BBMP:ಜಯನಗರ ವಾಣಿಜ್ಯ ಸಂಕೀರ್ಣ, ಪಾದಚಾರಿ ಒತ್ತುವರಿ ತೆರವಿಗೆ ತಾಕೀತು
ಬೆಂಗಳೂರು, ನವೆಂಬರ್ 01: ಬೆಂಗಳೂರು ಜಯನಗರ ವಾಣಿಜ್ಯ ಸಂಕೀರ್ಣ ಹಾಗೂ ಸದರಿ ಸಂಕೀರ್ಣಕ್ಕೆ ಹೊಂದಿಕೊಂಡಂತಿರುವ ಸುತ್ತ-ಮುತ್ತಲಿನ ಪ್ರದೇಶವನ್ನು ಬುಧವಾರ ಪರಿಶೀಲಿಸಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಇಲ್ಲಿ ಒತ್ತುವರಿ ತೆರವುಗೊಳಿಸುವಂತೆ ಸೂಚನೆ ನೀಡಿದರು.
ಜಯನಗರ ವಾಣಿಜ್ಯ ಸಂಕೀರ್ಣದ ಒಳ ಭಾಗದಲ್ಲಿ ವ್ಯಾಪಾರ ನಡೆಸುತ್ತಿರುವ ಮಳಿಗೆದಾರರು ಅನಧಿಕೃತವಾಗಿ ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಈ ಕೂಡಲೇ ತೆರವಿಗೆ ಕ್ರಮ ಕೈಗೊಳ್ಳುವಂತೆ ಹೇಳಿದರು.

ಜಯನಗರ ವಾಣಿಜ್ಯ ಸಂಕೀರ್ಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ಬದಿಯ ವ್ಯಾಪಾರಿಗಳು ರಸ್ತೆ ಹಾಗೂ ಪಾದಚಾರಿ ಮಾರ್ಗವನ್ನು ಒತ್ತುವರಿಪಡಿಸಿಕೊಂಡಿದ್ದಾರೆ. ಒತ್ತುವರಿಯನ್ನು ತೆರವುಗೊಳಿಸಲು ಹಾಗೂ ಅನಧಿಕೃತವಾಗಿ ವ್ಯಾಪಾರ ವಹಿವಾಟು ನಡೆಸುತ್ತಿರುವವರನ್ನು ಗುರುತಿಸಬೇಕು. ಇದರೊಂದಿಗೆ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ಮಳಿಗೆಗಳನ್ನು ತೆರವುಗೊಳಿಸಲು ಕ್ರಮ ವಹಿಸಬೇಕು ಎಂದರು.
ಒತ್ತುವರಿ ಆಗದಂತೆ ಕ್ರಮವಹಿಸಿ
ಮುಂದಿನ ದಿನಗಳಲ್ಲಿ ಜಯನಗರ ವಾಣಿಜ್ಯ ಸಂಕೀರ್ಣದ ಒಳಭಾಗದಲ್ಲಿ ಹಾಗೂ ಹೊರಗಿನ ಪ್ರದೇಶಗಳಲ್ಲಿ ರಸ್ತೆ ಹಾಗೂ ಪಾದಚಾರಿ ಮಾರ್ಗಗಳು ವ್ಯಾಪಾರಸ್ಥರಿಂದಾಗಲಿ ಹಾಗೂ ಬೀದಿ ಬದಿಯ ವ್ಯಾಪಾರಿಗಳಿಂದಾಗಲಿ ಒತ್ತುವರಿಯಾಗದಂತೆ ಕ್ರಮವಹಿಸಲು ಗಸ್ತಿನಲ್ಲಿರುವ ಮಾರ್ಷಲ್‌ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಯನಗರ ವಾಣಿಜ್ಯ ಸಂಕೀರ್ಣದ ಮೀನು ಮಾರುಕಟ್ಟೆಯ ಸುತ್ತಲಿನ ಪ್ರದೇಶಗಳನ್ನು ಪರಿಶೀಲಿಸಲಾಯಿತು. ವಿದ್ಯುತ್ ದೀಪ ವ್ಯವಸ್ಥೆ ಇಲ್ಲದೇ ಇರುವುದನ್ನು ಗಮನಿಸಿ ಕೂಡಲೆ ವಿದ್ಯುತ್ ದೀಪಗಳನ್ನು ಅಳವಡಿಸಿ, ಅನಧಿಕೃತವಾಗಿ ಒಳಬಾರದಂತೆ ಪ್ರವೇಶ ನಿರ್ಬಂಧಗೊಳಿಸಲು ಕ್ರಮ ವಹಿಸಬೇಕು.
ಕಾಮಗಾರಿಯ ವರದಿ ಸಲ್ಲಿಸಿ
ವಾಣಿಜ್ಯ ಸಂಕೀರ್ಣದ ಬಳಿ ನಿರ್ಮಿಸಬೇಕಾಗಿರುವ ಬ್ಲಾಕ್-2, 3 ಮತ್ತು 4 ಕಟ್ಟಡದ ಸ್ಥಳವನ್ನು ಪರಿಶೀಲಿಸಿ, ಕಾಮಗಾರಿಯು ಪ್ರಾರಂಭವಾಗದೇ ಇರುವ ಹಿನ್ನಲೆಯಲ್ಲಿ ಬಿಡಿಎ ಅವರೊಂದಿಗೆ ಸಮಾಲೋಚನೆ ಕೈಗೊಂಡು ವರದಿ ಸಲ್ಲಿಸಬೇಕು ಎಂದು ತಿಳಿಸಿದರು.
ಪರಿಶೀಲನೆ ವೇಳೆ ಶಾಸಕರಾದ ಸಿ.ಕೆ.ರಾಮಮೂರ್ತಿ, ದಕ್ಷಿಣ ವಲಯದ ವಲಯ ಆಯುಕ್ತರಾ ವಿನೋತ್ ಪ್ರಿಯಾ, ಜಂಟಿ ಆಯುಕ್ತ ಡಾ. ಕೆ. ಜಗದೀಶ್ ನಾಯ್ಕ್, ಮುಖ್ಯ ಅಭಿಯಂತರ ರಾಜೇಶ್ ಸೇರಿದಂತೆ ಇತರ ಅಧಿಕಾರಿಗಳು ಸ್ಥಳದಲ್ಲಿದ್ದರು.
-
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್












Click it and Unblock the Notifications