BBMP: ಬೆಂಗಳೂರಿನ ವಿವಿಧೆಡೆ ತಲೆ ಎತ್ತಲಿವೆ 300 ಹೊಸ ಶೌಚಾಲಯಗಳು, ಯೋಜನೆ ಮಾಹಿತಿ

ಬೆಂಗಳೂರು, ನವೆಂಬರ್ 29: ಹೆಚ್ಚುತ್ತಿರುವ ಬೆಂಗಳೂರಿನ ಅನುಗುಣವಾಗಿ ಮೂಲಸೌಕರ್ಯ ಒದಗಿಸುವುದು ಸ್ಥಳೀಯ ನಾಗರಿಕ ಸಂಸ್ಥೆಗಳ ಕರ್ತವ್ಯವಾಗಿದೆ. ಅದರಂತೆ ಬಿಬಿಎಂಪಿಯು ತನ್ನ ವ್ಯಾಪ್ತಿಯಲ್ಲಿ ನೂರಾರು ಶೌಚಾಲಯಗಳನ್ನು ನಿರ್ಮಿಸಲು ಮುಂದಾಗಿದೆ. ಈ ಸಂಬಂಧ ಆಯಾ ವಲಯ ವ್ಯಾಪ್ತಿಯಲ್ಲಿ ಸ್ಥಳಗಳನ್ನು ಗುರುತಿಸಿ ಕೂಡಲೇ ಪಟ್ಟಿ ನೀಡಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಸೂಚಿಸಿದ್ದಾರೆ.

ಪಾಲಿಕೆ ವ್ಯಾಪ್ತಿಯ ಸಾರ್ವಜನಿಕ ಸ್ಥಳದಲ್ಲಿ ಶೌಚಾಲಯಗಳನ್ನು ನಿರ್ಮಿಸುವ ಸಂಬಂಧ ಬುಧವಾರ ಬಿ.ಎಸ್.ಡಬ್ಲ್ಯೂ.ಎಂ.ಎಲ್ ಕಛೇರಿಯ ಸಭಂಗಣದಲ್ಲಿ ಸಭೆ ನಡೆಯಿತು. ಇದರಲ್ಲಿ ಮಾತನಾಡಿದ ತುಷಾರ್ ಗಿರಿನಾಥ್ ಅವರು, ನಗರದ ಆಯಾ ವಲಯ ವ್ಯಾಪ್ತಿಯಲ್ಲಿ ಜನದಟ್ಟಣೆ ಪ್ರದೇಶ, ಮಾರುಕಟ್ಟೆಗಳು, ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸುವ ಸಂಬಂಧ ತ್ವರಿತವಾಗಿ ಸ್ಥಳಗಳನ್ನು ಗುರುತಿಸಿ ಪಟ್ಟಿ ನೀಡುವಂತೆ ತಿಳಿಸಿದರು.

BBMP Instruct will Identify Place For more Than 300 Toilets Build in Public Place

ನಗರದಲ್ಲಿ ಈಗಾಗಲೇ 255 ಸ್ಥಳಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಲು ಸ್ಥಳಗಳನ್ನು ಗುರುತಿಸಲಾಗಿದೆ. ಶೌಚಾಲಯಗಳನ್ನು ನಿರ್ಮಿಸುವ ಸ್ಥಳ ವಿಶಾಲವಾಗಿರಬೇಕಿದೆ. ಈ ಸಂಬಂಧ ವಿಶಾಲವಾದ ಸ್ಥಳಗಳನ್ನು ಗುರುತಿಸಬೇಕಿದೆ. ಜೊತೆಗೆ ನಗರದ ಕೇಂದ್ರ ಪ್ರದೇಶದಲ್ಲಿ ಹೆಚ್ಚಾಗಿ ಶೌಚಾಲಯಗಳನ್ನು ನಿರ್ಮಿಸಬೇಕು. ಈ ಪೈಕಿ ಸೂಕ್ತ ಸ್ಥಳಗಳನ್ನು ಗುರುತಿಸಬೇಕು. ಅಲ್ಲದೆ ಹೊಸದಾಗಿ 46 ಶೌಚಾಲಯಗಳನ್ನು ನಿರ್ಮಾಣ ಮಾಡಲು ಕೂಡಾ ಸೂಕ್ತ ಸ್ಥಳಗಳನ್ನು ಗುರುತಿಸಬೇಕು ಎಂದರು.

300ಕ್ಕೂ ಅಧಿಕ ಹೊಸ ಶೌಚಾಲಯ ನಿರ್ಮಾಣ

ನಗರದಲ್ಲಿ 255+ 46 ಸೇರಿ ಒಟ್ಟು 300ಕ್ಕೂ ಅಧಿಕ ಹೊಸ ಶೌಚಾಲಯಗಳು ಆದಷ್ಟು ಶೀಘ್ರವೇ ತಲೆ ಎತ್ತಲಿವೆ. ನಗರದಲ್ಲಿ ಹಾಲಿ 393 ಸಾರ್ವಜನಿಕ ಶೌಚಾಲಯಗಳಿವೆ. ಈ ಪೈಕಿ 360 ಸಾರ್ವಜನಿಕ ಶೌಚಾಲಯ, 6 ಕಮ್ಯುನಿಟಿ ಶೌಚಾಲಯ, 17 ಮಾಡ್ಯುಲಾರ್ ಶೌಚಾಲಯ ಹಾಗೂ 10 ಪ್ರೀಕಾಸ್ಟ್ ಶೌಚಾಲಯಗಳಿವೆ. ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತ್ವರಿತಗತಿಯಲ್ಲಿ ಹೆಚ್ಚು ಶೌಚಾಲಯಗಳನ್ನು ನಿರ್ಮಿಸುವ ಅಗತ್ಯತೆ ಕುರಿತು ಅವರು ವಿವರಿಸಿದರು.

BBMP Instruct will Identify Place For more Than 300 Toilets Build in Public Place

ಮಹಿಳಾ ಶೌಚಾಲಯ ನಿರ್ಮಾಣಕ್ಕೆ ಆದ್ಯತೆ

ನಗರದಲ್ಲಿ ಮಹಿಳೆಯರು ಸಂಚರಿಸುವ/ಓಡಾಡುವ ಸ್ಥಳಗಳನ್ನು ಗುರುತಿಸಿ ಮಹಿಳಾ ಶೌಚಾಲಯ (She Toilets)ಗಳನ್ನು ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಪೈಕಿ ಎಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಿದೆ ಎಂಬುದನ್ನು ಗುರುತಿಸಿ ಮಹಿಳಾ ಶೌಚಾಲಯ ನಿರ್ಮಾಣ ಮಾಡಲು ಕ್ರಮವಹಿಸಬೇಕೆಂದು ಅಧಿಕಾರಿಗಳಿಗೆ ಮುಖ್ಯ ಆಯುಕ್ತರು ತಿಳಿಸಿದರು.

ಇ-ಶೌಚಾಲಯ ಸರಿಯಾಗಿ ನಿರ್ವಹಣೆ ಮಾಡಿ

ನಗರದಲ್ಲಿ 229 ಇ-ಶೌಚಾಲಯಗಳಿದ್ದು, ಸದ್ಯ ಸರಿಯಾದ ನಿರ್ವಹಣೆ ಇಲ್ಲದ ಕಾರಣ ಎಲ್ಲವನ್ನೂ ಸ್ಥಗಿತಗೊಳಿಸಲಾಗಿದೆ. ಇ-ಶೌಚಾಲಯಗಳನ್ನು ಸರಿಯಾಗಿ ನಿರ್ವಹಣೆ ಮಾಡುವ ಸಲುವಾಗಿ ಕೂಡಲೆ ಟೆಂಡರ್ ಕರೆದು ಸರಿಯಾಗಿ ನಿರ್ವಹಣೆ ಮಾಡಲು ಸೂಚಿಸಿದರು. ಜೊತೆಗೆ ಬಸ್ ತಂಗುದಾಣಗಳ ಬಳಿ ಇ-ಶೌಚಾಲಯಗಳನ್ನು ಅಳವಡಿಸು ಸಾಧ್ಯವೇ ಎಂಬುದನ್ನು ಪರಿಶೀಲಿಸಿ ಸಾಧ್ಯವಾದಲ್ಲಿ ಕೆಲ ಪ್ರಮುಖ ಬಸ್ ತಂಗುದಾನಗಳ ಬಳಿ ಇ-ಶೌಚಾಲಯಗಳನ್ನು ಅಳವಡಿಸಬೇಕಿದೆ.

ಇಂದಿರಾ ಕ್ಯಾಂಟೀನ್ ಶೌಚಾಲಯ ಸಾರ್ವಜನಿಕರಿಗೆ ಬಳಕೆ

ನಗರದಲ್ಲಿರುವ ಇಂದಿರಾ ಕ್ಯಾಂಟೀನ್ ಗಳಲ್ಲಿ ನಿರ್ಮಿಸಿರುವ ಶೌಚಾಲಯಗಳನ್ನು ಸಾರ್ವಜನಿಕರು ಉಪಯೋಗಿಸಲು ಅನುವು ಮಾಡಬೇಕು. ಈ ಸಂಬಂಧ ಕೂಡಲೇ ಆದೇಶ ಹೊರಡಿಸಲು ಅಧಿಕಾರಿಗೆ ಸೂಚನೆ ನೀಡಲಾಯಿತು.

ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕಾಗಿ ಸಮಿತಿ ರಚನೆ

ಹೈಕೋರ್ಟ್ ನೀಡಿರುವ ನಿರ್ದೇಶನದನ್ವಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕ ರಸ್ತೆಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಲು ಸಂಕ್ಷಿಪ್ತ ಯೋಜನೆಗಳನ್ನು ರೂಪಿಸುವ ಕುರಿತು ಸ್ಥಳೀಯ ಸಂಸ್ಥೆಗಳ ಹಂತದಲ್ಲಿ ಸಮಿತಿಗಳನ್ನು ರಚಿಸಲು ಆದೇಶಿಲಾಗಿದೆ.

ಅದರಂತೆ ಘನ ಕರ್ನಾಟಕ ಸರ್ಕಾರದ ಆದೇಶದನ್ವಯ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಲು ಹಾಗೂ ನಿರ್ವಹಣೆ ಮಾಡುವ ಸಂಕ್ಷಿಪ್ತ ಯೋಜನೆಗಳನ್ನು (Comprehensive Schemes) ರೂಪಿಸಲು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಇದರಲ್ಲಿ ಒಟ್ಟು 9 ಮಂದಿ ಸದಸ್ಯರು, ಒಬ್ಬರು ಕಾರ್ಯದರ್ಶಿಗಳು ಇದ್ದಾರೆ. ಇವರೆಲ್ಲ ಸೇರಿ ನಗರದಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಯೋಜನೆ ರೂಪಿಸಿ ಜಾರಿಗೆ ತರಲಿದ್ದಾರೆ ಎಂದು ಬಿಬಿಎಂಪಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+