ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋವಿಡ್ ರೋಗಿಗಳಿಗೆ ಹಾಸಿಗೆ ಮೀಸಲಿಡದ 5 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್

|
Google Oneindia Kannada News

ಬೆಂಗಳೂರು, ಏಪ್ರಿಲ್ 19: ಕೊರೊನಾ ಸೋಂಕಿತರಿಗೆ ಹಾಸಿಗೆಗಳನ್ನು ಮೀಸಲಿಡದ 5 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಈಗಾಗಲೇ ಬೆಂಗಳೂರಿನಲ್ಲಿ 12 ಸಾವಿರಕ್ಕೂ ಹೆಚ್ಚು ಪ್ರಕರಣಗಳು ನಿತ್ಯ ದಾಖಲಾಗುತ್ತಿವೆ. ಹಾಗೆಯೇ ಬಹುತೇಕ ಮಂದಿಯಲ್ಲಿ ತೀವ್ರತರದಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವ ಪರಿಣಾಮ ಆಸ್ಪತ್ರೆಗೆ ದಾಖಲಾಗುವ ಅನಿವಾರ್ಯತೆಯೂ ಎದುರಾಗಿದೆ.

ಕೊರೊನಾ, ರೆಡ್‌ಜೋನ್‌ನತ್ತ ಬೆಂಗಳೂರು: ಕಳೆದ ಬಾರಿಯ ಗೈಡ್ಲೈನ್ಸ್ ಏನಿತ್ತು?ಕೊರೊನಾ, ರೆಡ್‌ಜೋನ್‌ನತ್ತ ಬೆಂಗಳೂರು: ಕಳೆದ ಬಾರಿಯ ಗೈಡ್ಲೈನ್ಸ್ ಏನಿತ್ತು?

ಆದರೆ ಕೊರೊನಾ ಸೋಂಕಿತರಿಗೆ ಹಾಸಿಗೆಗಳನ್ನು ಮೀಸಲಿಡದ ಕಾರಣ ಐದು ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ನೀಡಲಾಗಿದೆ. ಕೊಲಂಬಿಯಾ ಏಷ್ಯಾ, ಫೋರ್ಟಿಸ್, ಆಸ್ಟರ್ ಸಿಎಂಐ, ವಿಕ್ರಂ ಹಾಗೂ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ನೋಟಿಸ್ ನೀಡಲಾಗಿದೆ.

BBMP Issues Notice To 5 Private Hospitals For Not Reserving Beds For Covid 19 Patients

ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಹಾಸಿಗೆಗಳನ್ನು ಕೊರೊನಾ ಸೋಂಕಿತರಿಗೆ ಮೀಸಲಿಡುವಂತೆ ರಾಜ್ಯ ಸರ್ಕಾರ ತಿಳಿಸಿತ್ತು, ಆದರೆ ಈ ಆಸ್ಪತ್ರೆಗಳು ಸೂಚನೆಯನ್ನು ಗಾಳಿಗೆ ತೂರಿದ್ದವು.

ವಿಕ್ರಂ ಹಾಗೂ ಫೋರ್ಟಿಸ್ ಆಸ್ಪತ್ರೆಯಲ್ಲಿ 39 ಹಾಸಿಗೆಗಳನ್ನು ಕೊರೊನಾ ಸೋಂಕಿತರಿಗೆಂದು ಮೀಸಲಿಡಲಾಗಿದೆ. ಹೆಬ್ಬಾಳದ ಕೊಲಂಬಿಯಾ ಏಷ್ಯಾದಲ್ಲಿ 30 ಹಾಸಿಗೆಗಳನ್ನು ಮೀಸಲಿಡಬೇಕಿತ್ತು ಆದರೆ ಕೇವಲ 15 ಹಾಸಿಗೆಗಳನ್ನು ಮಾತ್ರ ಮೀಸಲಿಡಲಾಗಿದೆ.

ಕೊವಿಡ್ 19 ಸೋಂಕಿತರಿಗೆ ಬೆಡ್, ಆಕ್ಸಿಜನ್ ರೆಮ್‌ಡೆಸಿವಿರ್ ಎಲ್ಲಿ ಸಿಗುತ್ತೆ?ಕೊವಿಡ್ 19 ಸೋಂಕಿತರಿಗೆ ಬೆಡ್, ಆಕ್ಸಿಜನ್ ರೆಮ್‌ಡೆಸಿವಿರ್ ಎಲ್ಲಿ ಸಿಗುತ್ತೆ?

ಈ ಆಸ್ಪತ್ರೆಗಳಿಗೆ ಭೇಟಿ ನೀಡಿರುವ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ನೋಟಿಸ್ ಜಾರಿ ಮಾಡಿದ್ದಾರೆ. ಒಂದೇ ದಿನ ರಾಜ್ಯದಲ್ಲಿ 19067 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಕಳೆದ 24 ಗಂಟೆಗಳಲ್ಲಿ 81 ಜನರು ಕೊವಿಡ್-19 ಸೋಂಕಿನಿಂದಲೇ ಪ್ರಾಣ ಬಿಟ್ಟಿದ್ದಾರೆ.

Recommended Video

ಆಕ್ಸಿಜನ್ ಸಿಲಿಂಡರ್ ಪೂರೈಕೆ ಸುಗಮಗೊಳಿಸಲು ವಾರ್ ರೂಮ್ ಸ್ಥಾಪನೆ | Oneindia Kannada

ಭಾನುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು 1161065 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಒಂದೇ ದಿನ 4603 ಸೋಂಕಿತರು ಗುಣಮುಖರಾಗಿದ್ದು, ಈವರೆಗೂ 1014152 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ 133543 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

English summary
The Bruhat Bengaluru Mahanagara Palike (BBMP) has sent show-cause notices to five private hospitals in Bengaluru — Colombia Asia, Fortis, Aster CMI, Vikram and Baptist hospitals — for failing to reserve 50% of their bed capacity for COVID-19 patients as per the directions of the Karnataka government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X