• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊರೊನಾ ನಿಯಮ ಪಾಲಿಸದ 7 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ನೋಟಿಸ್

|

ಬೆಂಗಳೂರು, ಅಕ್ಟೋಬರ್ 31: ಕೊರೊನಾ ನಿಯಮ ಪಾಲಿಸದ 7 ಖಾಸಗಿ ಆಸ್ಪತ್ರೆಗಳ ವಿರುದ್ಧ ಬಿಬಿಎಂಪಿ ನೋಟಿಸ್ ಜಾರಿ ಮಾಡಿದೆ.

ಇಷ್ಟೇ ಅಲ್ಲೆ ಆಸ್ಪತ್ರೆಗಳ ಒಪಿಡಿಯನ್ನು ಕೂಡ ಬಂದ್ ಮಾಡಿಸಿ, ಒಳರೋಗಿಗಳನ್ನು ಬೇರೆ ಕಡೆಗೆ ಸ್ಥಳಾಂತರಿಸುವ ಎಚ್ಚರಿಕೆಯನ್ನು ಕೂಡ ನೀಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ವೈದ್ಯರ ಪತ್ನಿಗೆ ಕೊರೊನಾ; 7 ತಿಂಗಳಾದರೂ ತೆರೆಯಲೇ ಇಲ್ಲ ಆಸ್ಪತ್ರೆ

ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ನೋಟಿಸ್ ಜಾರಿ ಮಾಡಿದ್ದು, ಶೇ.50 ರಷ್ಟು ಕೋವಿಡ್ ಬೆಡ್ ನೀಡದ ಹಿನ್ನೆಲೆಯಲ್ಲಿ ವಿವರಣೆ ನೀಡುವಂತೆ ಕೋರಿದ್ದಾರೆ. ಕೆಪಿಎಂಇ ಕಾಯ್ದೆ ಅನ್ವಯ ನೋಟಿಸ್ ನೀಡಲಾಗಿದೆ.

ಸರ್ಕಾರ ಸೂಚನೆಯನ್ನೂ ಪಾಲಿಸದ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆ, ಕೆಂಗೇರಿಯ ಸಂತೋಷ್ ಆಸ್ಪತ್ರೆ, ವರ್ತೂರಿನ ಸಕ್ರಾ ಆಸ್ಪತ್ರೆ ಹಾಗೂ ಓಲ್ಡ್ ಏರ್‍ಪೋರ್ಟ್ ರಸ್ತೆಯಲ್ಲಿನ ಶುಶ್ರೂಷಾ ಆಸ್ಪತ್ರೆ ಮೇಲೆ ಎಫ್‍ಐಆರ್ ದಾಖಲಾಗಿತ್ತು. ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಮೂರು ಆಸ್ಪತ್ರೆಗಳ ಮೇಲೆ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ (ಕೆಪಿಎಂಇ) ಕಾಯ್ದೆ ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯಡಿ ಕೇಸ್ ದಾಖಲಾಗಿತ್ತು.

ನೋಟಿಸ್ ಪಡೆದಿರುವ ಆಸ್ಪತ್ರೆಗಳು ಮುಂದಿನ 24 ಗಂಟೆಯಲ್ಲಿ ನೋಟಿಸ್‍ಗೆ ಉತ್ತರಿಸಬೇಕಿದೆ. ನಿಯಮಗಳನ್ನು ಉಲ್ಲಂಘಿಸಿದರೆ ಲೈಸನ್ಸ್ ಯಾಕೆ ರದ್ದು ಮಾಡಬಾರದು ಎಂದು ಬಿಬಿಎಂಪಿ ಕೇಳಿದೆ.

ಸರ್ಕಾರದ ನಿಯಮಗಳನ್ನು ಪಾಲಿಸದ ನಗರದ ರಂಗದೊರೈ ಮೆಮೊರಿಯಲ್ ಆಸ್ಪತ್ರೆ, ಸಂಜಿವಿನಿ ಆಸ್ಪತ್ರೆ, ಡಾ. ಜಿವಿಜಿ ಹೆಲ್ತ್ ಕೇರ್ ಪ್ರೈವೆಟ್ ಲಿ., ಶ್ರೀನಿವಾಸ್ ಆಸ್ಪತ್ರೆ, ಮೆಡ್ ಸ್ಟಾರ್ ಆಸ್ಪತ್ರೆ, ನಂದನ ಹೆಲ್ತ್ ಕೇರ್ ಸರ್ವಿಸ್ ಇಂಡಿಯಾ ಲಿಮಿಟೆಡ್ ಆಸ್ಪತ್ರೆಗಳಿಗೆ ನೋಟಿಸ್ ನೀಡಲಾಗಿದೆ.

ಸೆ.16 ರಂದು ಕೊರೊನಾ ಸೋಂಕಿತರ ಚಿಕಿತ್ಸೆಗೆ ಸಹಕಾರ ನೀಡದ ಮತ್ತು ಸರ್ಕಾರಕ್ಕೆ ಶೇ.50 ರಷ್ಟು ಹಾಸಿಗೆ ನೀಡದ 36 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ನೋಟಿಸ್ ಜಾರಿ ಮಾಡಿತ್ತು.

ನೋಟಿಸ್‍ನಲ್ಲಿ ಮುಂದಿನ ಮುಂದಿನ 48 ಗಂಟೆಗಳ ಒಳಗಾಗಿ ಸರ್ಕಾರದ ಆದೇಶದಂತೆ ಶೇ.50 ರಷ್ಟು ಹಾಸಿಗೆಗಳನ್ನು ಬಿಟ್ಟು ಕೊಡಬೇಕು. 24 ಗಂಟೆಗಳ ಒಳಗಾಗಿ ಪಾಲಿಕೆಯ ಶೋಕಾಸ್ ನೋಟಿಸ್‍ಗೆ ಉತ್ತರ ನೀಡುವಂತೆ ಸೂಚಿಸಲಾಗಿತ್ತು.

   ಕರ್ನಾಟಕ: ಕನ್ನಡ ರಾಜ್ಯೋತ್ಸವಕ್ಕೆ ಪ್ರತ್ಯೇಕ ಮಾರ್ಗಸೂಚಿ

   English summary
   Bruhat Bengaluru Mahanagara Palike issues notice of suspension of licence to seven hospitals found not complying with the direction of reserving 50% of beds in each category for treatment of COVID19 patients.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X