ಬಿಬಿಎಂಪಿಯಿಂದ ಬೇಗೂರು ರಸ್ತೆ ಅಗಲೀಕರಣ ಕಾಮಗಾರಿ ಶೀಘ್ರ ಆರಂಭ
ಬೆಂಗಳೂರು, ಫೆಬ್ರವರಿ 1: ಬನ್ನೇರುಘಟ್ಟ ರಸ್ತೆಯಿಂದ ಎಲೆಕ್ಟ್ರಾನಿಕ್ ಸಿಟಿಗೆ ಸಂಪರ್ಕ ಕಲ್ಪಿಸುವ ಬೇಗೂರು ರಸ್ತೆಯ ಅಗಲೀಕರಣ ಕಾಮಗಾರಿಯನ್ನು ಶೀಘ್ರ ಕೈಗೆತ್ತಿಕೊಳ್ಳಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.
ಒಟ್ಟು 3.6 ಕಿ.ಮೀ ವ್ಯಾಪ್ತಿಯಲ್ಲಿ 30-80 ಅಡಿ ರಸ್ತೆಯ ನಿರ್ಮಾಣ ಮಾಡಲಾಗುತ್ತದೆ. ಇದಕ್ಕೆ 42 ಕೋಟಿ ವೆಚ್ಚ ಮಾಡಲಾಗುತ್ತಿದೆ. ಇದಕ್ಕೆ 750 ಆಸ್ತಿಗಳ ಅಗತ್ಯವಿದೆ. ಮೊದಲ ಹಂತದಲ್ಲಿ 257 ಮಾಲೀಕರ 21284 ಚದರಡಿ ವಿಸ್ತೀರ್ಣದ ಭೂಮಿಯನ್ನು ಬಿಡಿಎ ತನ್ನ ಹೆಸರಿಗೆ ಮಾಡಿಕೊಳ್ಳುತ್ತಿವೆ.

ಬೇಗೂರು ರಸ್ತೆಯ ಸ್ವಾಮಿ ವಿವೇಕಾನಂದ ಪ್ರತಿಮೆಯಿಂದ ಸೇಂಟ್ ಫ್ರ್ಯಾನ್ಸಿಸ್ ಸ್ಕೂಲ್ ವರೆಗೆ ರಸ್ತೆ ಅಗಲೀಕರಣ ಮಾಡಲಾಗುತ್ತದೆ. ಒಂದು ತಿಂಗಳುಗಳ ಕಾಲ ಡಾಟಾವನ್ನು ಸಂಗ್ರಹಿಸಲಾಗುತ್ತದೆ. ಭೂ ಮಾಲೀಕರಿಗೆ ಈ ಕುರಿತು ಮಾಹಿತಿ ನೀಡಲಾಗಿದೆ.
ಈಗಾಗಲೇ ನಗರದಲ್ಲಿ ಹಲವು ಕಡೆ ರಸ್ತೆ ಮರು ಡಾಮಬರೀಕರಣ ಹಾಗೂ ವೈಟ್ ಟಾಪಿಂಗ್ ಕಾಮಗಾರಿಯನ್ನು ಬಿಬಿಎಂಪಿ ಕೈಗೆತ್ತಿಕೊಂಡಿದೆ. ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆ, ಸಿರ್ಸಿ ವೃತ್ತ ಮೇಲ್ಸೇತುವೆಯಲ್ಲಿ ಮರು ಡಾಮಬರೀಕರಣ ಕಾಮಗಾರಿ ನಡೆಯುತ್ತಿದೆ.












Click it and Unblock the Notifications