೆಗಳನ್ನು ಸಹಾಯಕ ಮತದಾರರ ನೋಂದಣಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಈ ಪೈಕಿ ಮಂಗಳವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತರು ಮತ್ತು ಅಧಿಕಾರಿಗಳು ನಗರದ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ತುಷಾರ್ ಗಿರಿನಾಥ್ ಅವರು, ಬೊಮ್ಮನಹಳ್ಳಿ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್, ಪೀಟೊಪಕರಣಗಳು, ಭದ್ರತಾ ಕೊಠಡಿ, ಸಹಾಯ ಕೇಂದ್ರ, ಶೌಚಾಯಲ, ರ‍್ಯಾಂಪ್ ಸೌಲಭ್ಯ ಕಲ್ಪಿಸಬೇಕು. ಇದೆಲ್ಲ ಸಮರ್ಪಕವಾಗಿ ಮಾಡಿ ನಂತರ ವರದಿ ನೀಡುವಂತೆ ಅವರು ತಿಳಿಸಿದರು.

ಲಾರೆನ್ಸ್ ಸ್ಕೂಲ್, ಅಗರ ಕರ್ನಾಟಕ ಪಬ್ಲಿಕ್ ಶಾಲೆ, ಸೋಮಸುಂದರ ಪಾಳ್ಯ ಸರ್ಕಾರಿ ಶಾಲೆ, ಹೊಂಗಸಂದ್ರ ವಿದ್ಯಾಜ್ಯೋತಿ ಶಾಲೆಯಲ್ಲಿ ಮತಗಟ್ಟೆಗಳ ನಿರ್ಮಾಣ ಸ್ಥಳ ಳಗಳಿಗೆ ಭೇಟಿ ನೀಡಿ ತುಷಾರ್ ಗಿರಿನಾಥ್ ಪರಿಶೀಲಿಸಿದರು. ಎಲ್ಲಾ ಮತಗಟ್ಟೆಗಳಲ್ಲೂ ಕನಿಷ್ಟ ಮೂಲಭೂತ ಸೌಕರ್ಯಗಳು ಕಡ್ಡಾಯವಾಗಿ ಇರಬೇಕು. ಇಲ್ಲವಾದಲ್ಲಿ ಬೇರೆಡೆ ಮತಗಟ್ಟೆಗಳನ್ನು ಗುರುತಿಸಲು ಅಧಿಕಾರಿಗಳಿಗೆ ಅವರು ತಾಕೀತು ಮಾಡಿದರು.
ಬೀದಿ ವ್ಯಾಪಾರಿಗಳಿಗೆ ವಾರ್ಡ್ ರಸ್ತೆಗಳಲ್ಲಿ ವ್ಯಾಪಾರ ಅವಕಾಶ
ಎಚ್‌ಎಸ್ಆರ್ ಬಡಾವಣೆಯ ಬಿಡಿಎ ಕಾಫ್ಲೆಕ್ಸ್ ಬಳಿ ಪಾದಚಾರಿ ಮಾರ್ಗವನ್ನು ಬೀದಿ ಬದಿ ವ್ಯಾಪಾರಿಗಳು ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುತ್ತಿದ್ದಾರೆ. ಇದನ್ನು ಗಮನಿಸಿದ ಆಯುಕ್ತರು ಪ್ರಮುಖ ರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶ ನೀಡದೇ ಆ ಎಲ್ಲ ಬೀದಿ ಬದಿ ವ್ಯಾಪಾರಿಗಳಿಗೆ ವಾರ್ಡ್ ರಸ್ತೆಗಳಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದರು.
ಬಿಡಿಎ ಕಾಫ್ಲೆಕ್ಸ್ ಬಳಿ 6ನೇ ಹಂತದಲ್ಲಿ ಹೊಸದಾಗಿ ಹಾಕಿದ್ದ ಡಾಂಬರೀಕರಣ ಪರಿಶೀಲಿಸಿದ ಅವರು, ನ್ಯೂನ್ಯತೆಗಳನ್ನು ಸರಿಪಡಿಸುವಂತೆ ತಿಳಿಸಿದರು. ಡಾಂಬರಿನ ರಸ್ತೆಗಳಲ್ಲಿ ಮಳೆ ನೀರು ಸರಾಗವಾಗಿ ಹರಿಯುವಂತೆ ಶೋಲ್ಡರ್ ಡ್ರೈನ್ ನಿರ್ಮಿಸಬೇಕು. ಸರ್ವೀಸ್ ರಸ್ತೆಗಳ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ನಾಮಫಲಕ ಹಾಗೂ ರ‍್ಯಾಂಪ್ ತೆರವಿಗೆ ಕ್ರಮ ವಹಿಸಬೇಕು.

ಕೆ-200 ರಾಜಕಾಲುವೆಗೆ ಆರ್.ಸಿ.ಸಿ ವಾಲ್ ಕಾಮಗಾರಿಯನ್ನು ಮುಂದಿನ ವಾರವೇ ಪ್ರಾರಂಭಿಸಿ, ಎಚ್‌ಎಸ್‌ಆರ್ ಬಡಾವಣೆ ಮುಖ್ಯ ರಸ್ತೆಯಲ್ಲಿನ ಅಟಲ್ ಬಿಹಾರಿ ವಾಜಪೇಯಿ ಆಟದ ಮೈದಾನದಲ್ಲಿನ ಬಾಕಿ ಕಾಮಗಾರಿ ಪೂರ್ಣಗೊಳಿಸಿ ಹಾಗೂ ಗುಣಮಟ್ಟ ಕಾಯ್ದುಕೊಳ್ಳಿ ಎಂದು ಹೇಳಿದರು.
ಬೇಗೂರು ಕೆರೆ ಕಾಮಗಾರಿ ಪರಿಶೀಲನೆ:
ಬೇಗೂರು ಕೆರೆಯಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಯನ್ನು ಪರಿಶೀಲಿಸಿ ಮಳೆಗಾಲ ಪ್ರಾರಂಭವಾಗುವುದಕ್ಕೂ ಮುನ್ನ ಕಾಮಗಾರಿ ಪೂರ್ಣಗೊಳಿಸಬೇಕು. ಬೇಗೂರು ಕೆರೆಯ ಬಳಿ ರಸ್ತೆ ನಿರ್ಮಾಣದ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಇಂಟರ್ ಲಾಕಿಂಗ್ ಫೇವರ್ಸ್ ಗಳನ್ನು ಸರಿಪಡಿಸಲು ಸೂಚಿಸಿದರು.
ಪರಿಶೀಲನೆಯ ವೇಳೆ ವಲಯ ಆಯುಕ್ತ ಡಾ. ಹರೀಶ್ ಕುಮಾರ್, ಚುನಾವಣಾ ವಿಭಾಗದ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ಘೋಷ್, ವಲಯ ಜಂಟಿ ಆಯುಕ್ತ ಕೃಷ್ಣಮೂರ್ತಿ, ಅಪರ ಜಿಲ್ಲಾ ಚುನಾವಣಾ ಅಧಿಕಾರಿಯಾದ ಡಾ. ಜಗದೀಶ್ ನಾಯ್ಕ್(ದಕ್ಷಿಣ), ವಲಯ ಮುಖ್ಯ ಅಭಿಯಂತರರಾದ ಶಶಿಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications