ಬೆಂಗಳೂರಿನ ರಸ್ತೆಗಳಲ್ಲಿ ಬಿಬಿಎಂಪಿಯಿಂದ ಬೃಹತ್ ಕಾರ್ಯಾಚರಣೆ, ಉದ್ದೇಶವೇನು
ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆಗೆ ಬೃಹತ್ ಬೆಂಗಳೂರು ಮಹಾನಗರ (ಬಿಬಿಎಂಪಿ) ಪಾಲಿಕೆ ಮುಂದಾಗಿದ್ದು, ಬೃಹತ್ ಕಾರ್ಯಾಚರಣೆ ನಡೆಸುತ್ತಿದೆ. ಬೆಂಗಳೂರಿನ ರಸ್ತೆಗಳಲ್ಲಿ ಜನ ಓಡಾಡುವುದಕ್ಕೆ ಕಷ್ಟವಾಗುತ್ತಿದೆ. ಕೆಲವರು ಉದ್ದೇಶಪೂರ್ವಕವಾಗಿ ಜನ ಓಡಾಡುವ ಜಾಗಗಳನ್ನು ಒತ್ತುವರಿ ಮಾಡಿಕೊಂಡು ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ಇದೀಗ ಬೆಂಗಳೂರಿನಾದ್ಯಂತ ಈ ಸಮಸ್ಯೆಯನ್ನು ಪರಿಹರಿಸುವುದಕ್ಕೆ ಪಾಲಿಕೆಯ ಅಧಿಕಾರಿಗಳು ಮುಂದಾಗಿದ್ದು ಫೀಲ್ಡ್‌ಗೆ ಇಳಿದಿದ್ದಾರೆ. ಬೆಂಗಳೂರಿನಲ್ಲಿ ಜನ ಆರಾಮಾಗಿ ನಡೆದಾಡುವಂತೆ ಅನುಕೂಲ ಮಾಡಿಕೊಡುವುದಕ್ಕೆ ಬಿಬಿಎಂಪಿ ಕಾರ್ಯಾಚರಣೆ ಶುರು ಮಾಡಿದೆ.
ಪಾದಚಾರಿ ಮಾರ್ಗದಲ್ಲಿ ಜನ ನಡೆದಾಡಲು ಜಾಗ ಇದ್ದರೂ ಕೆಲವರು ಒತ್ತುವರಿ ಮಾಡಿಕೊಂಡು ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ಪಾದಚಾರಿ ಮಾರ್ಗದಲ್ಲಿ ಜಾಗ ಇಲ್ಲದೆ ಜನ ಬೀದಿಗೆ ಬರುತ್ತಿದ್ದು, ಬೀದಿಯಲ್ಲಿ ವಾಹನ ಸವಾರರು ಹಾಗೂ ನಡೆದುಕೊಂಡು ಹೋಗುವವರು ಇಬ್ಬರಿಗೂ ಸಮಸ್ಯೆ ಆಗುತ್ತಿದೆ. ಹೀಗಾಗಿ, ಪಾದಚಾರಿ ಮಾರ್ಗದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಗೆ ಆದ್ಯತೆ ನೀಡಲಾಗುತ್ತಿದೆ. ಇದರ ಭಾಗವಾಗಿ ಬಿಬಿಎಂಪಿಯು ಬೊಮ್ಮನಹಳ್ಳಿ ಹಾಗೂ ದಕ್ಷಿಣ ವಲಯಗಳಲ್ಲಿ ಬೃಹತ್ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಮಾಡಿದೆ.

ಶುಕ್ರವಾರ (ಡಿಸೆಂಬರ್ 13ಕ್ಕೆ) ಬೆಂಗಳೂರಿನ ದಕ್ಷಿಣ ಹಾಗೂ ಬೊಮ್ಮನಹಳ್ಳಿ ವಲಯಗಳಲ್ಲಿ ಬೃಹತ್ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಬಿಬಿಎಂಪಿಯ ವಲಯ ಆಯುಕ್ತರು ಹಾಗೂ ವಲಯ ಜಂಟಿ ಆಯುಕ್ತರ ನಿರ್ದೇಶನದಂತೆ ಈ ಕಾರ್ಯಾಚರಣೆ ನಡೆಸಿರುವುದಾಗಿ ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಎರಡು ಪ್ರಮುಖ ವಲಯಗಳ ವಿವಿಧ ಸ್ಥಳಗಳಲ್ಲಿ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಿಕೊಂಡು ಸಾರ್ವಜನಿಕರು ನಡೆದಾಡುವುದಕ್ಕೆ ಸಮಸ್ಯೆ ಆಗುತ್ತಿತ್ತು. ಈ ಹಿನ್ನೆಲೆಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿರುವುದಾಗಿ ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನು ಮುಂದಿನ ದಿನಗಳಲ್ಲಿ ಪಾದಚಾರಿ ಮಾರ್ಗದಲ್ಲಿರುವ ಅಂಗಡಿಗಳು ಹಾಗೂ ಬೀದಿಬದಿ ವ್ಯಾಪಾರಿಗಳು ಅಕ್ರಮವಾಗಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪಾಲಿಕೆಯಿಂದ ಮುಂದುವರಿಸುವುದಾಗಿ ಹೇಳಲಾಗಿದೆ. ಪಾಲಿಕೆ ದಕ್ಷಿಣ ವಲಯದ ಚೋಳರಪಾಳ್ಯ ವ್ಯಾಪ್ತಿಯಲ್ಲಿನ ಮಾಗಡಿ ಮುಖ್ಯರಸ್ತೆ ಹಾಗೂ ಬೊಮ್ಮನಹಳ್ಳಿ ವಲಯದ ಜಂಬೂ ಸವಾರಿ ದಿಣ್ಣೆ ಮುಖ್ಯರಸ್ತೆಯಲ್ಲಿದ್ದ ಪಾದಚಾರಿ ಮಾರ್ಗ ಒತ್ತುವರಿಗಳನ್ನು ತೆರವು ಮಾಡಲಾಗಿದೆ.

ಈ ಸಂದರ್ಭದಲ್ಲಿ ಈ ಪಾದಚಾರಿ ಮಾರ್ಗಗಳಲ್ಲಿ ಹಾಕಲಾಗಿದ್ದ ಜಾಹೀರಾತು ಫಲಕಗಳು, ಬೆಂಚುಗಳು, ಪೆಟ್ಟಿಗೆಗಳನ್ನು ತೆರವುಗೊಳಿಸಿ ಪಾದಚಾರಿಗಳು ನಡೆದಾಡುವುದಕ್ಕೆ ದಾರಿ ಮಾಡಲಾಗಿದೆ. ತೆರವುಗೊಳಿಸಿದ ವಸ್ತುಗಳನ್ನು ಪಾಲಿಕೆ ವಶಕ್ಕೆ ಪಡೆದು ಮತ್ತೆ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡದಂತೆ ಕಟ್ಟೆಚ್ಚರಿಕೆಗಳನ್ನು ನೀಡಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೊಮ್ಮನಹಳ್ಳಿ ವಲಯದಲ್ಲಿ ಹೂಳು ತೆರವು: ಇನ್ನು ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ವಸಂತಪುರ ವಾರ್ಡ್ ವ್ಯಾಪ್ತಿಯಲ್ಲಿ ಪಿ.ಎನ್.ಬಿ. ಬಡಾವಣೆ ಹಾಗೂ ವಿಠ್ಠಲ ನಗರ ಬಡಾವಣೆಗಳ ಚರಂಡಿಗಳ ಸ್ವಚ್ಛತಾ ಕಾರ್ಯ ನಡೆದಿದೆ. ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡುವ ಉದ್ದೇಶದಿಂದ ಚರಂಡಿಗಳಲ್ಲಿ ತುಂಬಿದ್ದ ಹೂಳನ್ನು ತೆಗೆಯಲಾಗಿದೆ. ಈ ಭಾಗದಲ್ಲಿನ ಚರಂಡಿಗಳಲ್ಲಿ ಹೂಳು ತುಂಬಿಕೊಂಡು ಸಮಸ್ಯೆ ಆಗುತ್ತಿತ್ತು.
-
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications