32 ಕೋಟಿ ರೂ ತೆರಿಗೆ ಪಾವತಿಸದ ಮಂತ್ರಿಮಾಲ್ಗೆ ಬೀಗ
ಬೆಂಗಳೂರು,ಫೆಬ್ರವರಿ 25:32 ಕೋಟಿ ರೂ ತೆರಿಗೆ ಪಾವತಿಸದ ಮಂತ್ರಿ ಮಾಲ್ ವಿರುದ್ಧ ಬಿಬಿಎಂಪಿ ಕ್ರಮ ಕೈಗೊಂಡಿದ್ದು, ಮಂತ್ರಿ ಮಾಲ್ಗೆ ಬೀಗ ಹಾಕಿದೆ.
ಕಳೆದ ಮೂರು ವರ್ಷಗಳಿಂದ ಬಿಬಿಎಂಪಿಗೆ ಮಂತ್ರಿಮಾಲ್ ತೆರಿಗೆ ಪಾವತಿಸಿಲ್ಲ, ಹಲವು ಬಾರಿ ಎಚ್ಚರಿಕೆ ನೀಡಿದ್ದರೂ, ನೋಟಿಸ್ ನೀಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ, ಹೀಗಾಗಿ ಅಧಿಕಾರಿಗಳು ಖುದ್ದಾಗಿ ತೆರಳಿ ಮಾಲ್ಗೆ ಬೀಗ ಹಾಕಿದ್ದಾರೆ.
ಮಂತ್ರಿ ಮಾಲ್ ಮಾಲೀಕರು ಆಸ್ತಿ ತೆರಿಗೆ ಪಾವತಿಗಾಗಿ 15 ದಿನಗಳ ಕಾಲಾವಕಾಶ ಕೇಳಿದ್ದರು, ಅದರಂತೆ ನೋಟಿಸ್ ನೀಡಿ 15 ದಿನಗಳು ಕಳೆದ ಕಾರಣ ಪಶ್ಚಿಮ ವಿಭಾಗದ ತೆರಿಗೆ ಅಧಿಕಾರಿಗಳು ಮಾಲ್ ಸಿಬ್ಬಂದಿಯನ್ನು ಹೊರಗೆ ಕರೆದು ಬೀಗ ಹಾಕಿದ್ದು,ಮಾರ್ಚ್ 1 ರವರೆಗೆ ಅವಕಾಶವಿದ್ದು, ತೆರಿಗೆ ಕಟ್ಟದೇ ಹೋದರೆ ಮಾಲ್ನ್ನು ಬಿಬಿಎಂಪಿ ವಶಪಡಿಸಿಕೊಳ್ಳುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಮೊದಲು ಮಾಲ್ ಮಾಲೀಕರು 10 ಕೋಟಿ ರೂ ಚೆಕ್ ನೀಡಿದ್ದರು, ಆದರೆ ಅದು ಬೌನ್ಸ್ ಆಗಿರುವುದರಿಂದಾಗಿ ಪಾಲಿಕೆ ಕಾನೂನು ಕೋಶದ ಶಿಫಾರಸ್ಸಿನ ಮೇರೆಗೆ ಬೀಗ ಹಾಕಿದೆ.
ಈ ಕುರಿತು ಬಿಬಿಎಂಪಿ ಕಂದಾಯಾಧಿಕಾರಿ ಪ್ರಸನ್ನ ಕುಮಾರ್ ಮಾಹಿತಿ ನೀಡಿದ್ದು, ತೆರಿಗೆ ಕಟ್ಟದೆ 32 ಕೋಟಿ ರೂ ಬಾಕಿ ಉಳಿಸಿಕೊಂಡಿದೆ. ಈ ಹಿಂದೆ ತೆರಿಗೆ ಪಾವತಿಸುವಂತೆ ಬಿಬಿಎಂಪಿ ನೋಟಿಸ್ ಜಾರಿಗೊಳಿಸಿತ್ತು, ಆದರೂ ಎಚ್ಚೆತ್ತುಕೊಳ್ಳದ ಕಾರಣ ಮಾಲ್ಗೆ ಬೀಗ ಹಾಕಿದ್ದೇವೆ ಎಂದು ಹೇಳಿದ್ದಾರೆ.
Recommended Video
-
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications