2025ರ ಗೌರಿ ಗಣೇಶ ಹಬ್ಬಕ್ಕೆ ಬಿಬಿಎಂಪಿ ಮಾರ್ಗಸೂಚಿ: 75 ಏಕಗವಾಕ್ಷಿ ಕೇಂದ್ರ, ಸಕಲ ವ್ಯವಸ್ಥೆ
ಬೆಂಗಳೂರಿನಲ್ಲಿ ಪ್ರಸಕ್ತ 2025ನೇ ಸಾಲಿನ ಗೌರಿ-ಗಣೇಶ ಹಬ್ಬಕ್ಕೆ ಸಡಗರ ಮನೆ ಮಾಡಿದೆ. ಸ್ವಾಗತಿಸಲು ನಾಗರಿಕರು ಸಜ್ಜಾಗಿದ್ದಾರೆ. ಗಣೇಶ ಮೂರ್ತಿಗಳ ತಯಾರಿಕೆ ಈಗಾಗಲೇ ಪ್ರಾರಂಭವಾಗಿದೆ. ಗಣೇಶ ಮೂರ್ತಿಯ ತಯಾರಿಕೆಗಾಗಿ ಬಳಸುವ ರಾಸಾಯನಿಕ ಬಣ್ಣಗಳು, ಥರ್ಮಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್‌ಗಳ ಬಳಕೆಯನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (BBMP) ಹಬ್ಬಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಿದೆ. ಅಗತ್ಯ ಎಚ್ಚರಿಕೆ ನೀಡಿದೆ.
ಗಣೇಶ ಚತುರ್ಥಿ ಕುರಿತು ಬುಧವಾರ ಮಹತ್ವದ ಸಭೆ ನಡೆಯಿತು. ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ಕ್ರಮವಹಿಸುವ ಕುರಿತು ಮಾರ್ಗಸೂಚಿ ಹೊರಡಿಸಿರುವ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು, ನಗರದಲ್ಲಿ
ವಲಯವಾರು 75 ಏಕಗವಾಕ್ಷಿ ಕೇಂದ್ರಗಳನ್ನು ಸ್ಥಾಪಿಸಿ, ಇಲಾಖಾವಾರು ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ನಿಷೇಧಿತ ವಸ್ತ ವಸ್ತುಗಳನ್ನು ಬಳಸಿ ತಯಾರಿಕೆಯಾಗುವ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಂಡು ನಿಯಾಮಾನುಸಾರ ವಿಲೇವಾರಿ ಮಾಡಬೇಕು. ಹಬ್ಬಗಳ ಆಚರಣೆಯಿಂದ ಬರುವ ಹಸಿ ತ್ಯಾಜ್ಯವನ್ನು ಪಾಲಿಕೆಯ ಸಂಸ್ಕರಣಾ ಘಟಕಗಳಿಗೆ ಸಂಸ್ಕರಣೆಗಾಗಿ ಕಳುಹಿಸುವುದು ಸೇರಿ ಅಗತ್ಯ ಸೂಚನೆ ನೀಡಲಾಗಿದೆ.
ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕು. ಪ್ಲಾಸ್ಟರ್ ಆಫ್ ಪ್ಯಾರೀಸ್ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿಗಳನ್ನು ತಯಾರಿಸಿದ್ದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.
2025ರ ಗಣೇಶ ಹಬ್ಬಕ್ಕೆ ಬಿಬಿಎಂಪಿ ಮಾರ್ಗಸೂಚಿಗಳು
1. ಗಣೇಶ ಹಬ್ಬದ ನಿಮಿತ್ತ ಸಾರ್ವಜನಿಕವಾಗಿ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡುವ ಸಲುವಾಗಿ ಅನುಮತಿ ಪಡೆಯಬೇಕು. ಅದಕ್ಕಾಗಿ ಉಪ ವಿಭಾಗದ ಮಟ್ಟದಲ್ಲಿ ನೋಡಲ್ ಅಧಿಕಾರಿಗಳಾಗಿ ನೇಮಿಸಲಾದ ಸಹಾಯಕ ಕಾರ್ಯಪಾಲಕ ಅಭಿಯಂತರರುಗಳ ಕಾರ್ಯಾಲಯದಲ್ಲಿ ಅರ್ಜಿ ಸಲ್ಲಿಸಬೇಕು. ನೋಡಲ್ ಅಧಿಕಾರಿಗಳು ಪೊಲೀಸ್, ಬೆಸ್ಕಾಂ, ಅಗ್ನಿಶಾಮಕ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಭಿಪ್ರಾಯ ಪಡೆದು ಏಕಗವಾಕ್ಷಿಯಲ್ಲಿ ತ್ವರಿತವಾಗಿ ಅನುಮತಿ ನೀಡಬೇಕು.
2. ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಸಾಯನಿಕ ಬಣ್ಣಗಳು, ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್..ವಸ್ತುಗಳನ್ನು ಬಳಸಿ ಗಣೇಶ ಮೂರ್ತಿಯ ತಯಾರಿಕೆಯನ್ನು ಸಂಪೂರ್ಣವಾಗಿ ನಿಷೇಧ. ಸದರಿ ವಸ್ತುಗಳನ್ನು ಬಳಸಿ ತಯಾರಿಸುವ, ಮಾರಾಟ ಮಾಡುವ ಪ್ರದೇಶಗಳನ್ನು ಸಂಬಂಧಪಟ್ಟ ಬಿಬಿಎಂಪಿಯ ಉಪ ವಿಭಾಗದ ನೋಡೆಲ್ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ಅಧಿಕಾರಿಗಳು, ಬೆಸ್ಕಾಂ ಅಧಿಕಾರಿಗಳು ಈ ಬಗ್ಗೆ ಖುದ್ದಾಗಿ ಪರಿಶೀಲಿಸಿ ನೋಟೀಸ್ ನೀಡಬೇಕು.
3. ಗಣೇಶಮೂರ್ತಿ ತಯಾರಿಕೆದಾರರಿಗೆ ಪರಿಸರ ಸ್ನೇಹಿ/ಮಣ್ಣಿನಿಂದ ಮಾಡಿದ ಮೂರ್ತಿಗಳನ್ನು ಮಾತ್ರ ತಯಾರಿಸಲು ಜಾಹೀರಾತು ನೀಡುವುದು.

4. ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ತಮ್ಮ ಮನೆಗಳಲ್ಲಿ, ಬಕೇಟ್‌ಗಳಲ್ಲಿ ವಿಸರ್ಜನೆಗೊಳಿಸಿ, ಬರುವ ಮಣ್ಣನ್ನು ಕೈತೋಟಗಳಿಗೆ, ಹೂವಿನ ಕುಂಡಗಳಿಗೆ ಬಳಸಲು ಅರಿವು ಮೂಡಿಸುವುದು.
5. ದೊಡ್ಡ ಗಾತ್ರದ ಮೂರ್ತಿಗಳ ವಿಸರ್ಜನೆಗೆ ಬಿಬಿಎಂಪಿ ವ್ಯಾಪ್ತಿಯ ವಾರ್ಡ್‌ಗಳಲ್ಲಿ ವಿಸರ್ಜನೆ/ನಿಮಜ್ಜನ ಸ್ಥಳಗಳನ್ನು ಗುರುತಿಸಿ, ಸದರಿ ಸ್ಥಳಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಪ್ರಚುರಪಡಿಸುವುದು. ಅವಶ್ಯವಿದ್ದಲ್ಲಿ ವಾರ್ಡ್ ವ್ಯಾಪ್ತಿಯಲ್ಲಿ ಸಂಚಾರಿ ವಾಹನ ಮೂಲಕ ವಿಸರ್ಜನೆ ಅಗತ್ಯ ವ್ಯವಸ್ಥೆ ಮಾಡಬೇಕು.
7. ಪಾಲಿಕೆಯ ವ್ಯಾಪ್ತಿಯ ಕೆರೆ/ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆಯಿಂದ ಉಂಟಾಗುವ ಮಾಲಿನ್ಯ ತಡೆಗಟ್ಟಲು ಸದರಿ ಸ್ಥಳಗಳ ಸಮೀಪದಲ್ಲಿ ತಾತ್ಕಾಲಿಕ ವಿಸರ್ಜನೆ ಸ್ಥಳಗಳನ್ನು ನಿರ್ಮಿಸುವುದು. ಸದರಿ ವಿಸರ್ಜನೆಯಿಂದ ಬರುವ ಮಣ್ಣು, ಪೂಜಾ ಹೂಗಳು ಹಾಗೂ ಪ್ಲಾಸ್ಟಿಕ್ ಇತ್ಯಾದಿ ವಸ್ತುಗಳನ್ನು ವಿಂಗಡಿಸಿ ಹಸಿತ್ಯಾಜ್ಯವನ್ನು ಹಸಿತ್ಯಾಜ್ಯ ಸಂಸ್ಕರಣಾ ಘಟಕಗಳಿಗೆ ಹಾಗೂ ಒಣತ್ಯಾಜ್ಯವನ್ನು ಒಣತ್ಯಾಜ್ಯ ಸಂಗ್ರಹಣಾ ಕೇಂದ್ರಗಳಿಗೆ ರವಾನಿಸಲಾಗುವುದು.
ವಿಸರ್ಜನಾ ಸ್ಥಳಗಳಲ್ಲಿ ಸಾರ್ವಜನಿಕರ ಸುರಕ್ಷತೆ ಆದ್ಯತೆ ನೀಡಲಾಗುವುದು. ಕಿಯಾಸ್, ಆಂಬ್ಯುಲೆನ್ಸ್ ವ್ಯವಸ್ಥೆ, ವೈದ್ಯರು ಮತ್ತು ಶುಶೂಷಕಿಯರನ್ನು ಪ್ರಾಥಮಿಕ ಚಿಕಿತ್ಸೆ ನೀಡಲು ನೇಮಿಸಿ, ಎಲ್ಲಾ ಪಿ.ಹೆಚ್.ಸಿ ಗಳ ಬಳಿಯಲ್ಲಿ ಹೆಚ್ಚುವರಿ ಆಂಬ್ಯುಲೆನ್ಸ್ ಹಾಗೂ ವೈದ್ಯರು ಸಿದ್ದವಿರುವಂತೆ ನೋಡಿಕೊಳ್ಳಲಾಗುತ್ತದೆ.
8. ಪರಿಸರಸ್ನೇಹಿ ಗಣೇಶ ಆಚರಣೆಯ ನಿಮಿತ್ತ ವಲಯ ಆಯುಕ್ತರು ವಲಯಕ್ಕೆ ಒಬ್ಬರನ್ನು ಮೇಲುಸ್ತುವಾರಿ ಅಧಿಕಾರಿಯನ್ನಾಗಿ ನೇಮಿಸಿ, ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ವಾರ್ಡಿಗೆ ಒಬ್ಬರಂತೆ ನೋಡಲ್ ಅಧಿಕಾರಿಯನ್ನು ನೇಮಿಸಲು ಅಗತ್ಯ ಕ್ರಮ ವಹಿಸಬೇಕು.
9. ಪ್ಲಾಸ್ಟಿಕ್ ನಿಷೇಧ ಆದೇಶ ಜಾರಿಯಲಿದೆ. ವಲಯ ವ್ಯಾಪ್ತಿಯಲ್ಲಿ ತಂಡಗಳನ್ನು ರಚಿಸಿ ಪ್ಲಾಸ್ಟಿಕ್ ಮಾರಾಟ ಮತ್ತು ಬಳಕೆ ಕಂಡುಬಂದಲ್ಲಿ ನಿಯಮಾನುಸಾರ ದಂಡ ವಿಧಿಸಿ ಕ್ರಮಕೈಗೊಳ್ಳುವುದು.
10. ಪರಿಸರ ಸ್ನೇಹಿ ಗಣೇಶ ಆಚರಣೆಗೆ ಪ್ರೋತ್ಸಾಹ ನೀಡುವುದು ಹಾಗೂ ಬಿ.ಬಿ.ಎಂ.ಪಿ, ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆ, ಬೆಸ್ಕಾಂ ಹಾಗೂ ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಹೊರಡಿಸುವ ಷರತ್ತುಗೊಳಪಡಿಸಿ, ಗಣೇಶ ಹಬ್ಬ ಆಚರಣೆಗೆ ಅನುಮತಿ ನೀಡುವಂತೆ ಮುಖ್ಯ ಆಯುಕ್ತರು ಸೂಚಿಸಿದ್ದಾರೆ.
75 ಏಕಗವಾಕ್ಷಿ ಕೇಂದ್ರಗಳ ಸ್ಥಾಪನೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಪ್ರತಿಷ್ಠಾಪನೆಗಾಗಿ ಅನುಮತಿ ನೀಡುವ ಸಲುವಾಗಿ 75 ಉಪ ವಿಭಾಗ ಕಛೇರಿಗಳಲ್ಲಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗಿರುತ್ತದೆ. ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಹಾಗೂ ಅಗ್ನಿಶಾಮಕ ಅಧಿಕಾರಿಗಳು ಒಂದೇ ಸ್ಥಳದಲ್ಲಿದ್ದು, ಅನುಮತಿ ಪತ್ರವನ್ನು ನೀಡಲಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications